ವಿಜಯಪುರ‌ | ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ; ಭಿಮಾತೀರದ ಗ್ರಾಮೀಣ ವಲಯದಲ್ಲಿ ಬಾಲಕಿಯರ ಸಾಧನೆ

Date:

2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜಯಪುರ ಜಿಲ್ಲೆಯ ಭಿಮಾತೀರದ ಗ್ರಾಮೀಣ ವಲಯದ ಬಾಲಕಿಯರು ಜಿಲ್ಲಾಮಟ್ಟದಲ್ಲಿ ಸಾಧನೆಗೈದಿದ್ದಾರೆ.

- Advertisement -

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಚಿಕ್ಕ ಗ್ರಾಮ ಚವಡಿಹಾಳ ಗ್ರಾಮದಲ್ಲಿರುವ ಭಾಗ್ಯವಂತಿ ವಿದ್ಯಾವರ್ಧಕ ಸಂಘದ ಭಾಗ್ಯವಂತಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ಬಡವ ಮತ್ತು ರೈತರ ಮಕ್ಕಳು ಶೇ.99, ಶೇ.98 ಮತ್ತು ಶೇ.96ರಷ್ಟು ಅಂಕಗಳನ್ನು ಪಡೆದು ತಾಲೂಕು ಮಟ್ಟದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತಿರ್ಣರಾಗಿ ಜಿಲ್ಲೆಯ ಶೈಕ್ಷಣಿಕ ಸಾಧನೆಗೆ ಗರಿ ಮೂಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇಂಡಿ ತಾಲೂಕಿನ ಗಡಿಭಾಗದ ಹಳ್ಳಿ ಚವಡಿಹಾಳ ಒಂದ ಚಿಕ್ಕ ಗ್ರಾಮ. ರೈತರು, ಬಡವರು ಹಾಗೂ ಮಧ್ಯಮ ವರ್ಗದ ಮತ್ತು ಹಿಂದುಳಿದ ಶ್ರಮಜೀವಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿರುವ ಜನಸಮೂದಾಯದ ಈ ಹಳ್ಳಿಯಲ್ಲಿ ಹಿಂದುಳಿದ ವರ್ಗದ ಆಡಳಿತದಲ್ಲಿ ನಡೆಯುತ್ತಿರುವ ಶಿಕ್ಷಣ ಸಂಸ್ಥೆ ಭಾಗ್ಯವಂತಿ ವಿದ್ಯಾವರ್ಧಕ ಸಂಘ, ಅಪ್ಪಟ ಗ್ರಾಮೀಣ ಪ್ರದೇಶವಾಗಿದ್ದು, ಭಿಮಾತೀರದ ಗ್ರಾಮದ ಶಾಂತಪ್ಪ, ಪಂಚಪ್ಪ ದಶವಂತ ಎಂಬುವವರು ಈ ಭಾಗದ ಬಡಮಕ್ಕಳಿಗೆ ಶಿಕ್ಷಣ ದೊರೆತರೆ, ಬಡವರ ಬದುಕು ಹಸನಾಗುವುದೆಂಬ ಯೋಚನೆಯಿಂದ 1991ರಲ್ಲಿ ಪ್ರಾಥಮಿಕ ಶಾಲೆಯಿಂದ ಶಿಕ್ಷಣ ಸಂಸ್ಥೆಯನ್ನು ಪ್ರಾರಂಭಿಸಿ 2021ರಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭಿಸಿದ ಮೊದಲ ಹಂತದಲ್ಲಿಯೇ ಈ ಕಾಲೇಜಿನ ವಿದ್ಯಾರ್ಥಿನಿಯರು ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಮಾಡಿದ ಸಾಧನೆ ಜಿಲ್ಲೆಯ ಶೈಕ್ಷಣಿಕ ಕ್ಷೇತ್ರಕ್ಕೆ ಗ್ರಾಮೀಣ ಭಾಗದ ದೊಡ್ಡ ಸಾಧನೆಯ ಕೊಡುಗೆಯಾಗಿದೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ತೊರವಿ ಭಾಗಕ್ಕೂ ಶೀಘ್ರದಲೇ ನೀರಾವರಿ ಕಲ್ಪಿಸಲಾಗುವುದು: ಎಂ ಬಿ ಪಾಟೀಲ

ಕಾಲೇಜು ಪ್ರಾರಂಭವಾದ ಮೊದಲ ವರ್ಷದಲ್ಲಿಯೇ ಕಲಾ ವಿಭಾಗದ ವಿದ್ಯಾರ್ಥಿನಿ ಗೌರಮ್ಮ ಕುಂಬಾರ ಶೇ.99(587) ಅಂಕಗಳನ್ನು, ವಿಜ್ಞಾನ ವಿಭಾಗದಲ್ಲಿ ಕುಮಾರಿ ವಿದ್ಯಾಶ್ರೀ ಗಣಾಚಾರಿ ಶೇ.98(587) ಅಂಕಗಳನ್ನು ಮತ್ತು ವಾಣಿಜ್ಯ ವಿಭಾಗದಲ್ಲಿ ಕುಮಾರಿ ವಿದ್ಯಾವತಿ ಬಿರಾದಾರ ಶೇ.96(574) ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆಯುವುದರೊಂದಿಗೆ ವಿಜ್ಞಾನ ವಿಭಾಗದಲ್ಲಿ 58 ಮಂದಿ ಡಿಸ್ಟಿಂಕ್ಷನ್‌, 04 ಮಂದಿ ಪ್ರಥಮ ಶ್ರೇಣಿ, ಕಲಾ ವಿಭಾಗದಲ್ಲಿ 16 ಮಂದಿ ಡಿಸ್ಟಿಂಕ್ಷನ್ ಮತ್ತು 5 ಮಂದಿ ಪ್ರಥಮ ಶ್ರೇಣಿ ಮತ್ತು ವಾಣಿಜ್ಯ ವಿಭಾಗದಲ್ಲಿ 8 ಮಂದಿ ಡಿಸ್ಟಿಂಕ್ಷನ್ ಮತ್ತು 04 ಮಂದಿ ಪ್ರಥಮ ಶ್ರೇಣಿಯ ಫಲಿತಾಂಶವನ್ನು ನೀಡಿ ಕಾಲೇಜಿನ ಒಟ್ಟು ಫಲಿತಾಂಶವನ್ನು 100ಕ್ಕೆ 100ರಷ್ಟು ದಾಖಲಿಸಿದ್ದು, ಇದು ವಿಜಯಪುರ ಗ್ರಾಮಿಣ ಮಟ್ಟದ ಶ್ರೇಷ್ಠ ಸಾಧನೆಯಾಗಿದೆ. ವಿದ್ಯಾರ್ಥಿನಿಯರ ಈ ಸಾಧನೆಗೆ ಶಿಕ್ಷಣ ಇಲಾಖೆ ಮತ್ತು ಶಿಕ್ಷಣ ಸಂಸ್ಥೆಯ ಮುಖ್ಯಸ್ತರು, ಶಿಕ್ಷಕರು ಹಾಗೂ ಗ್ರಾಮದ ಗುರು-ಹಿರಿಯರು ಈ ಮಕ್ಕಳ ಸಾಧನೆಗೆ ಅವರನ್ನು ಸತ್ಕರಿಸಿ ಅಭಿನಂದಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...