ವಿಜಯಪುರ | ಶೆಡ್​ ತೆರವುಗೊಳಿಸದಂತೆ ಅಧಿಕಾರಿಯ ಕಾಲು ಹಿಡಿದು ಗೋಳಾಡಿದ ವಿಶೇಷ ಚೇತನ

Date:

Advertisements
  • ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ನಡೆದ ಘಟನೆ
  • ಸ್ವಯಂ ತೆರವು ಮಾಡುವಂತೆ ಸೂಚನೆ ನೀಡಿದ ಅಧಿಕಾರಿಗಳು

ಸರ್ಕಾರಿ ಜಾಗದಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಶೆಡ್‌ಗಳನ್ನು ತೆರವುಗೊಳಿಸಲು ಮುಂದಾದ ವೇಳೆ ವಿಶೇಷ ಚೇತನ ವ್ಯಕ್ತಿಯೊಬ್ಬರು ಅಧಿಕಾರಿಯ ಕಾಲು ಹಿಡಿದು ಗೋಳಾಡಿದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಕಾಲು ಹಿಡಿದು ಕಣ್ಣೀರಿಡುತ್ತಿರುವ ದೃಶ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ಕೊಲ್ಹಾರ ಪಟ್ಟಣದಲ್ಲಿರುವ ಸರಕಾರಿ ಜಾಗವನ್ನು ಒತ್ತುವರಿ ಮಾಡಿ, ಅನಧಿಕೃತ ಶೆಡ್‌ ನಿರ್ಮಾಣ ಮಾಡಿದ್ದನ್ನು ಕೊಲ್ಹಾರ ಪಟ್ಟಣ ಪಂಚಾಯತ ಅಧಿಕಾರಿಗಳು ತೆರವು ಮಾಡಲು ಮುಂದಾಗಿದ್ದರು. ಈ ವೇಳೆ ಶೆಡ್‌ನಲ್ಲಿದ್ದ ಜನರು ಮತ್ತು ಅಧಿಕಾರಿಗಳ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಕೆಲ ಕಾಲ ಗೊಂದಲದ ವಾತಾವರಣ ಕೂಡ ನಿರ್ಮಾಣವಾಗಿತ್ತು.

Advertisements

ಈ ನಡುವೆಯೇ ಪ.ಪಂ.ಮುಖ್ಯಾಧಿಕಾರಿ ವೀರೇಶ್ ಹಟ್ಟಿ ಅವರ ಕಾಲಿಗೆ ಬಿದ್ದ ವಿಶೇಷ ಚೇತನ ವ್ಯಕ್ತಿಯೊಬ್ಬರು, ‘ಶೆಡ್ ತೆರವು ಮಾಡಿದರೆ ನಾವು ಎಲ್ಲಿಗೆ ಹೋಗೋದು. ದಯವಿಟ್ಟು ಶೆಡ್​ಗಳನ್ನ ತೆರವು ಮಾಡಬೇಡಿ’ ಎಂದು ಕಣ್ಣೀರಿಟ್ಟರು.

ಆ ಬಳಿಕ ಶೆಡ್‌ನಲ್ಲಿರುವವರೊಂದಿಗೆ ಮಾತುಕತೆ ನಡೆಸಿದ ಅಧಿಕಾರಿಗಳು, ಒತ್ತುವರಿ ಮಾಡಿಕೊಂಡ ಜಾಗ ಸ್ವಯಂ ತೆರವು ಮಾಡುವಂತೆ ಸೂಚನೆ ನೀಡಿ, ಸಮಯಾವಕಾಶ ನೀಡಿದ್ದಾರೆ.

ಕೊಲ್ಹಾರ ಪಟ್ಟಣ ಪಂಚಾಯತಿಯ ವಾರ್ಡ್ ನಂಬರ್ 13, 14 ರ ಈದ್ಗಾ ಮೈದಾನದ ಹತ್ತಿರವಿರುವ ಜಮೀನು ಒತ್ತುವರಿಯಾಗಿದ್ದ ಹಿನ್ನೆಲೆಯಲ್ಲಿ ತೆರವುಗೊಳಿಸಲು ಅಧಿಕಾರಿಗಳು ಮುಂದಾಗಿದ್ದರು. ವಿಶೇಷ ಚೇತನ ವ್ಯಕ್ತಿಯ ಗೋಳಾಟದ ಬಳಿಕ ಸ್ವಯಂ ತೆರವು ಮಾಡುವಂತೆ ಅಧಿಕಾರಿಗಳು ಸೂಚನೆ ನೀಡಿದರು ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X