ವಿಜಯಪುರ | ಮಹಿಳಾ ವಿವಿ ಗೋಲ್‌ಮಾಲ್‌; ಮರುತನಿಖೆಗೆ ನೂತನ ಸಮಿತಿ ರಚನೆ

Date:

ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿವಿ ಪ್ರವೇಶಾತಿ ಶುಲ್ಕ ಪಾವತಿ ಪ್ರಕ್ರಿಯೆಯಲ್ಲಿ ನಡೆದಿರುವುದಾಗಿ ಆರೋಪಿಸಲಾಗಿರುವ ₹10 ಲಕ್ಷಕ್ಕೂ ಅಧಿಕ ಮೊತ್ತದ ವಂಚನೆ ಪ್ರಕರಣ ಇದೀಗ ಮತ್ತೊಂದು ಹಂತಕ್ಕೆ ತಲುಪಿದೆ. ಪ್ರಕರಣದ ಕುರಿತು ಈ ಹಿಂದೆ ಸಲ್ಲಿಕೆಯಾಗಿರುವ ತನಿಖಾ ವರದಿಯಲ್ಲಿನ ಅಂಶಗಳ ಬಗ್ಗೆ ಸಿಂಡಿಕೇಟ್ ಸಭೆಯಲ್ಲಿ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ, ಸಮಗ್ರ ಮರುತನಿಖೆ ನಡೆಸಲು ಹೊಸ ಸಮಿತಿ ರಚಿಸಲು ವಿಶ್ವವಿದ್ಯಾಲಯ ಮುಂದಾಗಿದೆ.

- Advertisement -

ವಿಶ್ವವಿದ್ಯಾಲಯದ 27ನೇ ಶೈಕ್ಷಣಿಕ ಸಾಲಿನ ಸ್ನಾತಕ ಕೋರ್ಸುಗಳ ಪ್ರವೇಶಾತಿ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಪಾವತಿಸಿದ್ದ ಅರ್ಜಿ ಹಾಗೂ ಪ್ರವೇಶ ಶುಲ್ಕವನ್ನು ಕೆಲ ಸಿಬ್ಬಂದಿ, ಅಧಿಕಾರಿಗಳು ಹಾಗೂ ಪ್ರಾಧ್ಯಾಪಕರು ಪೇಟಿಎಂ ಸೇರಿದಂತೆ ವಿವಿಧ ಡಿಜಿಟಲ್ ಪಾವತಿ ವ್ಯವಸ್ಥೆಗಳ ಮೂಲಕ ವೈಯಕ್ತಿಕ ಖಾತೆಗಳಿಗೆ ವರ್ಗಾಯಿಸಿಕೊಂಡು ವಿಶ್ವವಿದ್ಯಾಲಯಕ್ಕೆ ವಂಚಿಸಿರುವ ಆರೋಪ ಕೇಳಿಬಂದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಈ ಕುರಿತು ಪ್ರೊ. ಗಂಗಾಧರ ಬಿ. ಸೋನಾರ ಅವರ ನೇತೃತ್ವದಲ್ಲಿ ಈ ಹಿಂದೆ ರಚಿಸಲಾಗಿದ್ದ ಸಮಿತಿ ತನಿಖೆ ನಡೆಸಿ ಕುಲಪತಿಗೆ ವರದಿ ಸಲ್ಲಿಸಿತ್ತು. ಆದರೆ, ತನಿಖಾ ಸಮಿತಿಯಲ್ಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರೇ ಇದ್ದ ಹಿನ್ನೆಲೆಯಲ್ಲಿ ವರದಿಯ ನಿಷ್ಪಕ್ಷಪಾತತೆ ಕುರಿತು ಸಿಂಡಿಕೇಟ್ ಸಭೆಯಲ್ಲಿ ಪ್ರಶ್ನೆಗಳು ಎದ್ದಿವೆ ಎನ್ನಲಾಗಿದೆ.

ಸಿಂಡಿಕೇಟ್‌ನಲ್ಲಿ ಮಹತ್ವದ ನಿರ್ಧಾರ
ಉಡುತಡಿಯಲ್ಲಿ ಇತ್ತೀಚೆಗೆ ನಡೆದ ವಿಶ್ವವಿದ್ಯಾಲಯದ 156ನೇ ಸಿಂಡಿಕೇಟ್ ಸಭೆಯಲ್ಲಿ ಪ್ರಕರಣವನ್ನು ಮತ್ತೊಮ್ಮೆ ಸಮಗ್ರವಾಗಿ ಪರಿಶೀಲಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಹೊಸ ಸಮಿತಿಯಲ್ಲಿ ಸಿಂಡಿಕೇಟ್ ಸದಸ್ಯರೊಬ್ಬರು, ಆರ್ಥಿಕ ಅಧಿಕಾರಿ, ಯುಯುಎಂಎಸ್ ಅಧಿಕಾರಿ ಹಾಗೂ ಹಿರಿಯ ಪ್ರಾಧ್ಯಾಪಕರನ್ನು ಒಳಗೊಂಡಂತೆ ಸಮಿತಿಯನ್ನು ಪುನರ್‌ರಚಿಸಲು ಸಭೆ ಸಲಹೆ ನೀಡಿದೆ.

