ವಿಜಯಪುರ | ರೈತರ ಜಮೀನುಗಳಿಗೆ ನೀರಿನ ಅನುಕೂಲತೆ ಕಲ್ಪಿಸುವಂತೆ ಅನಿರ್ದಿಷ್ಟಾವಧಿ ಧರಣಿ

Date:

ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಕೊಡಗಾನೂರ ಕ್ರಾಸ್ ಬಳಿ ಬೂದಿಹಾಳ ಪೀರಾಪುರ ಏತ ನೀರಾವರಿಗೆ ಸಂಬಂಧಿಸಿದ ಕೊನೆ ಹಂತದ ಎಫ್‌ಐಸಿ(ಹೊಲಗಾಲುವೆ) ಕಾಲುವೆ ನಿರ್ಮಾಣ ಮಾಡಿ ತಾಲೂಕಿನ 38 ಹಳ್ಳಿಗಳಿಗೆ ರೈತರ ಜಮೀನುಗಳಿಗೆ ನೀರಿನ ಅನುಕೂಲತೆ ಕಲ್ಪಿಸಬೇಕೆಂದು ಆಗ್ರಹಿಸಿ 38 ಹಳ್ಳಿಗಳ ರೈತರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ನಡೆಸಲು ಅಂಬೇಡ್ಕರ್ ಸೇನೆಯ ತಾಲೂಕು ಸಮಿತಿಯಿಂದ ಬೆಂಬಲ ಸೂಚಿಸಲಾಗಿದೆ.

- Advertisement -

ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, “ಯೋಜನೆ ಶೇ.90ರಷ್ಟು ಪೂರ್ಣಗೊಂಡಿದ್ದು, ಕೇವಲ 10 ಪ್ರತಿಶತ ಕಾಮಗಾರಿ ಬಾಕಿ ಉಳಿದಿದೆ. ₹170 ಕೋಟಿ ಅನುದಾನ ಬೇಕಿದ್ದು, ಕಾಲುವೆ ನಿರ್ಮಾಣವಾದರೆ ಈ ಭಾಗದ ರೈತರಿಗೆ ಅನುಕೂಲವಾಗುತ್ತದೆ” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಅಂಬೇಡ್ಕರ್ ಸೇನೆ ತಾಲೂಕು ಅಧ್ಯಕ್ಷ ಗೋಪಾಲ ಕಟ್ಟಿಮನಿ ಮಾತನಾಡಿ, “ಜಾನುವಾರುಗಳಿಗೆ ಕುಡಿಯಲು ನೀರಿಲ್ಲ. ಜನರಿಗೆ ಕುಡಿಯಲು ನೀರಿಲ್ಲ. ಈ ಕಾಲುವೆ ಈ ಭಾಗದ ರೈತರಿಗೆ ಮತ್ತು ಜಾನುವಾರುಗಳಿಗೆ ಅನುಕೂಲವಾಗುತ್ತದೆ. ಬೇಡಿಕೆ ಈಡೇರಿಸದಿದ್ದರೆ ಇನ್ನಷ್ಟು ತೀವ್ರವಾಗಿ ಹೋರಾಟ ಮಾಡಲಾಗುವುದು” ಎಂದು ಸರ್ಕಾರಕ್ಕೆ ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮೂಲ ಸೌಕರ್ಯಕ್ಕೆ ಆಗ್ರಹಿಸಿ ಸಚಿವರಿಗೆ ಮನವಿ

ಈ ವೇಳೆ ಅಂಬೇಡ್ಕರ್ ಸೇನೆಯ ಜಿಲ್ಲಾ ಉಪಾಧ್ಯಕ್ಷ ಬಸ್ಸು ಈ ಮಾದರ, ತಾಲೂಕು ಕಾರ್ಯದರ್ಶಿ ಮಹಾದೇವ ಅಸ್ಕಿ, ಖಜಂಚಿ ಪರಶುರಾಮ್ ತಳವಾರ, ಕಾರ್ಮಿಕ ಘಟಕದ ಅಧ್ಯಕ್ಷ ಪರಶುರಾಮ ನಾಲತನಾಡ ಸೇರಿದಂತೆ ಸುತ್ತಮುತ್ತಲಿನ ರೈತ ಬಾಂಧವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...