ವಿಜಯಪುರ | ಇಂದಿರಾ ಕ್ಯಾಂಟೀನ್ ಬಡವರಿಗೆ ವರವಾಗಲಿದೆ: ಸಚಿವ ಶಿವಾನಂದ ಪಾಟೀಲ

Date:

ಪ್ರಸ್ತುತ ದಿನಮಾನದಲ್ಲಿಯೂ ಕಡಿಮೆ ದರದಲ್ಲಿ ಆಹಾರ ವಿತರಿಸುವ ಇಂದಿರಾ ಕ್ಯಾಂಟೀನ್ ಬಡವರಿಗೆ ವರವಾಗಲಿದ್ದು, ಸರ್ಕಾರದ ಪ್ರಣಾಳಿಕೆಯಲ್ಲಿನ ಘೋಷಣೆಯಂತೆ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ ಎಂದು ಜವಳಿ ಹಾಗೂ ಕಬ್ಬು ಅಭಿವೃದ್ಧಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

- Advertisement -

ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ಬಸ್ ನಿಲ್ದಾಣ ಆವರಣದಲ್ಲಿ 1.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಎಂಪಿಎಸ್ ಶಾಲೆಯಲ್ಲಿ 15 ಲಕ್ಷ ರೂ. ವೆಚ್ಚದ ಶಾಲಾ ಕೊಠಡಿ ದುರಸ್ತಿಗೆ ಭೂಮಿ ಪೂಜೆ, ಮುದ್ದೇಶ್ವರ ಮಂಗಲ ಭವನದ ಬಳಿ ಹತ್ತು ಲಕ್ಷ ವೆಚ್ಚದ ರಂಗಮಂದಿರ ಭೂಮಿ ಪೂಜೆ, ಸಿದ್ದರ ಕಾಲೋನಿಯಲ್ಲಿ 20 ಲಕ್ಷ ರೂ. ವೆಚ್ಚದ ಅಂಗನವಾಡಿ ಕಟ್ಟಡ ಲೋಕಾರ್ಪಣೆ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ ಬಡವರ ಪರವಾಗಿ ನಿಂತಿದೆ” ಎಂದರು.

ಇಂದಿರಾ ಕ್ಯಾಂಟೀನ್‌ ಉದ್ಘಾಟನೆ

“ನಿಡಗುಂದಿ ಹೃದಯ ಭಾಗದಲ್ಲಿ ಜನರಿಗೆ ಅನುಕೂಲವಾಗುವ ಸ್ಥಳದಲ್ಲಿ ಇಂದಿರಾ ಕ್ಯಾಂಟೀನ್ ಆರಂಭವಾಗಿದೆ. ನಿಡಗುಂದಿ ತಾಲೂಕು ಕೇಂದ್ರವಾಗಿದ್ದು, ಸಾಕಷ್ಟು ವಹಿವಾಟು ಚಟುವಟಿಕೆಗೆ ಗ್ರಾಮೀಣ ಜನರು ಇಲ್ಲಿಗೆ ಆಗಮಿಸುತ್ತಿದ್ದಾರೆ. ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ಕಡಿಮೆ ದರದಲ್ಲಿ ಹಸಿವು ಇಂಗಿಸುವ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಲೋಕಾರ್ಪಣೆಯಾಗಿದೆ. ಇದನ್ನು ಉತ್ತಮ ನಿರ್ವಹಣೆ ಮಾಡುವ ಮೂಲಕ ಜನರಿಗೆ ನಿರಂತರ ಉಪಯೋಗವಾಗುವಂತೆ ಕಾರ್ಯ ಮಾಡಬೇಕು” ಎಂದರು.

“ಇಂದಿರಾ ಕ್ಯಾಂಟೀನಲ್ಲಿ ಟಿಫನ್‌ಗೆ 5 ರೂ., ಊಟಕ್ಕೆ 10 ರೂಪಾಯಿ ನಿಗದಿ ಮಾಡಿದ್ದು, ಇದು ಬಡವರಿಗೆ ಅನುಕೂಲವಾಗಲಿದೆ. ಎಂಪಿಎಸ್ ಶಾಲೆ ಕೊಠಡಿ ದುರಸ್ತಿಗೆ ಹೆಚ್ಚುವರಿಯಾಗಿ ಪಟ್ಟಣ ಪಂಚಾಯಿತಿಯಿಂದ 10 ಲಕ್ಷ ಹಾಗೂ ತಾಲೂಕು ಪಂಚಾಯಿತಿಯಿಂದ 10 ಲಕ್ಷ ರೂ. ಹಣ ಒದಗಿಸುವ ವ್ಯವಸ್ಥೆ ಮಾಡಲಾಗಿದ್ದು, ಒಟ್ಟಾರೆ ಎಲ್ಲ ಕೊಠಡಿಗಳು ದುರಸ್ತಿಯಾಗಿ ಸುಸಜ್ಜಿತ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುವುದು” ಎಂದರು.

ಈ ಸುದ್ದಿ ಒದಿದ್ದೀರಾ? ಹಾವೇರಿ | ಸರ್ಕಾರಿ ಶಾಲೆಗೆ 1 ಲಕ್ಷ 12 ಸಾವಿರ ಸಾಮಗ್ರಿಗಳು ವಿತರಣೆ

ಸಚಿವರು ಉಪ್ಪಿಟ್ಟು, ಕೇಸರಿ ಬಾತ್ ಸವಿದು, ಈ ವೇಳೆ ಕಮದಾಳ ಪುನರ್ವಸತಿ ಕೇಂದ್ರದಲ್ಲಿನ ಶಾಲೆ ಕಟ್ಟಡಕ್ಕೆ ಮಂಜೂರಾದ 61.59 ಲಕ್ಷ ರೂ. ಹಣದಲ್ಲಿ ಉಳಿಕೆ ಮೊತ್ತವನ್ನು ಶಾಲೆ ಕಾಂಪೌಂಡ್ ಎತ್ತರಗೊಳಿಸಲು ಜಿ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಶಿಕ್ಷಕ ಸಂಘದ ಮುಖಂಡರು ಸಚಿವರಿಗೆ ಮನವಿ ಸಲ್ಲಿಸಿದರು.

ಜಿವಿವಿಎಸ್ ಶಿಕ್ಷಣ ಸಂಸ್ಥೆ ಚೇರ್ಮನ್ ಸಿದ್ದಣ್ಣ ನಾಗಠಾಣ, ಪಪಂ ಅಧ್ಯಕ್ಷ ದೇಸಾಯಿ ಜಂಬಕ್ಕ ವಿಭೂತಿ, ಉಪಾಧ್ಯಕ್ಷೆ ಗೌರಮ್ಮ ಹುಗ್ಗಿ, ತಶೀಲ್ದಾರ್‌ ಎ ಡಿ ಅಮರವಾಡಗಿ, ತಾಪಂ ಮುಖ್ಯಾಧಿಕಾರಿ ವಿರೇಶ ಹಟ್ಟಿ, ಪಪಂ ಜೆಇ ಅಶ್ರಫ್ ಅಲಿ ಮಕನಾದಾರ, ಮುಖಂಡರಾದ ಪರಶುರಾಮ ಕಾರಿ, ಎಂ ಎಂ ಮುಲ್ಲಾ, ಶೇಖರ ರೊಡಗಿ, ಸಂಗಮೇಶ ಕೆಂಭಾವಿ, ಗಂಗಾಧರ ವಾರದ, ಪಪಂ ಸದಸ್ಯರು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...