ವಿಜಯಪುರ | ʼಖರ್ಗೆ ಅವರನ್ನು ಕೆಣಕಿದ್ರೆ ನೀವೇ ನಾಶವಾಗುತ್ತೀರಿʼ : ಡಿಎಸ್ಎಸ್ ಮುಖಂಡ ಶರಣು ಸಿಂಧೆ

Date:

Advertisements

ಶೋಷಿತ ಸಮುದಾಯದಿಂದ ಬಂದ ಸಚಿವ ಪ್ರಿಯಾಂಕ ಖರ್ಗೆ ಮತ್ತು ಜಿ ಪರಮೇಶ್ವರ್ ಅವರನ್ನು ಟಾರ್ಗೆಟ್ ಮಾಡಿ ನಾಶ ಮಾಡಲು ಹೋದರೆ, ನೀವೇ ನಾಶವಾಗಿ ಹೋಗುತ್ತೀರಿ ಎಂದು ವಿಜಯಪುರ ಜಿಲ್ಲಾ ದಲಿತ ಸಂಘರ್ಷ ಸಮಿತಿ ಮುಖಂಡ ಶರಣು ಸಿಂಧೆ ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ಪ್ರಿಯಾಂಕ್‌ ಖರ್ಗೆ ಅವರ ವಿರುದ್ಧ ವಿಪಕ್ಷಗಳು ಮಾಡುತ್ತಿರುವ ಆರೋಪದ ಕುರಿತಾಗಿ ಪತ್ರಿಕಾ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಅವರು, “ದಲಿತರನ್ನು ಸಿಎಂ ಆಗೋಕೆ ಬಿಡ್ತಾ ಇಲ್ಲ. ಪ್ರಿಯಾಂಕಾ ಖರ್ಗೆ ಮನೆ ಮುತ್ತಿಗೆ ಹಾಕ್ತೀರಿ. ಮುತ್ತಿಗೆ ಹಾಕಿದ್ರೆ ನಾವು ಸುಮ್ನೆ ಇರಬೇಕಾ? ಅಂಬೇಡ್ಕರ್ ಅನ್ನೋ ಹೆಸರು ನಿಮಗೆ ಫ್ಯಾಷನ್ ಇರಬಹುದು ಆದರೆ ನಮಗೆ ಅಂಬೇಡ್ಕರ್‌ ಅನ್ನೋದು ಉಸಿರು. ಪ್ರಿಯಾಂಕ್ ಖರ್ಗೆ ಅವರ ಮೇಲೆ ಸಲ್ಲದ ಆರೋಪ ಮಾಡುತ್ತಿರುವುದು ಮೂರ್ಖತನದ ಪರಮಾವಧಿ. ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಕರ್ತವ್ಯ ಆಗಿರುವುದರಿಂದ ನಾವು ಸುಮ್ಮನಿದ್ದೇವೆ. ಬಿಜೆಪಿಗರ ಹಗರಣಗಳನ್ನು ಖರ್ಗೆ ಅವರು ಎಳೆ ಎಳೆಯಾಗಿ ಬಿಚ್ಚಿಡುತ್ತಿದ್ದಾರೆ. ಅದಕ್ಕಾಗಿಯೇ ಅವರ ವಿರುದ್ಧ ಸಂಚು ರೂಪಿಸಲಾಗುತ್ತಿದೆ. ಕೂಡಲೇ ಅವರ ಮೇಲೆ ಮಾಡುತ್ತಿರುವ ಆರೋಪಗಳನ್ನು ನಿಲ್ಲಿಸಬೇಕು ಇಲ್ಲವಾದಲ್ಲಿ ನಮ್ಮ ಸಮುದಾಯ ಸೇರಿದಂತೆ ಸಚಿವರ ಅಭಿಮಾನಿಗಳು ದಂಗೆ ಏಳುವುದು ಖಂಡಿತ” ಎಂದು ಬಿಜೆಪಿಗರಿಗೆ ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ನಗರದಲ್ಲಿ ಚಿರತೆ ಪ್ರತ್ಯಕ್ಷ : ಜನರಲ್ಲಿ ಮನೆ ಮಾಡಿದ ಆತಂಕ!

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X