ಸರ್ಕಾರ ಬಡವರಿಗಾಗಿ ನೀಡುತ್ತಿರುವ ಅಕ್ಕಿಯನ್ನು ಖದೀಮರು ಅಕ್ರಮವಾಗಿ ನೆರೆಯ ಮಹಾರಾಷ್ಟ್ರದ ಸೋಲಾಪುರಕ್ಕೆ ಸಾಗಿಸುತ್ತಿದ್ದ ವೇಳೆ ಆಹಾರ ಇಲಾಖೆಯ ಅಧಿಕಾರಿ ಪರಮಾನಂದ ಹೂಗಾರ ಹಾಗೂ ಇಂಡಿ ಶಹರ ಠಾಣೆ ಅಧಿಕಾರಿ ಭಿಸೆ ಅವರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಆಹಾರ ಇಲಾಖೆ ಅಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳು ಅಕ್ರವಾಗಿ ಸಾಗಿಸುತ್ತಿದ್ದ ಅಂದಾಜು 32,000 ರೂಪಾಯಿ ಮೌಲ್ಯದ ಅಕ್ಕಿಯನ್ನು 5 ಲಕ್ಷ ಮೌಲ್ಯದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಗುರುವಾರ ರಾತ್ರಿ 9:00 ಸುಮಾರಿಗೆ ಇಂಡಿ ಪಟ್ಟಣದ ರೈಲು ನಿಲ್ದಾಣದ ಹತ್ತಿರ ಅಶೋಕ್ ಲೈಲ್ಯಾಂಡ್ ಕಂಪನಿಯ ವಾಹನ ಕೆಎ 28 ಎಎ 5706 ನೇದ್ದರಲಿ 25 ಪ್ಲಾಸ್ಟಿಕ್ ಚೀಲಗಳಲ್ಲಿ ಅಕ್ಕಿಯನ್ನು ತುಂಬಿಕೊಂಡು ಸಾಗಾಟ ಮಾಡುತ್ತಿರುವುದು ದಾಳಿಯಲ್ಲಿ ಖಚಿತವಾಗಿದೆ.
ಈ ಸುದ್ದಿ ಓದಿದ್ದೀರಾ? ಗದಗ | ಬಜೆಟ್‌ನಲ್ಲಿ ಜಿಲ್ಲೆಗೆ ಸಿಕ್ಕಿದ್ದೇನು?
ಪೊಲೀಸರು ವಕಾಸ್ ಅಲೀಮ್ ಶೇಖ್, ಹಾಗೂ ಸೋಹೈಲ್ ಕಲಬುರ್ಗಿ ಎಂಬುವರನ್ನು ಬಂಧಿಸಿದ್ದಾರೆ. ಈ ಕುರಿತು ಇಂಡಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
