ಚುನಾವಣೆ ವೇಳೆ ಕೊಟ್ಟ ಮಾತಿನಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಯಿಂದ ಬಡವರಿಗೆ ತುಂಬಾ ಅನುಕೂಲವಾಗಿದೆ ಎಂದು ಶಾಸಕ, ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ ಎಸ್ ನಾಡಗೌಡ(ಅಪ್ಪಾಜಿ) ಅಭಿಪ್ರಾಯ ವ್ಯಕ್ತಪಡಿಸಿದರು.
ವಿಜಯಪುರ ಜಿಲ್ಲೆ ತಾಳಿಕೋಟೆ ಪಟ್ಟಣದ ತಾಲೂಕು ಪಂಚಾಯತಿ ಕಚೇರಿ ಆವರಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಮತ್ತು ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷ ಸಂಗಮೇಶ ದೇಸಾಯಿ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.
“ಗ್ಯಾರಂಟಿ ಯೋಜನೆಗಳಿಂದ ಜನರ ಕೈಯಲ್ಲಿ ಹಣ ಓಡಾಡುತ್ತಿದೆ. ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆಯಿಂದ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆ ಜತೆಗೆ ಕೆಲಸ ಕಾರ್ಯಗಳಿಗೆ ತೆರಳಲು ಅನುಕೂಲವಾಗಿದೆ. ಯೋಜನೆಯು ಸಮರ್ಪಕವಾಗಿ ಜನರಿಗೆ ಮುಟ್ಟಲಿ ಎಂಬ ಉದ್ದೇಶದಿಂದ ತಾಲೂಕು ಕೇಂದ್ರಗಳಲ್ಲಿಯೂ ಸರ್ಕಾರ ಕಚೇರಿ ಆರಂಭಿಸಿದೆ. ಇದಕ್ಕೆ ಅಧಿಕಾರಿಗಳು, ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಯೋಜನೆಯ ಬಗ್ಗೆ ಜನರಿಗೆ ತಿಳಿ ಹೇಳಬೇಕು” ಎಂದು ಹೇಳಿದರು.
ಜಿಲ್ಲಾ ಘಟಕದ ಅಧ್ಯಕ್ಷ ಇಲಿಯಾಸ ಭೋರಮಣಿ, ಜಿಲ್ಲಾವಾರು ಮತ್ತು ತಾಲೂಕುವಾರು ಗ್ಯಾರಂಟಿ ಯೋಜನೆಯ ಲಾಭ ಪಡೆಯುತ್ತಿರುವವರ ಸಂಖ್ಯೆಗಳನ್ನು ವಿವರಿಸಿದರು.
ಈ ಸಮಯದಲ್ಲಿ ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಇಲಿಯಾಸ್ ಭೋರಮಣಿ ಮತ್ತು ತಾಲೂಕು ಅಧ್ಯಕ್ಷ ಸಂಗಮೇಶ ದೇಸಾಯಿಯನ್ನು ಶಾಸಕ ನಾಡಗೌಡ ಸನ್ಮಾನಿಸಿ ಗೌರವಿಸಿದರು.
ಈ ಸುದ್ದಿ ಓದಿದ್ದೀರಾ? ಕೊಡಗು | ಮಾದರಿ ಕಲಿಕಾ ಕೇಂದ್ರವಾಗಿರುವ ಕಬಡಕೇರಿ ಅಂಗನವಾಡಿ
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಬಿ ಎಸ್ ಪಾಟೀಲ(ಯಾಳಗಿ), ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ ಬಿ ಅಸ್ಕಿ, ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಸಿದ್ದನಗೌಡ ಪಾಟೀಲ(ನಾವದಗಿ), ಕಾರ್ಯದರ್ಶಿ ವಿಜಯಸಿಂಗ್ ಹಜೇರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೆಹಬೂಬ್ ಬೋರಗಸ್ತಿ, ಪ್ರಭುಗೌಡ ಮದರಕಲ್ಲ, ಪರಶುರಾಮ ತಂಗಡಗಿ, ಅಕ್ಕಮಹಾದೇವಿ ಕಟ್ಟಿಮನಿ, ಸಂಗನಗೌಡ ಪಾಟೀಲ(ಮಿಣ ಜಗಿ), ನೀಲಮ್ಮ ಪಾಟೀಲ, ಫಯಾಜ ಉತ್ಪಾಳ, ಸಂಗನಗೌಡ ಅಸ್ತಿ, ಕಾಸೀಂ ಪಟೇಲ ಪಾಟೀಲ, ಶೌಕತ್ ಲಾಹೋರಿ, ಗೋಪಾಲ ಕಟ್ಟಿಮನಿ, ಮೋದಿನಸಾ ನಗಾರ್ಚಿ, ಆಸೀಫ್ ಕೆಂಬಾವಿ, ಸದ್ದಾಂ ಕುಂಟೋಜಿ, ಶಿವರಾಜ ನಾಗೂರ, ತಾಪಂ ಇಒ ನಿಂಗಪ್ಪ ಮಸಳಿ ಹಾಗೂ ತಾಲೂಕಿನ ಗ್ರಾಪಂಗಳ ಅಭಿವೃದ್ಧಿ ಅಧಿಕಾರಿಗಳು ಇದ್ದರು.