ವಿಜಯಪುರ | ಅಭಿವೃದ್ಧಿ ಆತ್ಮಾವಲೋಕನ ಮಾಡಿಕೊಂಡು ಕಾಂಗ್ರೆಸ್‌ಗೆ ಮತ ನೀಡಿ: ಶಾಸಕ ಯಶವಂತರಾಯಗೌಡ ಪಾಟೀಲ

Date:

Advertisements

ಆಗಿರುವ ಮತ್ತು ಆಗಬೇಕಿರುವ ಅಭಿವೃದ್ಧಿ ಕೆಲಸಗಳನ್ನು ಗಮನದಲ್ಲಿರಿಸಿ ಆತ್ಮಾವಲೋಕನ ಮಾಡಿಕೊಂಡು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾದಲ್ಲಿ ನಡೆದ ಜಿಪಂ ವ್ಯಾಪ್ತಿಯ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಅವರ ಪರವಾಗಿ ಮತಯಾಚಿಸಿ ಅವರು ಮಾತನಾಡಿದರು.

ಆಲಗೂರರು ಮಾದರಿಯ ಸಂಸದರಾಗುವ ಎಲ್ಲ ಲಕ್ಷಣಗಳಿವೆ. ಅವರು ವಿದ್ಯಾವಂತರಾಗಿದ್ದು, ನಿಮ್ಮ ಸಮಸ್ಯೆಗಳನ್ನು ಸಂಸತ್ತಿನಲ್ಲಿ ದನಿ ಎತ್ತಲಿದ್ದಾರೆ. ಅನೇಕ ಸಂಸದರು ಕಾಂಗ್ರೆಸ್‌ನಿಂದ ಕೆಲಸ ಮಾಡಿ ಹೋಗಿದ್ದಾರೆ. ಗುಡದಿನ್ನಿ, ಧುಬೆಯಂತಹವರನ್ನು ಈಗಲೂ ನಾವೆಲ್ಲ ನೆನಪಿಸುತ್ತಿದ್ದೇವೆ. ದಶಕಗಳಿಂದ ಕಾಂಗ್ರೆಸ್ ಗೆದ್ದಿಲ್ಲ. ಈ ಬಾರಿ ಬದಲಾವಣೆ ನಿಶ್ಚಿತ ಎಂದರು.

Advertisements

ಗುಜರಾತ್ ಮಾಡೆಲ್ ಹೆಸರು ಹೇಳಿ ಬಂದವರು ದೇಶವನ್ನು ಮಾರಲು ನಿಂತಿದ್ದಾರೆ. ಕ್ಯಾಪಿಟಲಿಸ್ಟ್‌ಗಳ ಕೈಗೆ ದೇಶವನ್ನು ನೀಡಿದ್ದು, ಮೋದಿ ಹಾಗೂ ಅಮಿತ್ ಶಾ ದೇಶ ಮಾರುತ್ತಿದ್ದರೆ ಇನ್ನಿಬ್ಬರಾದ ಅಂಬಾನಿ, ಆದಾನಿಗಳು ತೆಗೆದುಕೊಳ್ಳುತ್ತಿದ್ದಾರೆ. ಭಾವನೆಗಳನ್ನು ಕೆರಳಿಸಿ ಮತ ಕೇಳುವುದಷ್ಟೇ ಮೋದಿಯವರ ಕೆಲಸವಾಗಿದೆ. ಇವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಹೇಳಿದರು.

ಕಾಂಗ್ರೆಸ್ ಈ ದೇಶವನ್ನು ಕಟ್ಟಿದೆ. ಸಂವಿಧಾನ ಉಳಿಸಲು ಅದು ಯಾವತ್ತೂ ಶ್ರಮಿಸುತ್ತಿದೆ. ಬಡವ, ನಿರ್ಗತಿಕರ ಬದುಕನ್ನು ನಾವು ಕಟ್ಟಿದ್ದೇವೆ. ಮೋದಿಯವರು ಆಯತಪ್ಪಿ ಮಾತನಾಡುತ್ತಿದ್ದಾರೆ. ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಹೇಳದೇ ಏನೇನೊ ಮಾತನಾಡುತ್ತಿದ್ದಾರೆ ಎಂದರು.

ಶಾಸ್ತ್ರೀ, ನೆಹರೂ, ಇಂದಿರಾಗಾಂಧಿ, ರಾಜೀವ್‌ ಗಾಂಧಿ ಅವರಂತಹ ಧೀಮಂತರು ದೇಶವನ್ನು ಮುನ್ನೆಲೆಗೆ ತಂದಿದ್ದಾರೆ. ಕಾಂಗ್ರೆಸ್ ಒಂದೇ ಭರವಸೆ ಎಂದು ಹೇಳಿದರು.

