ವಿಜಯಪುರ | ದ್ವೇಷ ಭಾಷಣ; ಬಿಜೆಪಿ ಶಾಸಕರಾದ ಯತ್ನಾಳ್, ರಾಜಾಸಿಂಗ್ ವಿರುದ್ಧ ಎಫ್‌ಐಆರ್

Date:

ವಿಜಯಪುರದಲ್ಲಿ ನಡೆದ ಮಾ.4ರಂದು ಆಯೋಜಿಸಲಾಗಿದ್ದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಪ್ರಚೋದನಾಕಾರಿ ಹಾಗೂ ದ್ವೇಷ ಭಾಷಣ ಮಾಡಿರುವ ಆರೋಪದ ಮೇಲೆ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಹಾಗೂ ತೆಲಂಗಾಣದ ಗೋಶಾಮಹಲ್ ಬಿಜೆಪಿ ಶಾಸಕ ಟಿ. ರಾಜಾಸಿಂಗ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

- Advertisement -

ದ್ವೇಷ ಭಾಷಣ ಮಾಡಿರುವ ಹಿನ್ನೆಲೆಯಲ್ಲಿ ಸ್ಥಳೀಯ ಸಾಮಾಜಿಕ ಕಾರ್ಯಕರ್ತರೋವರು ವಿಜಯಪುರದ ಗಾಂಧಿ ಚೌಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮಾರ್ಚ್ 4ರಂದು ವಿಜಯಪುರ ನಗರದ ಶಿವಾಜಿ ಸರ್ಕಲ್‌‌ನಲ್ಲಿ ನಡೆದಿದ್ದ ಛತ್ರಪತಿ ಶಿವಾಜಿ ಜಯಂತಿ ವೇಳೆ ಕೋಮುಗಳ ನಡುವೆ ದ್ವೇಷ ಹರಡುವಂತೆ ಉದ್ರೇಕಕಾರಿ ಭಾಷಣಗೈದಿದ್ದಾರೆ. ಹಾಗಾಗಿ, ಪ್ರಕರಣ ದಾಖಲಿಸಿ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಆಗ್ನೇಯ ಪದವೀಧರ ಕ್ಷೇತ್ರ: ಕಾಂಗ್ರೆಸ್-ಬಿಜೆಪಿ ನಡುವೆ ಬಿರುಸಿನ ಸ್ಪರ್ಧೆ!

ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಕಾವು ಪಡೆದುಕೊಂಡಿದ್ದು, ಬಿಜೆಪಿ–ಜೆಡಿಎಸ್ ಮೈತ್ರಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿಯ ವಾತಾವರಣ ನಿರ್ಮಾಣವಾಗಿದೆ. ಕಾಂಗ್ರೆಸ್‌ನಿಂದ ಶಶಿ ಹುಲಿಕುಂಟೆಮಠ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ...

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಈ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿರುವ ಗಾಂಧಿ ಚೌಕ್ ಪೊಲೀಸರು, ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಕಲಂ: 153, 506, 504, 505(2) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶಿವಾಜಿಯವರು ಯಾರನ್ನೂ ಧರ್ಮದ ಆಧಾರದಲ್ಲಿ ಪ್ರತ್ಯೇಕಿಸಿರಲಿಲ್ಲ: ಭಾರತ್ ಸೌಹಾರ್ದ ಮಂಚ್

ದ್ವೇಷ ಭಾಷಣ ಮಾಡಿರುವ ಬಿಜೆಪಿ ಶಾಸಕ ಯತ್ನಾಳ್, ರಾಜಾಸಿಂಗ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ವಿಜಯಪುರದ ಭಾರತ್ ಸೌಹಾರ್ದ ಮಂಚ್, “ಛತ್ರಪತಿ ಶಿವಾಜಿ ಮಹಾರಾಜರು ಹಿಂದೂ-ಮುಸ್ಲಿಂ ಎಂದು ಪ್ರತ್ಯೇಕಿಸುವ ಕೆಲಸ ಮಾಡಿರಲಿಲ್ಲ. ಶಿವಾಜಿಯವರನ್ನು ಮತೀಯವಾದಿ ಎಂಬಂತೆ ಬಿಂಬಿಸಲಾಗುತ್ತಿದೆ. ಇದು ಖಂಡನೀಯ. ಹೀಗಾಗಿ ದೂರು ನೀಡಿದ್ದೇವೆ. ಎಫ್‌ಐಆರ್ ಕೂಡ ದಾಖಲಾಗಿದೆ. ಪ್ರಚೋದನಾಕಾರಿ ಭಾಷಣಗೈದಿರುವ ಇಬ್ಬರನ್ನೂ ಕೂಡಲೇ ಬಂಧಿಸಬೇಕು. ಸುಪ್ರೀಂ ಕೋರ್ಟಿನ ಆದೇಶದನ್ವಯ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಭಿಮಾನಿಗಳ ಆಸೆಯಂತೆ ದಸರೆಗೆ ಮರಳಿದ ಅಭಿಮನ್ಯು

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಕೊಡಗಿನ ಮತ್ತಿಗೋಡು ಆನೆ ಶಿಬಿರದಿಂದ ಅಭಿಮನ್ಯು...

ದೆಹಲಿಯಲ್ಲಿ ಪತ್ರಕರ್ತೆಯರ ಮೇಲೆ ಪೊಲೀಸ್ ದೌರ್ಜನ್ಯ: ಕ್ರಮಕ್ಕೆ ಶಿವಮೊಗ್ಗ ಕಾನಿಪಸ ಆಗ್ರಹ

ದೆಹಲಿಯ ಜಂತರ್‌ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತರ ರಾಜಿನಾಮೆಗೆ ಆಗ್ರಹಿಸಿ ನಡೆಯುತ್ತಿರುವ...

ತೀರ್ಥಹಳ್ಳಿ | ಮತಪಟ್ಟಿಯಿಂದ ಮುಸ್ಲಿಮರ ಹೆಸರು ಅಳಿಸಲು ಬಿಜೆಪಿ ಸಂಚು? ತಹಶೀಲ್ದಾರ್‌ಗೆ ಪತ್ರ ಬರೆದಿದ್ದ ಬಿಜೆಪಿ ಮುಖಂಡ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ರೋಗಿಗಳನ್ನು ಗ್ರಾಹಕರಂತೆ ಕಾಣದೆ ಮನೆಯ ಸದಸ್ಯರಂತೆ ಉಪಚರಿಸುವ ಚಿತ್ರಕೂಟ: ಡಾ. ಪ್ರದೀಪ್

ರೋಗಿಗಳನ್ನು ಗ್ರಾಹಕರಂತೆ ಕಾಣದೆ ಮನೆಯ ಸದಸ್ಯರಂತೆ ಅಕ್ಕರೆಯಿಂದ ಉಪಚರಿಸುವ ಅಪರೂಪದ ವಾತಾವರಣ...