ವಿಜಯಪುರ | ನೇಣು ಬಿಗಿದ ಸ್ಥಿತಿಯಲ್ಲಿ ಪತಿ-ಪತ್ನಿ ಶವ ಪತ್ತೆ; ಸಾವಿನ ಸುತ್ತ ಹಲವು ಅನುಮಾನ

Date:

ಅರೆ ನಗ್ನವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ನಿ ಹಾಗೂ ಅದೇ ಪ್ರದೇಶದ 20-30 ಮೀ. ತಗ್ಗಿನಲ್ಲಿ ಪತಿ ಬೇವಿನ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ಗೆದ್ದಲಮರಿ ಗ್ರಾಮದ ಹೊರ ವಲಯದಲ್ಲಿರುವ ಜಮೀನಿನಲ್ಲಿ ನಡೆದಿದೆ. ಘಟನೆ ಸೋಮವಾರ ರಾತ್ರಿ ನಡೆದಿದ್ದು, ಮುದ್ದೇಬಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಗೆದ್ದಲಮರಿ ಗ್ರಾಮದ ನಿವಾಸಿ ಸಿದ್ದಪ್ಪ ಮಲ್ಲಪ್ಪ ಹರನಾಳ (33), ಪತ್ನಿ ಮೇಘಾ ಉರ್ಫ್ ಮಾನವ್ವ ಸಿದ್ದಪ್ಪ ಹರನಾಳ ಶವವಾಗಿ ದೊರೆತ ದಂಪತಿಯಾಗಿದ್ದಾರೆ. 8 ವರ್ಷಗಳ ಹಿಂದೆ ಮದುವೆಯಾಗಿದ್ದ ಇವರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಸ್ಥಳದಲ್ಲಿ ಮೃತ ಮೇಘಾ ತನ್ನ ಸೀರೆಯಿಂದಲೇ ಕುತ್ತಿಗೆಗೆ ಸುತ್ತಿರುವುದು ಕಂಡು ಬಂದಿದೆ. ಕೆಲ ಮೀಟ‌ರ್ ಅಂತರದಲ್ಲಿ ಬೇವಿನ ಮರದ ಟೊಂಗೆಗೆ ಪತಿಯ ಶವ ಹಗ್ಗವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿದೆ. ವಿಷಯ ತಿಳಿದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ತನ್ನ ಅಳಿಯ ಸಿದ್ದಪ್ಪನೇ ಮೇಘಾಳನ್ನು ಕೊಲೆ ಮಾಡಿ ನಂತರ ತಾನೂ ಮರವೊಂದಕ್ಕೆ ನೇಣು ಹಾಕಿಕೊಂಡಿದ್ದಾನೆ. ಸಿದ್ದಪ್ಪನ ಸಹೋದರ ಶ್ರೀಕಾಂತ ಮಲ್ಲಪ್ಪ ಹರನಾಳ, ತಾಯಿ ಶಾಂತಮ್ಮ ಮಲ್ಲಪ್ಪ ಹರನಾಳ ಅವರ ಕಿರುಕುಳವೇ ಕೊಲೆಗೆ ಕಾರಣ ಎಂದು ಮೇಘಾಳ ತಾಯಿ ಗದ್ದೆಮ್ಮ ಬಸಪ್ಪ ಹೊಸಮನಿ ಮುದ್ದೇಬಿಹಾಳ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

WhatsApp Image 2025 03 26 at 11.56.12 AM

ದೂರಿನ ಹಿನ್ನೆಲೆ ಆರೋಪಿ ಶ್ರೀಕಾಂತನನ್ನು ಪೊಲೀಸರು ಬಂಧಿಸಿದ್ದಾರೆ. ಶಾಂತಮ್ಮ ತಲೆಮರೆಸಿಕೊಂಡಿದ್ದಾಳೆ. ಬಿಎಲ್‌ಡಿಇ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ನಂತರ ಶವಾಗಾರದಲ್ಲಿರುವ ಸಿದ್ದಪ್ಪನ ಶವವನ್ನು ಸಂಸ್ಕಾರಕ್ಕೆ ಒಯ್ಯಲು ಯಾರೂ ಇಲ್ಲದ ಕಾರಣ, ಪತ್ನಿಯ ಮನೆಯವರು ಅವನ ಶವ ಒಯ್ಯಲು ನಿರಾಕರಿಸಿದ್ದರಿಂದ ಶವಾಗಾರದಲ್ಲಿಯೇ ಸಂಜೆವರೆಗೂ ಶವ ಅನಾಥವಾಗಿತ್ತು. ಅನೈತಿಕ ಸಂಬಂಧ ಈ ಘಟನೆಗೆ ಕಾರಣ ಎನ್ನುವ ಮಾತು ಗ್ರಾಮದಲ್ಲಿ ಕೇಳಿ ಬರುತ್ತಿದೆ.

ಇದನ್ನೂ ಓದಿ: ವಿಜಯಪುರ | ಸರ್ಕಾರಿ ಪದವಿ ಕಾಲೇಜು ಮಂಜೂರಿಗೆ ದಲಿತ ವಿದ್ಯಾರ್ಥಿ ಪರಿಷತ್ತು ಆಗ್ರಹ

ಘಟನೆ ಕುರಿತು ಎಸ್‌ಪಿ ಲಕ್ಷ್ಮಣ ನಿಂಬರಗಿ ಸುದ್ದಿಗಾರರೊಂದಿಗೆ ಮಾತನಾಡಿ, “ಪತ್ನಿಯ ಶವ ತನ್ನದೇ ಸೀರೆಯಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತಿಯ ಶವ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿತ್ತು. ಮುದ್ದೇಬಿಹಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸಾವಿಗೆ ನಿಖರ ಕಾರಣ ತನಿಖೆ ನಂತರವೇ ಗೊತ್ತಾಗಲಿದೆ. ಪತಿ ನೇಣು ಹಾಕಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ಇದರ ಸತ್ಯಾಸತ್ಯತೆ ತಿಳಿದುಕೊಳ್ಳಲಾಗುತ್ತಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...