ವಿಜಯಪುರ ಗೋದಾಮು ದುರಂತ | ʼಬಾಕಿ ಕೂಲಿ ಕೊಟ್ಟರೆ ಊರಿಗೆ ಮರಳುತ್ತೇವೆʼ ಎಂದ ಬಿಹಾರ ಕಾರ್ಮಿಕರು

Date:

ವಿಜಯಪುರ ನಗರದ ಅಲಿಯಾಬಾದ್‌ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದ ಗೋದಾಮು ದುರಂತದಲ್ಲಿ ಬದುಕುಳಿದಿರುವ ಬಿಹಾರ ಕಾರ್ಮಿಕರು, ನಮಗೆ ಬಾಕಿ ಕೂಲಿ ಕೊಟ್ಟರೆ ನಮ್ಮೂರಿಗೆ ಮರಳುತ್ತೇವೆ ಎಂದು ಕೇಳಿಕೊಳ್ಳುತ್ತಿದ್ದಾರೆ.

- Advertisement -

ಕಣ್ಣೆದುರೇ ತಮ್ಮವರನ್ನು ಕಳೆದುಕೊಂಡು, ನಿದ್ದೆ ಬರುತ್ತಿಲ್ಲ, ಊಟ ಸೇರುತ್ತಿಲ್ಲ, ಮಾನಸಿಕವಾಗಿ ಕುಗ್ಗಿದ್ದೇವೆ ಎನ್ನುತ್ತಿದ್ದು, ನಿರಾಸೆ, ಬೇಸರ ಹಾಗೂ ಆತಂಕದಲ್ಲಿರುವ ಕಾರ್ಮಿಕರು ‘ನಮ್ಮೂರಿಗೆ ಸುರಕ್ಷಿತವಾಗಿ ತಲುಪಿದರೆ ಸಾಕು’ ಎಂಬ ಸ್ಥಿತಿಯಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ದುರಂತದ ವಿಷಯ ಗೊತ್ತಾದ ಕೂಡಲೇ ಊರಿನಿಂದ ಪತ್ನಿ, ಮಕ್ಕಳು, ಬಂಧುಗಳು ಕರೆ ಮಾಡಿ, ಊರಿಗೆ ಮರಳಲು ಕೋರುತ್ತಿದ್ದಾರೆ. ಬಂದು ಬಿಡಿ, ಇಲ್ಲಿಯೇ ಏನಾದರೂ ಮಾಡಿ ಬದುಕೋಣ ಎಂದು ಗೋಗರೆಯುತ್ತಿದ್ದಾರೆ. ತಕ್ಷಣವೇ ಊರಿಗೆ ಹೋಗಲು ಕೈಯಲ್ಲಿ ಹಣವಿಲ್ಲ. ರೈಲು ಟಿಕೆಟ್‌ ತೆಗೆಸಲು ನಮ್ಮಲ್ಲಿ ಹಣವಿಲ್ಲ, ಮಾಲೀಕರು ನಮ್ಮ ಬಾಕಿ ಕೂಲಿ ಕೊಟ್ಟರೆ ಈಗಲೇ ಹೊರಡುತ್ತೇವೆ. ಮರಳಿ ಬರುತ್ತೇವೋ ಇಲ್ಲವೋ ಎಂಬುದು ಗೊತ್ತಿಲ್ಲ ಎಂದು ಕಾರ್ಮಿಕರು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.

