ವಿಜಯಪುರ | ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ 625ಕ್ಕೆ 620 ಅಂಕ; ರಕ್ಷಿತಾ ಪಂಡಿತ ಕೊಡಹೊನ್ನಗೆ ಸನ್ಮಾನ

Date:

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿಗೆ ಸಮಗಾರ ಹರಳಯ್ಯ ಸಮುದಾಯದ ಹೆಮ್ಮೆಯ ಪುತ್ರಿ ರಕ್ಷಿತಾ ಪಂಡಿತ ಕೊಡಹೊನ್ನ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ 625ಕ್ಕೆ 620 ಅಂಕ ಪಡೆದು ಇಂಡಿ ತಾಲೂಕಿಗೆ ಪ್ರಥಮ ವಿದ್ಯಾರ್ಥಿನಿಯಾಗಿ ಯಶಸ್ಸು ಸಾಧಿಸುವುದರಿಂದ ಸಮಾಜದ ಮುಖಂಡರು ಸನ್ಮಾನಿಸಿ ಗೌರವಿಸಿದರು.

- Advertisement -

ಈ ವಿದ್ಯಾರ್ಥಿನಿಯ ಸಾಧನೆ ಸಮುದಾಯದ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ. ಪ್ರಸ್ತುತ ಸಂದರ್ಭದಲ್ಲಿ ಸಮಾಜದ ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ತುಂಬಾ ಹಿಂದುಳಿದಿದೆ. ಇಂತಹ ಸಂದರ್ಭದಲ್ಲಿ ಈ ವಿದ್ಯಾರ್ಥಿನಿಯ ಸಾಧನೆ ಸಮಾಜಕ್ಕೆ ಹೆಮ್ಮೆ ಹಾಗೂ ಗೌರವ ತಂದಿದೆ. ಜತೆಗೆ ಸಮಾಜದ ಇನ್ನಿತರ ವಿದ್ಯಾರ್ಥಿಗಳು ಶೇ.90ಕ್ಕಿಂತಲೂ ಹೆಚ್ಚಿಗೆ ಅಂಕ ಪಡೆದಿದ್ದಾರೆ. ಅಂತಹ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ಏರ್ಪಡಿಸಿ ಸನ್ಮಾನಿಸಲಾಗುವುದು ಎನ್ನಲಾಗಿದೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಸಮಾಜದ ಮುಖಂಡ ಮಹೇಶ ಶಿವಪ್ಪ ಹೊನ್ನಬಿಂದಗಿ, ರಾಯಪ್ಪ ಹರಳಯ್ಯ, ರಾಯಗೊಂಡ ರಗಟೆ, ಕಾಶಿನಾಥ ಹೊಸಮನಿ, ಜಗನ್ನಾಥ ಕೊಡತೆ, ಶ್ರೀನಿವಾಸ ಶಹಾಪುರ ವಿಜಯಪುರ, ಸೋಮು ಹೊನ್ನಕಟ್ಟಿ, ಪಂಡಿತ ಕೊಡಹೊನ್ನ ಇದ್ದರು.

ಈ ಸುದ್ದಿ ಓದಿದ್ದೀರಾ? ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ಸ್ 2025: ಶಿವರಾಜಕುಮಾರ್‌ಗೆ ಜೀವಮಾನ ಸಾಧನೆ ಪ್ರಶಸ್ತಿ

ಇದೇ ಸಂದರ್ಭದಲ್ಲಿ ಸಮುದಾಯದ ಎಲ್ಲ ಬಾಂಧವರು ಒಳಮೀಸಲಾತಿ ಕುರಿತು ಜಾತಿ ಸಮೀಕ್ಷೆ ನಡದಿದೆ. ಕಾರಣ ತಾವೆಲ್ಲರೂ ಜಾಗೃತವಹಿಸಿ 93 ಕೋಡ್‌ ನಂಬರ್‌ನ ಸಮಗಾರ ಜಾತಿ ಎಂದು ನಮೂದಿಸಬೇಕು. ಕುಲಕಸಬು ಕೇಳಿದ್ರೆ ಚರ್ಮಗಾರಿಕೆ ಅಥವಾ ಪಾದರಕ್ಷೆ ತಯಾರಿಸುವುದು ಅಂತಾ ನಮೂದಿಸಬೇಕು. ಕಡ್ಡಾಯವಾಗಿ ಗಣತಿದಾರರು ಬರದೇ ಇದ್ದರೆ ಹುಡುಕಿ ಹೋಗಿ ನಮ್ಮ ಹಟ್ಟಿಗಳಿಗೆ ಕರೆತಂದು ಸಮುದಾಯದ ಎಲ್ಲರ ಮಾಹಿತಿ ಸಲ್ಲಿಸಬೇಕು ಎಂದು ಸಮಗಾರ ಹರಳಯ್ಯ ಸಮುದಾಯದ ಮುಖಂಡರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ...

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ....