ವಿಜಯಪುರ | ಅಕ್ರಮವಾಗಿ ಮದ್ಯ ಮಾರಾಟ; ತಡೆಯದಿದ್ದಲ್ಲಿ ಹೋರಾಟದ ಎಚ್ಚರಿಕೆ

Date:

Advertisements

ತಾಳಿಕೋಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿದ್ದು, ಇದನ್ನು ಕೂಡಲೇ ನಿಲ್ಲಿಸುವಂತೆ ಒತ್ತಾಯಿಸಿ ಗ್ರಾಮದ ಮಹಿಳೆಯರು ಉಪತಹಶೀಲ್ದಾರ್‌ ಮೂಲಕ ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯಕ್ಕೆ ಬಂದು ಬೊಮ್ಮನಹಳ್ಳಿ ಗ್ರಾಮದ ಮಹಿಳೆಯರು ಉಪ ತಹಶೀಲ್ದಾ‌ರ್ ಖಾದೀಮ ಅವರಿಗೆ ಮನವಿ ಸಲ್ಲಿಸಿದರು.

ಗ್ರಾಮದ ಭೀಮಾಬಾಯಿ ಮಾತನಾಡಿ, “ಗ್ರಾಮದಲ್ಲಿ ಬಹಳ ದಿನಗಳಿಂದ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ. ಇದರಿಂದ ಹಲವಾರು ಗಂಭೀರ ಸಮಸ್ಯೆಗಳು ಉಲ್ಬಣಗೊಂಡಿವೆ. ಬೆಳಿಗ್ಗೆಯಿಂದಲೇ ಮದ್ಯ ಮಾರಾಟ ಆರಂಭವಾಗುತ್ತಿರುವುದರಿಂದ ಕೂಲಿ ಕಾರ್ಮಿಕರು, ಯುವಕರು ತಮ್ಮ ಕೆಲಸಗಳನ್ನು ಬಿಟ್ಟು ಮದ್ಯಪಾನ ಮಾಡಿ ಮದ್ಯದ ಅಮಲಿನಲ್ಲಿ ಜಗಳ, ರಾದ್ಧಾಂತಗಳನ್ನು ಮಾಡುತ್ತಿದ್ದಾರೆ. ಹಲವಾರು ಬಡ ಕುಟುಂಬಗಳು ಬೀದಿಗೆ ಬಂದಿವೆ. ನೂರಾರು ಮಹಿಳೆಯರು ಕಣ್ಣೀರಿನಲ್ಲಿಯೇ ಜೀವನ ನಡೆಸುತ್ತಿದ್ದಾರೆ” ಎಂದು ದೂರಿದರು.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ಬಯಲು ಶೌಚಕ್ಕೆ ತೆರಳಿದ್ದ ಮಹಿಳೆ; ತಿಳಿಯದೆ ಮಣ್ಣು ಸುರಿದ ಜೆಸಿಬಿ; ಮಹಿಳೆ ಸಾವು

“ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನು ತಡೆಯುವಂತೆ ಇಲಾಖೆಗೆ ಹಲವು ಬಾರಿ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕಾಟಾಚಾರಕ್ಕೆ ಕೆಲವು ದಿನಗಳವರೆಗೆ ಮಾರಾಟ ನಿಲ್ಲುತ್ತದೆ. ಮತ್ತೆ ಆರಂಭವಾಗುತ್ತದೆ. ಹಾಗಾಗಿ ಆದಷ್ಟು ಬೇಗ ಇದನ್ನು ನಿಲ್ಲಿಸಿ, ಇಲ್ಲದೆ ಹೋದಲ್ಲಿ ನಾವೆಲ್ಲರೂ ಮಹಿಳೆಯರು ಸೇರಿ ತೀವ್ರ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ” ಎಂದು ಜಿಲ್ಲಾಡಳಿತಕ್ಕೆ ಎಚ್ಚರಿಸಿದರು.

ಗ್ರಾಮದ ಪದ್ಮಾವತಿ, ಲಕ್ಷ್ಮೀಬಾಯಿ, ಮಲ್ಲಮ್ಮ, ಜಯಶ್ರೀ, ಬಸಮ್ಮ, ಲಿಂಬಮ್ಮ, ಹಣಮವ್ವ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X