ವಿಜಯಪುರ | ಕನ್ನಡರಾಜ್ಯೋತ್ಸವ 50ರ ಸಂಭ್ರಮ; ಸಾಂಸ್ಕೃತಿಕ ನೃತ್ಯ ತಂಡಗಳ ಸ್ಪರ್ಧೆಗೆ ಆಹ್ವಾನ

Date:

Advertisements

ಕನ್ನಡರಾಜ್ಯೋತ್ಸವ 50ರ ಸಂಭ್ರಮದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾ ಮಟ್ಟದ ಸಾಂಸ್ಕೃತಿಕ ನೃತ್ಯ ತಂಡಗಳ ಸ್ಪರ್ಧೆಗಳಿಗೆ ಆಹ್ವಾನಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ತಿಳಿಸಿದ್ದಾರೆ.

ವಿಜಯಪುರ ನಗರದಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್, ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಅಕ್ಟೋಬರ್‌ 30 ಮತ್ತು 31ರಂದು ಪ್ರದರ್ಶನ ನಡೆಯಲಿವೆ” ಎಂದು ತಿಳಿಸಿದ್ದಾರೆ. ‌

“ಅಕ್ಟೋಬರ್‌ 30ರಂದು ಪ್ರೌಢ ಹಾಗೂ ಪದವಿ ಪೂರ್ವ ಮಹಾವಿದ್ಯಾಲಯ ಮತ್ತು ಖಾಸಗಿ ನೃತ್ಯ ತಂಡದವರು ಪ್ರದರ್ಶನ ನೀಡುವವರು. 31ರಂದು ಪದವಿ ಮಹಾವಿದ್ಯಾಲಯ, ಶಿಕ್ಷಣ ಮಹಾವಿದ್ಯಾಲಯ ಹಾಗೂ ಮಹಿಳಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರು ಹಾಗೂ ಖಾಸಗಿ ನೃತ್ಯ ತಂಡಗಳು ಭಾಗವಹಿಸಬಹುದಾಗಿದೆ. ಒಂದು ತಂಡ ಒಂದೇ ನೃತ್ಯ ಪ್ರದರ್ಶನ ನೀಡಲು ಅವಕಾಶ ಕಲ್ಪಿಸಲಾಗಿದೆ” ಎಂದರು.

Advertisements

“ಭಾಗವಹಿಸಿದ ಎಲ್ಲ ತಂಡಗಳಿಗೆ ಪ್ರಮಾಣ ಪತ್ರ ನೀಡುವ ಜತೆಗೆ ಪ್ರೌಢ ಹಾಗೂ ಪ.ಪೂ. ಕಾಲೇಜಿನ ತಂಡಗಳಿಗೆ ಪ್ರಥಮ ಬಹುಮಾನ ₹10,000, ದ್ವಿತೀಯ ಬಹುಮಾನ ₹7,500 ಮತ್ತು ತೃತೀಯ ಬಹುಮಾನ ₹5,000 ನೀಡಲಾಗುವುದು. ಪದವಿ ಮಹಾವಿದ್ಯಾಲಯ, ಶಿಕ್ಷಣ ಮಹಾವಿದ್ಯಾಲಯ, ಮಹಿಳಾ ವಿಶ್ವವಿದ್ಯಾಲಯ ಹಾಗೂ ಖಾಸಗಿ ನೃತ್ಯ ತಂಡಗಳಿಗೆ ಪ್ರಥಮ ಬಹುಮಾನಕ್ಕೆ ₹10,000, ದ್ವಿತೀಯ ಬಹುಮಾನ ₹7,500 ಮತ್ತು ತೃತೀಯ ಬಹುಮಾನಕ್ಕೆ ₹5,000 ನೀಡಲಾಗುವುದು” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಎಕ್ಸಿಬಿಷನ್‌ನಲ್ಲಿ ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು; ಐವರ ಬಂಧನ

“ಭಾಗವಹಿಸುವವರು ಕನ್ನಡ ನಾಡು-ನುಡಿಯ ಸಾಹಿತ್ಯ, ಚಲನಚಿತ್ರ ಹಾಗೂ ಕವಿಗಳು ಬರೆದ ಕನ್ನಡ ಹಾಡುಗಳನ್ನೇ ಹಾಡಬೇಕು. ಹೆಚ್ಚಿನ ಮಾಹಿತಿಗಾಗಿ ಡಾ. ಮಾಧವ ಗುಡಿ ಮೊ.- 7204278432 ಮತ್ತು ಸುರೇಶ ಜತ್ತಿ – 7795751224ಕ್ಕೆ ಸಂಪರ್ಕಿಸಬಹುದು” ಎಂದು ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X