ವಿಜಯಪುರ | ಸಮಾಜ ತಿದ್ದುವ ಶಕ್ತಿ ಕನ್ನಡ ಸಾಹಿತ್ಯ ಪರಿಷತ್ತಿಗೆ ಇದೆ: ದೊಡ್ಡಣ್ಣ ಬಜಂತ್ರಿ

Date:

ಕನ್ನಡ ಸಾಹಿತ್ಯ ಪರಿಷತ್ತು ನೂರು ವರ್ಷಗಳ ಇತಿಹಾಸವಿನ್ನು ಹೊಂದಿದೆ. ಈ ಮುಖಾಂತರ ನಾಡು ನುಡಿ ಸಂಸ್ಕೃತಿಗಾಗಿ ಶ್ರಮಿಸಿದ ಜೀವಿಗಳು ಸ್ಮರಿಸುವ ಮತ್ತು ಸಮಾಜಕ್ಕೆ ಸಂದೇಶ ನೀಡುವ ಕೆಲಸ ಮಾಡುತ್ತ ಬಂದಿದೆ ಎಂದು ದೊಡ್ಡಣ್ಣ ಬಜಂತ್ರಿ ಅಭಿಪ್ರಾಯ ವ್ಯಕ್ತಪಡಿಸಿದರು.

- Advertisement -

ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಭಾ ಭವನದಲ್ಲಿ ಭಾನುವಾರ ಜರುಗಿದ ಮ ಮ ಹುಂಡೇಕಾರ, ಸಾ ಮ ಹುಂಡೇಕಾರ ಅವರ ಸ್ಮರಣಾರ್ಥವಾಗಿ ಏರ್ಪಡಿಸಿದ್ದ ದತ್ತಿ ಉಪನ್ಯಾಸ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಸಮಾಜದಲ್ಲಿರುವ ಮೇಲುಕೀಳು ತೊಡೆದು ಸಮ ಸಮಾಜ ನಿರ್ಮಾಣ ಮಾಡುವ ಶಕ್ತಿ ಸಾಹಿತ್ಯಕ್ಕೆ ಇದೆ. ಪ್ರತಿ ದಿನವೂ ಕ್ರಿಯಾಶೀಲವಾಗಿ ಸಾಹಿತ್ಯದ ಚಟುವಟಿಗಳನ್ನು ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತಾ ಬಂದಿದೆ. ಈ ರೀತಿ ಸಮಾಜ ತಿದ್ದುವ ಶಕ್ತಿ ಕನ್ನಡ ಸಾಹಿತ್ಯ ಪರಿಷತ್ತಿಗೆ ಇದೆ” ಎಂದರು.

ಉಪನ್ಯಾಸಕರಾಗಿ ಮಲ್ಲಮ್ಮ ಬಿರಾದಾರ ಅವರು ಜನಪದ ಸಾಹಿತ್ಯ ಕುರಿತು ಮಾತನಾಡಿ, “ಜನಪದ ಸಾಹಿತ್ಯ ಸಾವನ್ನು ಧಿಕ್ಕರಿಸುವ ಜೀವಂತ ಪಳೆಯುಳಿಕೆ. ಮಣ್ಣನ್ನು ಪೂಜಿಸುವ ಮತ್ತು ಪ್ರೀತಿಸುವ ಸಂಸ್ಕಾರ ಜನಪದರಿಗಿದೆ. ಜನಪದ ಸಾಹಿತ್ಯ ಕಲೆಗಳು ಮಾನವ ಸಂಸ್ಕೃತಿ ಸಂಪ್ರದಾಯಗಳ ಆಚರಣೆ ಸಮಾಜದಲ್ಲಿ ಸಾಮರಸ್ಯ ತರುತ್ತವೆ” ಎಂದರು.

ಉಪನ್ಯಾಸ ನೀಡಿದ ಸಂಗಮೇಶ ಬದಾಮಿ ಅವರು ವಿಜಯಪುರ ಜಿಲ್ಲೆಯಲ್ಲಿ ರಂಗಭೂಮಿ ಬೆಳದು ಬಂದ ಬಗೆ ಮತ್ತು ಅದು ಸಮಾಜಕ್ಕೆ ನೀಡಿದ ಕಾಣಿಕೆ ಕುರಿತು ಮಾತನಾಡಿ, “ರಂಗಭೂಮಿ ಸಮಾಜದ ಕನ್ನಡಿ. ಅದು ನಮ್ಮ ಬಿಂಬವನ್ನು ಪ್ರತಿನಿಧಿಸುತ್ತದೆ. ಸಾಂಸ್ಕೃತಿಕ ನಿರ್ಮಾಣ ಮಾಡುವಲ್ಲಿ ರಂಗಭೂಮಿ ಪಾತ್ರ ದೊಡ್ಡದು” ಎಂದರು.

