ವಿಜಯಪುರ | ಕೃಷ್ಣಾನದಿಯ ಒಳಹರಿವು ಹೆಚ್ಚಳ: ಆಲಮಟ್ಟಿ ಜಲಾಶಯದ ಹೊರಹರಿವೂ ಹೆಚ್ಚಾಗುವ ಸಾಧ್ಯತೆ

Date:

Advertisements

ಕೃಷ್ಣಾನದಿಯ ಒಳಹರಿವು ಹೆಚ್ಚಾಗಿರುವ ಕಾರಣ ಆಲಮಟ್ಟಿ ಜಲಾಶಯದ ಹೊರಹರಿವನ್ನು 1.75 ಲಕ್ಷ ಕ್ಯೂಸೆಕ್‌ನಿಂದ 2 ಲಕ್ಷ ಕ್ಯೂಸೆಕ್‌ಗೆ ಹೆಚ್ಚಿಸಲಾಗಿದೆ.

ಮುಂದಿನ 48 ಗಂಟೆಗಳಲ್ಲಿ ಭಾರಿ ಪ್ರಮಾಣದ ನೀರು ಆಲಮಟ್ಟಿ ಜಲಾಶಯಕ್ಕೆ ಹರಿದು ಬರುವ ನಿರೀಕ್ಷೆಯಿದ್ದು, ಮುಂಜಾಗ್ರತೆ ಕ್ರಮವಾಗಿ ಜಲಾಶಯದ ಹೊರಹರಿವನ್ನು ಹಂತ ಹಂತವಾಗಿ ಹೆಚ್ಚಿಸಲಾಗುತ್ತಿದೆ.

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಅಬ್ಬರ ಹೆಚ್ಚಿದ್ದರಿಂದ ಒಳಹರಿವು ಹೆಚ್ಚುತ್ತಿದೆ. ಇದೇ ರೀತಿ ಮಳೆಯ ಅಬ್ಬರ ಮುಂದುವರೆದರೆ ಹೊರಹರಿವು ಮತ್ತಷ್ಟು ಹೆಚ್ಚಾಗಲಿದೆ.

ಮಹಾರಾಷ್ಟ್ರದ ನವಜಾದಲ್ಲಿ ಮಂಗಳವಾರ 31.6 ಸೆಂ.ಮೀ ದಾಖಲೆಯ ಮಳೆಯಾಗಿದೆ. ಘಟಪ್ರಭಾ ನದಿಯಿಂದಲೂ 50 ಸಾವಿರ ಕ್ಯೂಸೆಕ್‌ಗೂ ಅಧಿಕ ನೀರು ಹರಿದು ಬರುತ್ತಿದೆ. 2.5 ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರು ಬಿಟ್ಟಾಗ ಆಲಮಟ್ಟಿ ಜಲಾಶಯದ ಮುಂಭಾಗದ ಕೃಷ್ಣಾ ತೀರದ ಗ್ರಾಮಗಳ ಜಮೀನಿಗೆ ನೀರು ನುಗ್ಗುವ ಸಾಧ್ಯತೆಯಿದೆ. ಆಲಮಟ್ಟಿ ಜಲಾಶಯಕ್ಕೆ ಸಂಜೆ 6ಕ್ಕೆ 1,11,306 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದಿಂದ 2 ಲಕ್ಷ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. 519.60 ಮೀ ಎತ್ತರದ ಜಲಾಶಯದಲ್ಲಿ 518.92 ಮೀ.ವರೆಗೆ ನೀರು ಇದೆ.

ಪ್ರವಾಹಕ್ಕೊಳಗಾಗಬಹುದಾದ ಕೃಷ್ಣಾ ತೀರದ ಗ್ರಾಮಗಳಲ್ಲಿ ನಿಡಗುಂದಿ ತಾಲೂಕು ಆಡಳಿತ ಆಲಮಟ್ಟಿ ಜಲಾಶಯದ ನೀರು ಬಿಟ್ಟ ಬಗ್ಗೆ ನದಿ ತೀರಕ್ಕೂ ಜನ, ಜಾನುವಾರುಗಳು ತೆರಳದಂತೆ ಡಂಗೂರ ಸಾರಿ ಸೂಚಿಸಲಾಗುತ್ತಿದೆ.

ಆಲಮಟ್ಟಿ ಜಲಾಶಯಕ್ಕೆ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಅಪಾರ ಪ್ರಮಾಣದ ನೀರು ಹರಿದು ಬಂದರೂ ಕೆಬಿಜೆಎನ್‌ಎಲ್ ಸಮರ್ಥವಾಗಿ ನಿರ್ವಹಣೆ ಮಾಡಿದ ಪರಿಣಾಮ ನದಿ ತೀರದಲ್ಲಿ ಇದುವರೆಗೆ ಯಾವುದೇ ಪ್ರವಾಹ ಸ್ಥಿತಿ ಉಂಟಾಗಿಲ್ಲ.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಸೇರಿದ ಕುಡಿಯುವ ನೀರಿನ ಬಾವಿ ಮುಚ್ಚಿಸಿದ ಸವರ್ಣೀಯರು

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಭಾರೀ ಪ್ರದೇಶದಲ್ಲಿ ಸುರಿಯುವ ಪ್ರಮಾಣದ ಮಳೆಯಿಂದಾಗಿ ಕೃಷ್ಣಾ ಹಾಗೂ ಅದರ ಉಪ ನದಿಗಳಿಗೆ ಅಬ್ಬರ ಉಂಟಾಗಿ ಆಲಮಟ್ಟಿ ಜಲಾಶಯಕ್ಕೆ ಅಪಾರ ನೀರು ಹರಿದು ಬರುತ್ತದೆ. ಹೀಗೆ ಹರಿದು ಬರುವ ನೀರನ್ನು ನದಿ ಮುಂಭಾಗಕ್ಕೆ ಬಿಟ್ಟಾಗ ತೀರದ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿಯಾಗುವುದು ಪ್ರತಿ ವರ್ಷ ಕಂಡುಬರುತ್ತಿತ್ತು. ಕೆಲ ಬಾರಿ ಜನವಸತಿಗೂ ನೀರು ನುಗ್ಗಿರುವುದೂ ಇದೆ. ಕಳೆದ ವರ್ಷವೂ ಕೂಡ ನದಿ ತೀರದ ಕೆಲ ಜಮೀನುಗಳಿಗೆ ಹಾನಿಯಾಗಿತ್ತು. ಆದರೆ ಈ ಬಾರಿ ಈ ಪ್ರವಾಹ ಉಂಟಾಗದಂತೆ ಕೆಬಿಜೆಎನ್‌ಎಲ್ ಅಭಿಯಂತರರು ನೀರು ನಿರ್ವಹಣೆ ಮಾಡಿದ್ದರಿಂದ ಪ್ರವಾಹ ಸ್ಥಿತಿ ಎದುರಾಗಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

Download Eedina App Android / iOS

X