ವಿಜಯಪುರ | ಇಂಗಳಗಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ

Date:

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಅಕ್ರಮವಾಗಿ ಮದ್ಯ ಮಾರುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಹಿಳೆಯರು ಹಾಗೂ ದಲಿತ ಸಂಘರ್ಷ ಸಮಿತಿ (ನಾಗವಾರ ಬಣ) ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

- Advertisement -

ದೇವರಹಿಪ್ಪರಗಿಯಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ತಹಶೀಲ್ದಾರ್ ಪ್ರಕಾಶ ಸಿಂದಗಿ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಪ್ರತಿಭಟನೆಯಲ್ಲಿ ಮಾತನಾಡಿದ ದಸಂಸ ಮುಖಂಡ ರಾವುತ ತಳಕೇರಿ ಮಾತನಾಡಿ, “ಸುಮಾರು ವರ್ಷಗಳಿಂದ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ. ಕಿರಾಣಿ ಅಂಗಡಿ, ಪಾನ್ ಶಾಪ್‌ಗಳಲ್ಲಿ ನಿರ್ಭಯವಾಗಿ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಸಿಂದಗಿ ತಾಲೂಕು ಅಬಕಾರಿ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಕೂಡಲೇ ಅಕ್ರಮ ಮದ್ಯ ಮಾರಾಟಗಾರರ ಮೇಲೆ ಶಿಸ್ತು ಕ್ರಮ ಜರುಗಿಸಿ, ಮದ್ಯ ಮಾರಾಟ ಬಂದ್‌ ಮಾಡಿಸಬೇಕು. ಕ್ರಮ ಕೈಗೊಳ್ಳಲು ನಿರ್ಲಕ್ಷ್ಯ ಧೋರಣೆ ತೋರುತ್ತಿರುವ ಅಧಿಕಾರಿಗಳಿಗೆ ನೋಟಿಸ್ ನೀಡಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಹಕ್ಕೊತ್ತಾಯ ಸ್ವೀಕರಿಸಿದ ತಹಶೀಲ್ದಾರ್ ಪ್ರಕಾಶ ಸಿಂದಗಿ, ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ರೇಣುಕಾ ಕಟ್ಟಿಮನಿ, ಯಲ್ಲವ್ವ ಮಾದರ, ಸಾವಿತ್ರಿ ಕಟ್ಟಿಮನಿ, ಭೀಮವ್ವ ಮಾದರ, ಮಾನಂದಾ ಕಟ್ಟಿಮನಿ, ಯಲ್ಲವ್ವ ಕನ್ನೋಳ್ಳಿ, ಸೋಮವ್ವ ರತ್ನಾಕರ, ಭಾರತಿ ಭಾವಿಮನಿ, ರುಕ್ಕವ್ವ ಕಟ್ಟಿಮನಿ, ನಂದವ್ವ ಹೊಸಮನಿ, ಚಂದ್ರವ್ವ ಭಾವಿಮನಿ, ಚಂದ್ರವ್ವ ಕನ್ನೊಳ್ಳಿ, ಅನಿತಾ ಭಾವಿಮನಿ, ರವಿ ಶಿರವಾಳ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯಾ ಪ್ರಕರಣ: ಮಂಗಳೂರಿಗೆ ನೂತನ SIT ತಂಡ; ತನಿಖೆಗೆ ಸಿದ್ಧತೆ

ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್...

ಭಾರತ–ಜಪಾನ್ ತಂತ್ರಜ್ಞಾನ ಸಹಕಾರದಿಂದ ಹೊಸ ಉದ್ಯಮ ಅವಕಾಶ: ನವತಾ ಹಿರೋಷಿ

ಜಪಾನ್‌ನ ತಂತ್ರಜ್ಞಾನ ಹಾಗೂ ಕೈಗಾರಿಕಾ ಅನುಭವಕ್ಕೆ ಭಾರತದ ಯುವಶಕ್ತಿ ಮತ್ತು ಡಿಜಿಟಲ್...

ಕೋಲಾರ | ತಡೆಹಿಡಿದಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಮರುಸ್ಥಾಪನೆ

ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರೀದ್ ಪಾಷಾ ಅವರ...