ವಿಜಯಪುರ | ಕರ್ನಾಟಕ ರಾಜ್ಯ 44ನೇ ಚಿಕ್ಕಮಕ್ಕಳ ತಜ್ಞರ ಸಮ್ಮೇಳನ: ಸಚಿವರಿಂದ ಉದ್ಘಾಟನೆ

Date:

ಸಮಾಜದಲ್ಲಿ ಉತ್ತಮ ಮತ್ತು ಆರೋಗ್ಯ ಪೂರ್ಣ ಪರಿಸರ ಒದಗಿಸಲು ವಿಜ್ಞಾನ, ತಂತ್ರಜ್ಞಾನ ಹಾಗೂ ಸಹಾನಭೂತಿ ಒಗ್ಗೂಡಿ ಸಾಗಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅವರು ಕರ್ನಾಟಕ ರಾಜ್ಯ 44ನೇ ಚಿಕ್ಕಮಕ್ಕಳ ತಜ್ಞರ ಸಮ್ಮೇಳನ ಕುರಿತು ಮಾತನಾಡಿದರು.

- Advertisement -

ವಿಜಯಪುರ ನಗರದಲ್ಲಿ ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯ ಬಿ ಎಂ ಪಾಟೀಲ ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಶಿಶುರೋಗ ವಿಭಾಗ, ಭಾರತೀಯ ಚಿಕ್ಕಮಕ್ಕಳ ತಜ್ಞರ ಸಂಘ, ಕರ್ನಾಟಕ ಚಿಕ್ಕಮಕ್ಕಳ ತಜ್ಞರ ತಂಡ ಹಾಗೂ ಡಾ. ಬಿದರಿಯವರ ಅಶ್ವಿನಿ ಇನ್ಸ್‌ಟಿಟ್ಯೂಟ್ ಆಫ್ ಚೈಲ್ಡ್ ಹೆಲ್ತ್ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ 39ನೇ ದಕ್ಷಿಣ ಭಾರತ ಚಿಕ್ಕಮಕ್ಕಳ ತಜ್ಞರ ಸಮ್ಮೇಳನ ಹಾಗೂ ಕರ್ನಾಟಕ ರಾಜ್ಯ 44ನೇ ಚಿಕ್ಕಮಕ್ಕಳ ತಜ್ಞರ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಪ್ರತಿ ಮಗುವಿಗೆ ಜ್ಞಾನ, ನಾವೀನ್ಯತೆ ಮತ್ತು ಆರೈಕೆ ಈ ಬಾರಿಯ ಸಮ್ಮೇಳನದ ಘೋಷವಾಕ್ಯವಾಗಿದೆ. ಇಲ್ಲಿ ಚರ್ಚಿಸುವ ವಿಚಾರಗಳು ಮತ್ತು ಕೈಗೊಳ್ಳುವ ನಿರ್ಣಯಗಳು ಮಕ್ಕಳ ಆರೋಗ್ಯಪೂರ್ಣ ಭವಿಷ್ಯಕ್ಕೆ ಅಗತ್ಯವಾಗಿರಲು ಕ್ರಮಗಳನ್ನು ಕೈಗೊಳ್ಳಲು ಸಹಾಯವಾಗಲಿವೆ. ಪ್ರತಿಯೊಂದು ಮಗುವೂ ಆರೋಗ್ಯವಾಗಿ ಬೆಳೆದು ಉತ್ತಮವಾಗಿ ಕಲಿತು, ತನ್ನ ಕನಸನ್ನು ನನಸು ಮಾಡಿಕೊಳ್ಳಲು ಮತ್ತು ಈ ಮೂಲಕ ಭವ್ಯ ಭಾರತಕ್ಕೆ ಕೊಡುಗೆ ನೀಡಲು ಪೂರಕವಾಗಲಿವೆ ಎಂಬ ವಿಶ್ವಾಸವಿದೆ” ಎಂದು ಹೇಳಿದರು.

“ಪ್ರತಿಯೊಂದು ಮಗುವಿನ ಹಿನ್ನೆಲೆ ಅಥವಾ ಭೌಗೋಳಿಕತೆಯನ್ನು ಲೆಕ್ಕಿಸದೆ, ಸಕಾಲಿಕ, ಗುಣಮಟ್ಟ ಹಾಗೂ ಸಮಾನ ಆರೈಕೆಯನ್ನು ಒದಗಿಸುವುದು ಇಂದು ತುರ್ತಾಗಿ ಆಗಬೇಕಿದೆ. ನೀತಿ ನಿರೂಪಕರು, ಶಿಕ್ಷಕರು, ವೈದ್ಯರು ಮತ್ತು ಸಂಶೋಧಕರು ಮಕ್ಕಳನ್ನು ಬದುಕಿಸುವುದು ಮಾತ್ರವಲ್ಲದೇ, ಈ ನಿಟ್ಟಿನಲ್ಲಿ ರೂಪಿಸಬೇಕಿರುವ ಯೋಜನೆಗಳ ಬಗ್ಗೆ ಸಾಮೂಹಿಕವಾಗಿ ಜವಾಬ್ದಾರಿ ವಹಿಸಬೇಕಿದೆ. ಇಂಥ ಸಮ್ಮೇಳನಗಳನ್ನು ಆಯೋಜಿಸುವ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ಮಕ್ಕಳ ಹಿತ ಕಾಪಾಡುವ ಮನಸುಗಳನ್ನು ಒಟ್ಟುಗೂಡಿಸಲು ಸಾಧ್ಯವಾಗುತ್ತದೆ” ಎಂದರು.

