ವಿಜಯಪುರ | ಶಾಲೆಗೆ ಹೋಗುವಾಗ ಪುಢಾರಿಗಳ ಕಿರುಕುಳ; ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

Date:

ಶಾಲೆಗೆ ತೆರಳುವ ದಾರಿಯಲ್ಲಿ ಪುಢಾರಿಗಳ ಕಿರುಕುಳ ತಾಳದೆ ಮನನೊಂದ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜೆಲ್ಲೆ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿ ನಡೆದಿದೆ.

- Advertisement -

ಸಂಗಮೇಶ ಜುಂಜಾವರ ಎಂಬ ಯುವಕ ನಿತ್ಯ ಬಾಲಕಿಗೆ ಕಿರುಕುಳ ನೀಡುತ್ತಿದ್ದ, ಪ್ರೀತಿಸುವಂತೆ ಬೆನ್ನು ಬಿದ್ದಿದ್ದ. ಮದುವೆಗೂ ಒತ್ತಾಯಿಸಿ ಅಸಭ್ಯವಾಗಿ ವರ್ತಿಸಿ, ಮೈಕೈ ಮುಟ್ಟುತ್ತಲೇ ಕಿರುಕುಳ ನೀಡುತ್ತಿದ್ದ. ಈ ಕುರಿತು ಆರೋಪಿ ವಿರುದ್ಧ ಬಾಲಕಿ ಸೆಪ್ಟೆಂಬರ್‌ 1ರಂದೇ ಮುದ್ದೇಬಿಹಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಎಫ್ಐಆರ್ ಕೂಡಾ ದಾಖಲಾಗಿತ್ತು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಆಷ್ಟಾದರೂ ಯುವಕನಿಂದ ಕಿರುಕುಳ ಮುಂದುವರೆದಿದ್ದು, ಅದನ್ನು ತಾಳದೆ ವಿದ್ಯಾರ್ಥಿನಿ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.

“ಮೌನೇಶ ಮಾದರ, ಸಂಗಮೇಶ ಜುಂಜಾವರ ಹಾಗೂ ಚಿದಾನಂದ ಕಟ್ಟಿಮನಿ ಸೇರಿದಂತೆ 10 ರಿಂದ 12 ಮಂದಿ ಯುವಕರು ಗಾಂಜಾ ಮತ್ತಿನಲ್ಲಿರುತ್ತಿದ್ದು, ಶಾಲೆಗೆ ಹೋಗುತ್ತಿರುವ ಹುಡುಗಿಯರನ್ನು ಪೀಡಿಸುತ್ತ ನಿತ್ಯ ಹುಚ್ಚಾಟ ಪ್ರದರ್ಶಿಸುತ್ತಿದ್ದರು” ಎಂದು ಸ್ಥಳೀಯರು ಆರೋಪಿಸಿದ್ದಾರೆ.

ವಿದ್ಯಾರ್ಥಿನಿ ಆತ್ಮಹತ್ಯೆ 1 1

“ಘಟನೆಗೆ ಸಂಬಂಧಿಸಿದಂತೆ ಪುಢಾರಿಗಳು ಇನ್ನೂ ಸಾಕಷ್ಟು ಹೆಣ್ಣುಮಕ್ಕಳಿಗೆ ಕಿರುಕುಳ ನೀಡಿದ್ದಾರೆ. ಇಂತಹ ನೀಚ ಪ್ರವೃತ್ತಿಯ ಪುಢಾರಿಗಳಿಂದ ಇನ್ನಿತರ ಕುಟುಂಬಸ್ಥರು ಭಯದಲ್ಲಿದ್ದಾರೆ. ಆದ್ದರಿಂದ ಆರೋಪಿಯನ್ನು ಗಲ್ಲು ಶಿಕ್ಷೆಗೊಳಪಡಿಸಬೇಕು” ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಪೊಲೀಸರ ಭೇಟಿ ಘಟನಾ ಸ್ಥಳಕ್ಕೆ ಮುದ್ದೇಬಿಹಾಳದ ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ ಹಾಗೂ ಪಿಎಸ್‌ಐ ತಿಪ್ಪಾರೆಡ್ಡಿಯವರು ಭೇಟಿ ಮಾಹಿತಿ ಕಲೆ ಹಾಕಿದ್ದಾರೆ.

ಮುದ್ದೇಬಿಹಾಳ ಪಿಎಸ್‌ಐ ಈ ದಿನ.ಕಾಮ್‌ಗೆ ಮಾತನಾಡಿ, “ಕಿಡಿಗೇಡಿಗಳ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದವರಿಗೆ ಹುಡುಕಾಟ ನಡೆದಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಬಾಲಕಿಯರನ್ನು ಕಟ್ಟಿ ಹಾಕಿ ಕಿರುಕುಳ, ವೇಶ್ಯಾವಾಟಿಕೆಗೆ ಒತ್ತಾಯ; ಬಾಲಮಂದಿರದಲ್ಲಿ ಅಧೀಕ್ಷಕಿಯ ವಿಕೃತಿ

“ಘಟನೆಯಲ್ಲಿ 5 ಮಂದಿ ಯುವಕರಿದ್ದಾರೆ. ಈಗಾಗಲೇ ಘಾಳಪೂಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣದಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಗೆ ಬಲವಂತವಾಗಿ ತಾಳಿಕಟ್ಟಿದ್ದ. ಇದೀಗ ಆತ್ಮಹತ್ಯೆ ಮಾಡಿಕೊಂಡ ಬಾಲಕಿಯ ಪ್ರಕರಣದ ಆರೋಪಿ ಸಂಗಮೇಶ ಜುಂಜಾವರ, ಗ್ಯಾಂಗ್‌ನ ಚಿದಾನಂದ ಕಟ್ಟಿಮನಿ ಹಾಗೂ ಮೌನೇಶ ಮಾದರ ಸೇರಿದಂರೆ ಮೂವರನ್ನು ಬಂಧಿಸಲಾಗಿದೆ. ಉಳಿದವರು ತಲೆಮೆರೆಸಿಕೊಂಡಿದ್ದು, ಶೀಘ್ರವೇ ಅವರನ್ನು ವಶಕ್ಕೆ ಪಡೆದು ತನಿಖೆಗೊಳಪಡಿಸುತ್ತೇವೆ” ಎಂದು ಹೇಳಿದರು.

ಮಗಳು ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳುವ ಬದಲು ಪುಢಾರಿಗಳ ಕಿರುಕುಳಕ್ಕೆ ಪ್ರಾಣ ಬಿಟ್ಟಿದ್ದಾಳೆಂದು ಅಳುತ್ತಿರುವ ಘಟನೆಗೆ ಸುತ್ತಲ್ಲಿನ ಜನರ ಕಣ್ಣು ನೀರು ತುಂಬಿಕೊಂಡಿತು. ಮೃತ ಬಾಲಕಿಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಆತ್ಮಹತ್ಯೆ ಪರಿಹಾರವಲ್ಲ 3
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಗಾಂಧೀಜಿ ಆದರ್ಶಗಳು ಯುವಕರಿಗೆ ದಾರಿದೀಪ: ಪವನಕುಮಾರ ವಳಕೇರಿ

ಬ್ರಿಟಿಷರ ವಿರುದ್ಧ ಶಾಂತಿ, ಅಹಿಂಸೆ ಹಾಗೂ ತಾಳ್ಮೆಯ ಮಾರ್ಗದಲ್ಲಿ ಹೋರಾಡಿ ದೇಶಕ್ಕೆ...

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...