ಈ ಕುರಿತು ಮಾತನಾಡಿರುವ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ, ಈಗಾಗಲೇ ನೇಮಕವಾಗಿದ್ದ ಸಮಿತಿಯಲ್ಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಇದ್ದ ಕಾರಣ ಸಿಂಡಿಕೇಟ್ ಸಭೆಯಲ್ಲಿ ಆಕ್ಷೇಪ ವ್ಯಕ್ತವಾಗಿದೆ. ಹೀಗಾಗಿ, ಸಿಂಡಿಕೇಟ್ ಸದಸ್ಯರು ಸೇರಿದಂತೆ ವಿವಿಧ ವಿಭಾಗಗಳ ಅಧಿಕಾರಿಗಳನ್ನು ಒಳಗೊಂಡ ಹೊಸ ಸಮಿತಿ ರಚಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಹೊಸ ಸಮಿತಿಯು ಶುಲ್ಕ ಪಾವತಿ ಪ್ರಕ್ರಿಯೆ, ಹಣದ ವರ್ಗಾವಣೆ, ಸಂಬಂಧಿಸಿದ ದಾಖಲೆಗಳು ಹಾಗೂ ಈ ಹಿಂದಿನ ವರದಿಯಲ್ಲಿನ ಅಂಶಗಳನ್ನು ಪರಿಶೀಲಿಸಿ ಸಿಂಡಿಕೇಟ್‌ಗೆ ವರದಿ ಸಲ್ಲಿಸಲಿದೆ. ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

₹10 ಲಕ್ಷಕ್ಕೂ ಅಧಿಕ ಹಣದ ವಂಚನೆ ಆರೋಪ
ನೂರಾರು ವಿದ್ಯಾರ್ಥಿನಿಯರು ವಿಶ್ವವಿದ್ಯಾಲಯಕ್ಕೆ ಪಾವತಿಸಿದ್ದ ₹10 ಲಕ್ಷಕ್ಕೂ ಅಧಿಕ ಪ್ರವೇಶ ಶುಲ್ಕವನ್ನು ಕೆಲ ಸಿಬ್ಬಂದಿ, ಅಧಿಕಾರಿಗಳು ಹಾಗೂ ಪ್ರಾಧ್ಯಾಪಕರು ಪೇಟಿಎಂ ಮೂಲಕ ತಮ್ಮ ಖಾತೆಗಳಿಗೆ ಪಾವತಿಸಿಕೊಂಡಿರುವುದು ಹಿಂದಿನ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಸಿಂಡಿಕೇಟ್ ಸದಸ್ಯರೊಬ್ಬರು ತಿಳಿಸಿದ್ದಾರೆ.ಈ ವಂಚನೆ ಪ್ರಕರಣದಲ್ಲಿ ವಿಶ್ವವಿದ್ಯಾಲಯದ ಪ್ರಮುಖ ಹುದ್ದೆಯಲ್ಲಿರುವ ಕೆಲವರು ಭಾಗಿಯಾಗಿರುವುದು ಹಿಂದಿನ ತನಿಖೆಯಲ್ಲಿ ದೃಢಪಟ್ಟಿದೆ ಎನ್ನಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕೈಗೊಳ್ಳಬೇಕಾದ ಕಾನೂನು ಕ್ರಮದ ಕುರಿತು ಹಿಂದಿನ ಸಮಿತಿ ಸ್ಪಷ್ಟ ಶಿಫಾರಸು ಮಾಡಿಲ್ಲ ಎಂಬ ಮಾತುಗಳು ಕೇಳಿಬಂದಿವೆ.

ಹೀಗಾಗಿ, ಪ್ರಕರಣದ ಸಂಪೂರ್ಣ ಹಿನ್ನೆಲೆ, ಹಣದ ವಹಿವಾಟು, ಪ್ರವೇಶಾತಿ ಪ್ರಕ್ರಿಯೆಯಲ್ಲಿನ ಲೋಪ ಹಾಗೂ ವಂಚನೆಯಲ್ಲಿ ಭಾಗಿಯಾಗಿರುವವರ ಪಾತ್ರವನ್ನು ಹೊಸ ಸಮಿತಿ ಸಮಗ್ರವಾಗಿ ಪರಿಶೀಲಿಸುವ ನಿರೀಕ್ಷೆಯಿದೆ.

