ವಿಜಯಪುರ ನಗರದಲ್ಲಿರುವ ಅಕ್ಕ ಮಹಾದೇವಿ ಮಹಿಳಾ ವಿವಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಹೆಚ್ಚುವರಿ ವಸತಿ ಶುಲ್ಕ ನೀಡಬೇಕೆಂದು ಒತ್ತಾಯಿಸುತ್ತಿರುವ ವಿವಿ ಆಡಳಿತಾಧಿಕಾರಿಗಳ ವಿರುದ್ಧ ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಪ್ರಾರಂಭವಾಗಿದೆ.
“ಅಕ್ಕಮಹಾದೇವಿ ವಿಶ್ವ ವಿದ್ಯಾಲಯದ ಅಧಿಕಾರಿಗಳು ವಸತಿ ನಿಲಯ ದಾಖಲಾಗುವ ಸಮಯದಲ್ಲಿ ಕೇವಲ ₹100 ಮಾತ್ರ ಶುಲ್ಕವಿರುವುದಾಗಿ ತಿಳಿಸಿ ವಿದ್ಯಾರ್ಥಿಗಳನ್ನು ವಸತಿ ನಿಲಯಕ್ಕೆ ಪ್ರವೇಶ ಮಾಡಿಕೊಂಡಿದ್ದಾರೆ. ಎರಡು ವರ್ಷಗಳಿಂದ ಯಾವುದೇ ಶುಲ್ಕ ಕೇಳದೆ ಏಕಾಏಕಿ ಎಲ್ಲ ವರ್ಷದ ಶುಲ್ಕವನ್ನು ಒಟ್ಟಿಗೆ ತುಂಬಬೇಕೆಂದು ವಿದ್ಯಾರ್ಥಿಗಳಿಗೆ ಒತ್ತಾಯಿಸಿತ್ತಿದ್ದಾರೆ. ಜತೆಗೆ ಪದವಿ ಮುಗಿಸಿಕೊಂಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ʼಕ್ಲಿಯರೆನ್ಸ್ʼ ನೀಡುವುದಿಲ್ಲವೆಂದು ಭಯಪಡಿಸುತ್ತಿದ್ದಾರೆ” ಎಂದು ಡಿವಿಪಿ ಜಿಲ್ಲಾ ಸಂಚಾಲಕ ಅಕ್ಷಯ್ ಕುಮಾರ ಅಜಮನಿ ಆರೋಪಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಭಾರೀ ಮಳೆ; ಅವಧಿಗೂ ಮುನ್ನವೇ ಆಲಮಟ್ಟಿ ಜಲಾಶಯ ಅರ್ಧ ಭರ್ತಿ
ವಿಶ್ವ ವಿದ್ಯಾಲಯದ ಆಡಳಿತಾಧಿಕಾರಿ ಹಾಗೂ ವಸತಿ ನಿಲಯಗಳ ವಾರ್ಡನ್‌ಗಳ ವಿರುದ್ಧ ಅಕ್ಕ ಮಹಾದೇವಿ ವಿಶ್ವ ವಿದ್ಯಾಲಯದ ಎದುರು ಅನಿರ್ದಿಷ್ಟಾವಧಿ ಧರಣಿ ಕೈಗೊಳ್ಳಲಾಗಿದೆ ಎಂದರು.