ಮುಖ್ಯ ಅತಿಥಿಯಾಗಿ ಡಾ ಸುಮಾ ಬೋಳರಡ್ಡಿ ಮಾತನಾಡಿ, “ಮಕ್ಕಳಲ್ಲಿ ಸಂಸ್ಕಾರ ನೀಡುವುದು ಬಹಳ ಮುಖ್ಯ. ಪರಿಷತ್ತು ಇಂತಹ ಕಾರ್ಯಕ್ರಮ ಹಮ್ಮಿಕೊಳುವುದರ ಮೂಲಕ ಸಮಾಜವನ್ನು ನೈತಿಕ ಮಾರ್ಗದಲ್ಲಿ ತರಲು ಸಾಧ್ಯವಾಗುತ್ತದೆ” ಎಂದರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವಹಿಸಿ ಡಾ ಸಂಗಮೇಶ ಮೇತ್ರಿ ಮಾತನಾಡಿ, “ವಿಜಯಪುರ ಜಿಲ್ಲೆ ಜನಪದ ರಂಗಭೂಮಿಯ ಹೆಬ್ಬಾಗಿಲು. ಜನಪದ ಆಟಗಳು ಉತ್ತರ ಕರ್ನಾಟಕದ ತುಂಬ ಬೆಳಯಲು ಕಾರಣ ವಿಜಯಪುರ ಜಿಲ್ಲೆಯ ರಂಗ ಕಲಾವಿದರು. ಅದೃಷ್ಯಪ್ಪ ಮಾನ್ವಿ ಅಂತಹ ಕಲಾವಿದರ ಹುಟ್ಟೂರು ವಿಜಯಪುರ ಜಿಲ್ಲೆಯಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ‌ಬೆಳಗಾವಿ-ಗೋವಾ ರಸ್ತೆ ದುರಸ್ತಿ ಕಾಮಗಾರಿ; ಸಚಿವ ಸತೀಶ್ ಜಾರಕಿಹೊಳಿ ಚಾಲನೆ

ವೇದಿಕೆ ಮೇಲೆ ದತ್ತಿ ದಾನಿಗಳಾದ ವಿವೇಕ ಹುಂಡೇಕಾರ, ವಿಜಯ ಹುಂಡೇಕಾರ, ಎಂ ಎ ಅವಟಿ ದತ್ತಿ ಸಂಚಾಲಕ ರಾಜಾಸಾಹೇಬ ಶಿವನಗುತ್ತಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹಾಸಿಂಪೀರ ವಾಲೀಕಾರ, ಸುಖದೇವಿ ಅಲಬಾಳಮಠ, ವಿಜಯಪುರ ನಗರ ಘಟಕ ಅಧ್ಯಕ್ಷೆ ಅನ್ನಪೂರ್ಣ ಬೆಳ್ಳಣ್ಣವರ, ತಿಕೋಟಾ ತಾಲೂಕ ಅಧ್ಯಕ್ಷ ಸಿದ್ದ್ರಾಮಯ್ಯ ಲಕ್ಕುಂಡಿಮಠ, ಕಮಲಾ ಮುರಾಳಿ, ವಿದ್ಯಾವತಿ ಅಂಕಲಗಿ, ರಜಾಕ ಮುಲ್ಲಾ, ರಮೇಶ ಜಾದವ, ಜಿ ಎಸ್ ಬಳ್ಳೂರ, ರಾಮನಗೌಡ ಪಾಟೀಲ, ಸುನೀಲ್ ಒಣರೊಟ್ಟಿ, ಶಾಂತಾ ವಿಭೂತಿ, ಎಸ್ ಜಿ ಜಂಗಮಶೆಟ್ಟಿ, ಕೆ ಎಫ್ ಅಂಕಲಗಿ, ಗಂಗಮ್ಮ ರೆಡ್ಡಿ, ಎ ಜಿ ಪಾಟೀಲ, ಅಲಿಸಾಬ ಕಡಕೆ, ಅಹ್ಮದ ವಾಲೀಕಾರ, ಎಂ ಎಂ ಅಂದಾನಿಮಠ, ಅನಿತಾ ಕಾಂಬಳೆ, ಈರಣ್ಣಾ ಮಾಮನೆ, ಶರಣಪ್ಪ ಬಿರಾದಾರ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...