ನಿಷ್ಪಕ್ಷಪಾತ ತನಿಖೆಗೆ ಆಗ್ರಹ
ವಿಶ್ವವಿದ್ಯಾಲಯದ ಆಂತರಿಕ ವ್ಯವಸ್ಥೆಯಲ್ಲಿಯೇ ಪ್ರಕರಣಕ್ಕೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ಇರುವುದರಿಂದ ಹಿಂದಿನ ತನಿಖೆಯ ಬಗ್ಗೆ ಅನುಮಾನಗಳು ಮೂಡಿವೆ. ಈ ಹಿನ್ನೆಲೆಯಲ್ಲಿ ಹೊಸ ಸಮಿತಿ ಯಾವುದೇ ಒತ್ತಡಕ್ಕೆ ಒಳಗಾಗದೆ ನಿಷ್ಪಕ್ಷಪಾತ ಹಾಗೂ ಪಾರದರ್ಶಕ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಶಿಫಾರಸು ಮಾಡಬೇಕು ಎಂಬ ಆಗ್ರಹ ಕೇಳಿಬಂದಿದೆ.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಉನ್ನತ ಶಿಕ್ಷಣ ಇಲಾಖೆ ಹಾಗೂ ರಾಜ್ಯಪಾಲರು ಮಧ್ಯಪ್ರವೇಶಿಸಿ ತನಿಖೆಯ ಮೇಲೆ ನಿಗಾ ವಹಿಸಬೇಕು. ವಿದ್ಯಾರ್ಥಿನಿಯರಿಂದ ಸಂಗ್ರಹಿಸಿದ ಶುಲ್ಕದ ಹಣ ದುರ್ಬಳಕೆಯಾಗಿದ್ದರೆ, ಅದನ್ನು ವಸೂಲಿ ಮಾಡುವುದರ ಜೊತೆಗೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವೂ ವ್ಯಕ್ತವಾಗಿದೆ.

ಒಟ್ಟಾರೆ, ವಿದ್ಯಾರ್ಥಿನಿಯರಿಂದ ಸಂಗ್ರಹಿಸಲಾದ ಪ್ರವೇಶ ಶುಲ್ಕದ ಹಣದಲ್ಲಿ ನಡೆದಿದೆ ಎನ್ನಲಾದ ವಂಚನೆ ಪ್ರಕರಣಕ್ಕೆ ಹೊಸ ಸಮಿತಿಯ ಮರುತನಿಖೆ ಮಹತ್ವ ಪಡೆದುಕೊಂಡಿದೆ. ಹಣದ ವಹಿವಾಟಿನ ಸಂಪೂರ್ಣ ವಿವರ ಹಾಗೂ ತಪ್ಪಿತಸ್ಥರ ಪಾತ್ರವನ್ನು ಪಾರದರ್ಶಕವಾಗಿ ಬಹಿರಂಗಪಡಿಸಿ, ವರದಿಯ ಆಧಾರದ ಮೇಲೆ ಯಾವುದೇ ಮುಲಾಜಿಲ್ಲದೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಮೂಲಕ ವಿಶ್ವವಿದ್ಯಾಲಯದ ಆಡಳಿತ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನು ಮರುಸ್ಥಾಪಿಸಬೇಕಿದೆ.

WhatsApp Image 2025 02 05 at 18.09.20 1
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ರೈತರಿಗೆ ನ್ಯಾಯ ಓದಗಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ : ಹರಿನಾಥರೆಡ್ಡಿ

ಅಭಿವೃದ್ದಿ ಹೆಸರಿನಲ್ಲಿ ಬೇನಾಮಿ ಸಂಸ್ಥೆಯನ್ನು ಸ್ಥಾಪಿಸಿ ಎಸ್ಸಿ, ಎಸ್ಟಿ ಹಾಗೂ ಅಲ್ಪಸಂಖ್ಯಾತರ...

ಹವಾಮಾನ ವರದಿ | ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ

ಮನ್ನಾರ್ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ...

ಬೀದರ್‌ | ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಶಿಸ್ತು ಮೈಗೂಡಿಸಿಕೊಳ್ಳಿ : ಜಯಕುಮಾರ ಶಿಂಧೆ

ಸಮಯ ಪ್ರಜ್ಞೆ ಹಾಗೂ ಶಿಸ್ತು ಮೈಗೂಡಿಸಿಕೊಳ್ಳುವುದರಿಂದ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು...

ಮುದ್ದೇಬಿಹಾಳದಲ್ಲಿ ತೀವ್ರ ಬರ; ಕಾಲುವೆಗಳಿಗೆ ನೀರು ಹರಿಸಲು ಶಾಸಕ ನಾಡಗೌಡ ಮನವಿ

ಬರದ ಬಿಸಿಲಿಗೆ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳ ಗ್ರಾಮೀಣ ಬದುಕು ತತ್ತರಿಸುತ್ತಿರುವ...