“ಹೊಸ ಆಲೋಚನೆಗಳು, ಸಹಯೋಗದ ಸಂಶೋಧನೆ ಮತ್ತು ಸುಧಾರಿತ ಚಿಕಿತ್ಸೆ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ನಿರ್ಣಾಯಕ ಪಾತ್ರ ವಹಿಸುತ್ತವೆ. ಮಕ್ಕಳ ಹಿರಿಯ ತಜ್ಞವೈದ್ಯರು, ಸಂಘದ ಪದಾಧಿಕಾರಿಗಳು, ಉದಯೋನ್ಮುಖ ಯುವ ವೃತ್ತಿಪರ ವೈದ್ಯರು ಇಲ್ಲಿ ಸೇರುವ ಮೂಲಕ ಎಲ್ಲರೂ ಒಗ್ಗೂಡಿ ಶಿಶುಮರಣ ಪ್ರಮಾಣವನ್ನು ಕಡಿಮೆ ಮಾಡಲು, ಚಿಕ್ಕಮಕ್ಕಳ ಕಾಯಿಲೆಗಳನ್ನು ನಿಭಾಯಿಸಲು, ಹದಿಹರೆಯದವರ ಮಕ್ಕಳಲ್ಲಿ ಆರೋಗ್ಯವನ್ನು ಬಲಪಡಿಸುವ ಮೂಲಕ ಭವ್ಯ ಭಾರತದ ನಿರ್ಮಾಣಕ್ಕೆ ಕೊಡುಗೆ ನೀಡಲು ಸಾಧ್ಯವಾಗಲಿದೆ” ಎಂದು ಹೇಳಿದರು.

“ಕರ್ನಾಟಕ ಕೈಗಾರಿಕೆ ಮತ್ತು ಆರ್ಥಿಕವಾಗಿ ಮುಂದುವರೆದಿದ್ದು, ಹೊಸ ಕೈಗಾರಿಕಾ ನೀತಿ 2025-2030 ಮತ್ತು ಕ್ವಿನ್‌(KWIN) ಸಿಟಿಯಂಥ ಭವಿಷ್ಯಕ್ಕೆ ಸಿದ್ಧವಾದ ಪರಿಸರ ವ್ಯವಸ್ಥೆಗಳನ್ನು ಒದಗಿಸಲು ಈಗಾಗಲೇ ಕ್ರಮ ಕೈಗೊಂಡಿದೆ. ಇದರಲ್ಲಿ ಮಾನವೀಯ ನೆಲೆಯಲ್ಲಿ ತಾಯಿ ಮತ್ತು ಮಕ್ಕಳ ಆರೋಗ್ಯ ಅಭಿವೃದ್ಧಿಯೂ ಸೇರಿದೆ. ಉತ್ತಮ ಆರೋಗ್ಯಕ್ಕೆ ಕೈಜೋಡಿಸಲು ನಾವು ಬದ್ಧರಾಗಿದ್ದೇವೆ. ಬಿಎಲ್‌ಡಿಇ ಸಂಸ್ಥೆ ಮತ್ತು ಡೀಮ್ಡ್ ವಿಶ್ವವಿದ್ಯಾಲಯ ಶೈಕ್ಷಣಿಕ ಶ್ರೇಷ್ಠತೆ, ಕೌಶಲ್ಯ ಅಭಿವೃದ್ಧಿ ಮತ್ತು ಆರೋಗ್ಯ ರಕ್ಷಣೆಯಲ್ಲಿ ನಾವೀನ್ಯತೆ ಒದಗಿಸಲು ಸಕಲ ರೀತಿಯಲ್ಲಿ ತೊಡಗಿಸಿಕೊಂಡಿದೆ” ಎಂದು ಸಚಿವರು ತಿಳಿಸಿದರು.

