ವಿಜಯಪುರ | ಅಕ್ರಮವಾಗಿ ಮದ್ಯ ಮಾರಾಟ; ಕಡಿವಾಣಕ್ಕೆ ಕೆಆರ್‌ಎಸ್ ಪಕ್ಷ ಆಗ್ರಹ

Date:

Advertisements

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಾದ್ಯಂತ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದು ಭರದಿಂದ ನಡೆಯುತ್ತಿದ್ದು, ಅಪರಾಧ‌ವೆಂದು ತಿಳಿದಿದ್ದರೂ ಮದ್ಯ ಮಾರಾಟಗಾರರಿಗೆ ಕಾನೂನಿನ ಭಯವೇ ಇಲ್ಲ. ಇದಕ್ಕೆಲ್ಲ ಅಬಕಾರಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರೇ ಕಾರಣ ಎಂದು ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಆರೋಪಿಸಿದರು.

ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಅಬಕಾರಿ ‌ನಿರೀಕ್ಷಕ ನಾಯಿಕ‌ ಅವರಿಗೆ ಮನವಿ ಸಲ್ಲಿಸಿದರು. ಇದೇ ವೇಳೆ ರಾಜ್ಯ ಸಂಘಟನಾ ಕಾರ್ಯದರ್ಶಿ ಗಣಪತಿ ರಾಠೋಡ ‌ಮಾತನಾಡಿ, “ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿರುವುದನ್ನು ತಡೆಯುವಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳು ವಿಫಲರಾಗಿದ್ದಾರೆ. ಸುಮಾರು ಮೂರು ಬಾರಿ‌ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವವರಿಗೆ ಕಾನೂನಿನ ಭಯ ಅಥವಾ ಅಧಿಕಾರಿಗಳ ಬಗ್ಗೆ ಕಿಂಚಿತ್ತೂ ಭಯವಿಲ್ಲದಂತಾಗಿದೆ” ಎಂದರು.

“ತಾಲೂಕಿನ ಪ್ರತಿ ಹಳ್ಳಿಯಲ್ಲೂ ಅಕ್ರಮವಾದ ಮದ್ಯ ಮಾರಾಟ ಹೆಚ್ಚಾಗಿದ್ದು, ಜನರ ಜೀವನ ಅಸ್ತವ್ಯಸ್ತವಾಗಿದೆ. ಅದಕ್ಕೆ ಅಬಕಾರಿ ಅಧಿಕಾರಿಗಳೇ ನೇರಹೊಣೆ‌ ಹೊರಬೇಕಾಗುತ್ತದೆ. ಈ ಕೂಡಲೇ ಅಕ್ರಮ ಮದ್ಯ ತಡೆಗಟ್ಟಲು ಕಾನೂನು ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಅಸಹಾಯಕತೆ ತೋರಿದರೆ, ತೀವ್ರ ಪ್ರತಿಭಟನೆ ಮಾಡುತ್ತೇವೆ” ಎಂದು ಎಚ್ಚರಿಕೆ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರದಿಂದ ವಿಶ್ವ ಆತ್ಮಹತ್ಯೆ ತಡೆ ಕಾರ್ಯಕ್ರಮ

ಈ ಸಂದರ್ಭದಲ್ಲಿ ಕೆಆರ್‌ಎಸ್ ಪಕ್ಷದ ಜಿಲ್ಲಾಧ್ಯಕ್ಷ ಅಶೋಕ ಜಾಧವ,‌ ಕಾರ್ಯದರ್ಶಿ ಲಕ್ಷ್ಮಣ್ ಚಡಚಣ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ದುರ್ಗಪ್ಪ ಬೂದಿಹಾಳ, ಚಡಚಣ ತಾಲೂಕು ಅಧ್ಯಕ್ಷ ಚಂದ್ರಕಾಂತ್ ನಗರೇ, ಅಣ್ಣಪ್ಪ ಪೂಜಾರಿ, ಕೆಆರ್‌ಎಸ್ ಪಕ್ಷದ ಹಲವಾರು ಸೈನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X