ಮುಖಿಯಾ ಹೆಸರುಳ್ಳವರು ಬಿಹಾರದಲ್ಲಿ ಮೀನುಗಾರಿಕೆ ಕೆಲಸ ಮಾಡುವವರು. ನಮ್ಮ ಕುಟುಂಬ ಮೊದಲಿನಿಂದಲೂ ಮೀನುಗಾರಿಕೆ ಮಾಡುತ್ತಿದೆ. ಆದರೆ, ಈಗ ಅಲ್ಲಿ ಮೀನುಗಾರಿಕೆ ಲಾಭದಾಯಕವಾಗಿಲ್ಲ. ಕೂಲಿ ಸಹ ಗಿಟ್ಟುತ್ತಿಲ್ಲ. ಇಲ್ಲಿಯಾದರೂ ನಿಶ್ಚಿತ ಕೂಲಿ ಸಿಗುವುದೆಂದು ಬಂದೆವು. ಆದರೆ, ನಮ್ಮ ಆಪ್ತರು ಪ್ರಾಣವನ್ನೇ ಕಳೆದುಕೊಳ್ಳಬೇಕಾದ ಸ್ಥಿತಿ ಬರುವುದೆಂದು ನಿರೀಕ್ಷಿಸಿರಲಿಲ್ಲ ಎಂದು ಕಾರ್ಮಿಕ ಮಂಗಲ್ ಮುಖಿಯಾ ತಮ್ಮ ದುಃಖ ಹೇಳಿಕೊಳ್ಳುತ್ತಾರೆ.

ಸಾವಿಗೀಡಾದವರಿಗೆ ಮಾಲೀಕ ಇನ್ನೂ ಪರಿಹಾರ ಕೊಟ್ಟಿಲ್ಲ. ಸರ್ಕಾರವೂ ಪರಿಹಾರ ಕೊಟ್ಟಿಲ್ಲ, ಶವಗಳ ಅಂತ್ಯಕ್ರಿಯೆಗೂ ಹಣ ಸಿಕ್ಕಿಲ್ಲ. ಏನು ಮಾಡಬೇಕೆಂದು ದಿಕ್ಕು ತೋಚುತ್ತಿಲ್ಲ ಎಂದರು.

ಗೋದಾಮು ದುರಂತದಲ್ಲಿ ಸಾವಿಗೀಡಾದ ಏಳು ಜನ ಕಾರ್ಮಿಕರ ಶವಗಳನ್ನು ಹೈದರಾಬಾದ್‌ನಿಂದ ಪಟ್ನಾಕ್ಕೆ ವಿಮಾನದ ಮೂಲಕ ಸಾಗಿಸಲಾಗಿದೆ. ಬುಧವಾರ(ಡಿ.06) ಸಂಜೆ ಆಯಾ ಕಾರ್ಮಿಕರ ಊರುಗಳಿಗೆ ಶವಗಳನ್ನು ತಲುಪಿಸಲಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್‌ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಪರಿಹಾರದ ಮೊತ್ತವನ್ನು ಮೃತರ ಕುಟುಂಬದವರಿಗೆ ತಲುಪಿಸುವ ಸಂಬಂಧ ಬಿಹಾರ ರಾಜ್ಯದ ಆಯಾ ಜಿಲ್ಲಾಧಿಕಾರಿಗಳಿಂದ ಅಗತ್ಯ ಮಾಹಿತಿ ದಾಖಲೆ ಪತ್ರಗಳನ್ನು ಪಡೆದು ಬ್ಯಾಂಕ್‌ ಖಾತೆಗೆ ಶೀಘ್ರದಲ್ಲೇ ಹಾಕಲಾಗುವುದು ಎಂದು ತಿಳಿಸಿದ್ದಾರೆ.

ಇಲ್ಲಿರುವ ಕೂಲಿಕಾರ್ಮಿಕರು ತಮ್ಮ ಊರಿಗೆ ತೆರಳುವ ಸಂಬಂಧ ಸಹಕಾರ ಕೇಳಿ ಜಿಲ್ಲಾಡಳಿತಕ್ಕೆ ಮನವಿ ಮಾಡಿಲ್ಲ. ನೆರವು ನೀಡಲು ಜಿಲ್ಲಾಡಳಿತ ಸಿದ್ಧ. ಗೋದಾಮು ಮಾಲೀಕರಿಂದ ಕಾರ್ಮಿಕರಿಗೆ ಬಾಕಿ ಕೂಲಿ ಕೊಡಿಸಲಾಗುವುದು ಎಂದಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ದುರಂತದ ಆರೋಪಿಗಳು ವಕೀಲರ ಮೂಲಕ ಕೋರ್ಟ್‌ಗೆ ಶರಣಾಗಲು ಯತ್ನ ನಡೆಸಿದ್ದಾರೆ ಎಂಬುದು ಗೊತ್ತಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...