ವಿಜಯಪುರ | ಶೋಷಿತರನ್ನು ಶೋಷಣೆಯಿಂದ ಮುಕ್ತಗೊಳಿಸುವುದು ಜನಪರ ಚಳವಳಿಗಾರರ ಜವಾಬ್ದಾರಿ: ಡಾ. ಭೀಮಪ್ಪ

Date:

Advertisements

ಮೂಢನಂಬಿಕೆಗೆ ಬಲಿಯಾಗಿ ಶೋಷಣೆಗೆ ಒಳಗಾಗುತ್ತಿರುವ ಬಹುಸಂಖ್ಯಾತ ಬಡವರು ಮತ್ತು ಕೆಳವರ್ಗದ ಜನರನ್ನು ಶೋಷಣೆಯಿಂದ ಮುಕ್ತಗೊಳಿಸುವ ಜವಾಬ್ದಾರಿ ಜನಪರ ಚಳವಳಿಗಾರರ ಮೇಲಿದೆ. ಆ ನಿಟ್ಟಿನಲ್ಲಿ ಜನಪರ ಗಾಯಕರು ಮತ್ತಷ್ಟು ಕೆಲಸ ಮಾಡಬೇಕು ಎಂದು ಕೃಷಿ ಮಹಾವಿದ್ಯಾಲಯದ ವಿದ್ಯಾಧಿಕಾರಿ ಡಾ. ಭೀಮಪ್ಪ ಎ. ಹೇಳಿದರು.

ವಿಜಯಪುರ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ಮೇ ಸಾಹಿತ್ಯ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ಹೋರಾಟ ಹಾಡುಗಳ ತರಬೇತಿ ಶಿಬಿರವನ್ನು ತಮಟೆ ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾನತಾ ಚಳುವಳಿಯ ಬಹುಮುಖ್ಯ ಭಾಗವಾಗಿ ಸಮಾಜದಲ್ಲಿ ವೈಚಾರಿಕ ಜಾಗೃತಿ ಮೂಡಿಸುವಲ್ಲಿ ಜನಪರ ಗಾಯಕರು, ಹೋರಾಟದ ಹಾಡುಗಾರರು ಬಹುದೊಡ್ಡ ಕೆಲಸ ಮಾಡುತ್ತಿದ್ದಾರೆ ಎಂದು ಭೀಮಪ್ಪ ಹೇಳಿದರು.

Advertisements

ಬಸವ ಧರ್ಮ ಚಿಂತಕರಾದ ಡಾ. ಜೆ.ಎಸ್. ಪಾಟೀಲ್ ಮಾತನಾಡಿ, ಬುದ್ಧ-ಬಸವ-ಅಂಬೇಡ್ಕರ್ ಅವರು ಸಮಾನತೆಗಾಗಿ ಸಂಘರ್ಷ ಮಾಡಿದ್ದಾರೆ. ಸಂವಿಧಾನ ಜಾರಿಯಾಗಿ ೭೫ ವರ್ಷಗಳ ನಂತರವೂ ಲಿಂಗ ತಾರತಮ್ಯ, ಅಸ್ಪೃಶ್ಯತೆ ಆಚರಣೆ ಅಬಾಧಿತವಾಗಿ ನಡೆದಿದೆ. ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆಯುತ್ತಿವೆ. ಶೋಷಣೆಮುಕ್ತ ಸಮಾಜ ನಿರ್ಮಾಣಕ್ಕಾಗಿ ಜನಪರ ಹೋರಾಟಗಾರರು, ಹಾಡುಗಾರರು ಹೆಚ್ಚು ಹೆಚ್ಚು ಕೆಲಸ ಮಾಡಬೇಕಿದೆ ಎಂದರು.