ಸಂಘದ ರಾಜ್ಯಾಧ್ಯಕ್ಷ ಡಾ. ಎಸ್ ವಿ ಪಾಟೀಲ ಮಾತನಾಡಿ, “ಜವಾಬ್ದಾರಿ ವಹಿಸಿಕೊಂಡ ನಂತರ ಇಟ್ಟುಕೊಂಡಿದ್ದ ಗುರಿಗಳನ್ನು ಈಡೇರಿಸಿದ್ದೇನೆ. ರಾಜ್ಯದ ಎಲ್ಲ ಜಿಲ್ಲಾ ಘಟಕಗಳನ್ನು ಬಲಪಡಿಸಿದ್ದೇವೆ. ವೃತ್ತಿ ನೈಪುಣ್ಯತೆ ಹೆಚ್ಚಿಸುವುದು ಮತ್ತು ನೀತಿ ಸಂಹಿತೆ ಪಾಲನೆ, ನವಜಾತ ಶಿಶುಗಳ ಆರೋಗ್ಯ ಕಾಪಾಡುವುದು, ಮಕ್ಕಳ ಆರೋಗ್ಯ ಸಂರಕ್ಷಣೆ ಚಟುವಟಿಕೆಗಳಿಗೆ ಕಳೆದ ಒಂದು ವರ್ಷದಲ್ಲಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ” ಎಂದು ತಿಳಿಸಿದರು.

ಡಾ. ಯೋಗೇಶ ಪಾರೀಖ ಮಾತನಾಡಿ, “ಕರ್ನಾಟಕ ಚಿಕ್ಕಮಕ್ಕಳ ತಜ್ಞರ ಸಂಘ ಅತ್ಯುತ್ತಮವಾಗಿ ಕೆಲಸ ಮಾಡಿದೆ” ಎಂದು ಶ್ಲಾಘಿಸಿದರು.

ಇದೇ ವೇಳೆ ಸಚಿವರು ಸಮ್ಮೇಳನದ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿದರು. ಸಂಘದ ರಾಜ್ಯ ಕಾರ್ಯದರ್ಶಿ ಡಾ. ಸಿದ್ದು ಚರಕಿ ವರದಿ ವಾಚಿಸಿದರು.

ಈ ಸುದ್ದಿ ಓದಿದ್ದೀರಾ? ಯಲ್ಲಾಪುರ | ರಾತ್ರಿ ಪೂರ್ತಿ ಅಕ್ರಮವಾಗಿ ಮರಳು ಸಾಗಾಟ; ಅರಣ್ಯ ಇಲಾಖೆಯ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ ಎಂ ಜಯರಾಜ, ಕುಲಪತಿ ಡಾ. ಅರುಣ ಚಂ. ಇನಾಮದಾರ, ರಜಿಸ್ಟ್ರಾರ್ ಡಾ. ಆರ್ ವಿ ಕುಲಕರ್ಣಿ, ಪ್ರಭಾರ ಪ್ರಾಚಾರ್ಯೆ ಡಾ. ತೇಜಶ್ವಿನಿ ವಲ್ಲಭ, ಚಿಕ್ಕಮಕ್ಕಳ ತಜ್ಞರ ಸಂಘದ ರಾಷ್ಟ್ರ ಮತ್ತು ರಾಜ್ಯ ಘಟಕಗಳ ಪದಾಧಿಕಾರಿಗಳಾದ ಡಾ. ಬಸವರಾಜ ಜಿ ವಿ, ಡಾ. ಸಂತೋಷ ಸೊನ್ಸ, ಡಾ. ಪ್ರೀತಿ ಗಲಗಲಿ, ಡಾ. ಕೆ ರಾಜೇಂದ್ರನ, ಡಾ. ಅಭಿಷೇಕ ಫಡಕೆ, ಡಾ. ಎಲ್ ಎಚ್ ಬಿದರಿ, ಮಾಜಿ ಶಾಸಕ ಮತ್ತು ಚಿಕ್ಕಮಕ್ಕಳ ತಜ್ಞ ಡಾ. ಸಾರ್ವಭೌಮ ಬಗಲಿ, ಡಾ. ಆರ್ ಟಿ ಪಾಟೀಲ, ಡಾ. ಎಂ ಎಂ ಪಾಟೀಲ, ಡಾ. ಎಸ್ ಎಸ್ ಕಲ್ಯಾಣಶೆಟ್ಟರ, ಡಾ. ಪರೀಕ್ಷಿತ ಕೋಟಿ, ಡಾ. ಶ್ರೀಶೈಲ ಗಿಡಗಂಟಿ, ಡಾ. ರವಿ ಬರಡೋಲ, ಡಾ. ಎಂ ವೆಂಕಟಾಚಲಪತಿ, ಡಾ. ಸಿಂಗಾರವೇಲು, ಡಾ. ನಂದೀಶ ಬಿ, ಡಾ. ದುರ್ಗಪ್ಪ, ಡಾ. ವಿಡಿ ಪಾಟೀಲ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...