ಅಭ್ಯರ್ಥಿ ಪ್ರೊ.ರಾಜು ಆಲಗೂರ ಮಾತನಾಡಿ, ನಮ್ಮ ರಾಜ್ಯ ಕೇಂದ್ರ ಸರ್ಕಾರಕ್ಕೆ ಅತಿ ಹೆಚ್ಚು ತೆರಿಗೆ ನೀಡುತ್ತಿದ್ದರೂ ಅದರ ಪಾಲನ್ನು ನಮಗೆ ಕೊಟ್ಟಿಲ್ಲ. ಸಮಯಕ್ಕೆ ಸರಿಯಾಗಿ ಬರ ಪರಿಹಾರವೂ ನೀಡಲಿಲ್ಲ. ಅದರ ಬದಲಾಗಿ ಉದ್ಯಮಿಗಳ ಲಕ್ಷ ಲಕ್ಷ ಕೋಟಿ ರೂ. ಸಾಲವನ್ನು ಮೋದಿಯವರು ಮನ್ನಾ ಮಾಡಿದರು ಎಂದು ಟೀಕಿಸಿದರು.

ರಾಜ್ಯ ಸರ್ಕಾರ ನುಡಿದಂತೆ ನಡೆದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಹೆಣ್ಣುಮಕ್ಕಳು, ಯುವಕರಿಗೆ ಶಕ್ತಿ ತುಂಬಲಾಗಿದೆ. ಈ ಭಾಗದಲ್ಲೂ ನಿರಂತರ ನೀರು, ನಿಂಬೆ ಅಭಿವೃದ್ಧಿ ಮಂಡಳಿ, ಕೆರೆ ತುಂಬುವುದು ಸೇರಿ ಅನೇಕ ಅಭಿವೃದ್ಧಿ ಕಾರ್ಯಗಳು ಇಂಡಿ ಮತಕ್ಷೇತ್ರದಲ್ಲಾಗಿವೆ. ಆದರೆ, ಮೂರು ಸಲ ಸಂಸದರಾದವರಿಂದ ಯಾವುದೇ ಕೆಲಸವಾಗಲಿಲ್ಲ ಎಂದರು.

ರೈಲು, ಪ್ರವಾಸೋದ್ಯಮ ಪ್ರಗತಿ ಮಾಡಲಿಲ್ಲ. ಒಂದೇ ಭಾರತ ರೈಲನ್ನು ವಿಜಯಪುರಕ್ಕೆ ಓಡಿಸಲಿಲ್ಲ. ರಾಜ್ಯದ ಪರ ಮಾತನಾಡಲಿಲ್ಲ. ಈ ಸಲ ಬದಲಾವಣೆ ತಂದು ತಮ್ಮನ್ನು ಆರಿಸಿದರೆ ಲೋಕಸಭೆ ಕ್ಷೇತ್ರದ ಸಂಪೂರ್ಣ ಚಿತ್ರಣ ಬದಲು ಮಾಡುತ್ತೇನೆ. ತಮ್ಮ ವಿಶ್ವಾಸಕ್ಕೆ ಧಕ್ಕೆಯಾಗದಂತೆ ದುಡಿಯುವೆ. ಇಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯ ಸ್ಥಾಪನೆ, ಆಲಮಟ್ಟಿ ಆಣೆಕಟ್ಟು ಎತ್ತರ ಹೆಚ್ಚಿಸಿ ನೀರು ಕೊಡುವುದು ಸೇರಿದಂತೆ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಹೇಳಿದರು.

ಮುಖಂಡರಾದ ತಮ್ಮಣ್ಣ ಪೂಜಾರಿ, ಬಾಬು ಸಾಹುಕಾರ ಮೇತ್ರಿ, ಎಂ‌.ಆರ್. ಪಾಟೀಲ ಮಾತನಾಡಿದರು. ಚಂದ್ರಶೇಖರ ರೂಗಿ, ಸೋಮು ಬ್ಯಾಳಿ, ಇಲಿಯಾಸ ಬೋರಾಮಣಿ, ಜಾವೇದ್ ಮೊಮಿನ್, ಅಪ್ಪಣ್ಣ ಕಲ್ಲೂರ, ಸಿ.ಎಲ್. ಬರಡೋಲ, ಆನಂದಪ್ಪ ಹುಣಸಗಿ, ಶ್ರೀಮಂತ ಲೋಣಿ, ಸೋಮಶೇಖರ ಬೆಳ್ಳಿ, ಧರ್ಮು ವಾಲೀಕಾರ, ಇಸ್ಮಾಯಿಲ್ ಕಲಬುರಗಿ, ಮೆಹಬೂಬ ಅರಬ್, ಪ್ರಶಾಂತ ಆಲಗೂರ, ಇಮ್ರಾನ್ ಮಕಾನದಾರ ಅನೇಕರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X