ವಿಜಯಪುರ

ಕೃಷಿ ತರಬೇತಿ ಕೇಂದ್ರದ ಮುಖ್ಯಸ್ಥರಾದ ಬಾಲರಾಜ ಬಿರಾದಾರ ಅವರು ಮಾತನಾಡಿ, ಶತಮಾನಗಳಿಂದ ನಡೆದುಕೊಂಡು ಬಂದಿರುವ ಅಸ್ಪೃಶ್ಯತೆ ಆಚರಣೆ ಇವತ್ತು ಕಡಿಮೆಯಾಗಿದೆ ಎನಿಸಿದರೂ ಗ್ರಾಮೀಣ ಭಾಗದಲ್ಲಿ ಅದು ಜೀವಂತವಿದೆ. ಸಾಮಾಜಿಕ ಸಮಾನತ ತರುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಚಿಂತಿಸುವ ಅಗತ್ಯವಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಪಾದರ್ ಟಿಯೋಲ್ ಮಾತನಾಡಿ, ಹವು ಜಾತಿಗಳಲ್ಲಿ ಹಂಚಿಹೋಗಿರುವ ಸಮಾಜದಲ್ಲಿ ಐಕ್ಯತೆ ಮೂಡಿಸುವ ದಿಸೆಯಲ್ಲಿ ಅನೇಕ ಮಹಾತ್ಮರು ಶ್ರಮಿಸಿ ಹೋಗಿದ್ದಾರೆ. ಸಂವಿಧಾನದ ಆಶಯದಂತೆ ಜಾತಿಮುಕ್ತ ಸಮಾಜದ ನಿರ್ಮಾಣಕ್ಕಾಗಿ ಅನೇಕ ಚಿಂತಕರು, ಕಲಾವಿದರು, ಹಾಡುಗಾರರು ಈಗಲೂ ಶ್ರಮಿಸುತ್ತಲೇ ಇದ್ದಾರೆ. ಸೌಹಾರ್ದ ಸಮಾಜಕ್ಕೆ ಮರುಸ್ಥಾಪನೆಗೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಹೇಳಿದರು.

ಇದನ್ನು ಓದಿದ್ದೀರಾ? ಮಂಗಳೂರು | ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ಬಳಿ ಹೊತ್ತಿ ಉರಿದ ಬಿಎಂಡಬ್ಲ್ಯೂ ಕಾರು

ಶಿಬಿರ ನಿರ್ದೇಶಕರಾಗಿ ಆಗಮಿಸಿರುವ ಮೈಸೂರಿನ ಸಂಪನ್ಮೂಲ ವ್ಯಕ್ತಿ ಡಾ. ಎಂ. ಯೇಸುದಾಸ ಅವರು ಕ್ರಾಂತಿಗೀತೆ ಹಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.

ದಲಿತ ಮುಖಂಡರು ಹಾಗೂ ನ್ಯಾಯವಾದಿ ನಾಗರಾಜ ಲಂಬು, ಸಮಾಜ ಸೇವಕ ಫಯಾಜ ಕಲಾದಗಿ, ಕೃಷಿ ವಿಜ್ಙಾನಿ ಡಾ. ರವೀಂಧ್ರ ಬೆಳ್ಳಿ ವೇದಿಕೆಯಲ್ಲಿದ್ದರು. ಪ್ರಭುಗೌಡ ಪಾಟೀಲ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಚೆನ್ನು ಕಟ್ಟಿಮನಿ ವಂದಿಸಿದರು. ಅನಿಲ ಹೊಸಮನಿ, ಮೋಹನ ಕಟ್ಟಿಮನಿ ಮತ್ತಿತರರು ಇದ್ದರು.

ನಂತರ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಲಡಾಯಿ ಪ್ರಕಾಶನದ ಬಸವರಾಜ ಸೂಳಿಬಾವಿ, ಸಂಪನ್ಮೂಲ ವ್ಯಕ್ತಿಗಳಾದ ಶಂಬಯ್ಯ ಹಿರೇಮಠ, ಶಂಕ್ರಣ್ಣ ಸಂಕಣ್ಣವರ, ಡಾ. ಯೇಸುದಾಸ್, ಬಸವರಾಜ ಸೂಳಿಬಾವಿ ಶಿಬಿರದ ಉದ್ದೇಶಗಳನ್ನು ತಿಳಿಸಿದರು. ಸೆ. 29ರಂದು ಸಂಜೆ ಶಿಬಿರ ಮುಕ್ತಾಯಗೊಳ್ಳಲಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X