ವಿಜಯಪುರ | ಖಾಸಗಿ ಶಾಲಾ ಬಸ್ ಚಾಲಕರ ಲೈಸೆನ್ಸ್, ಅನುಭವ ಪರಿಶೀಲಿಸಲು ಕರವೇ ಒತ್ತಾಯ

Date:

ಖಾಸಗಿ ಶಾಲಾ ಬಸ್ಸುಗಳ ಚಾಲಕರ ಲೈಸೆನ್ಸ್ ಮತ್ತು ಅವರ ಅನುಭವವನ್ನು ಪರಿಶೀಲಿಸಿ ವಾಹನಗಳ ಚಾಲನೆಗೆ ಅವಕಾಶ ಮಾಡಿಕೊಡಬೇಕೆಂದು ವಿಜಯಪುರ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರು ಒತ್ತಾಯಿಸಿದರು.

- Advertisement -

ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಖಾಸಗಿ ಶಾಲೆಯ ಮಕ್ಕಳ ಬಸ್ಸುಗಳ ಪರ್ಮಿಟ್ ಹಾಗೂ ಸದರಿ ಬಸ್ಸು, ವಾಹನಗಳ ಚಾಲಕರ ಲೈಸನ್ಸ್‌ ಹಾಗೂ ಅವರ ಅನುಭವವನ್ನು ಪರಶೀಲಿಸಿದ ನಂತರ ಬಸ್ಸು, ವಾಹನಗಳು ಚಾಲನೆಗೆ ಅನುಮತಿ ನೀಡಬೇಕು. ಜಿಲ್ಲೆಯ ಎಲ್ಲ ಸರಕಾರಿ ಶಾಲೆಗಳನ್ನು ಉನ್ನತ ದರ್ಜೆಗೆ ಏರಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನ ಬಣ) ವಿಜಯಪುರ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಎಲ್ಲ ಸಮುದಾಯದ ಶಾಲಾ ಮಕ್ಕಳ ಪಾಲಕರ ಪರವಾಗಿ, ಸಂಘಟನೆಯ ರಾಜ್ಯಾಧ್ಯಕ್ಷ ಪಿ.ಕೃಷ್ಣಗೌಡ ಅವರ ಆದೇಶದ ಮೇರೆಗೆ, ಜಿಲ್ಲೆಯ ಎಲ್ಲ ನಾಗರಿಕರ ಪರವಾಗಿ ಜಿಲ್ಲಾ ಪಂಚಾಯತಿ ಸಿಇಒಗೆ ಮನವಿ ಮಾಡುತ್ತೇವೆ. ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಖಾಸಗಿ ಶಾಲೆಗಳ ಮಕ್ಕಳ ಬಸ್ಸುಗಳು, ಇನ್ನಿತರ ವಾಹನಗಳ ಪರ್ಮಿಟ್, ಇನ್ಸುರೆನ್ಸ್‌ ಪಡೆಯುವುದು, ಸದರಿ ಬಸ್‌ಗಳು ಹಾಗೂ ವಾಹನಗಳ ಚಾಲಕರ ಲೈಸನ್ಸ್‌ ಹಾಗೂ ಕಡಿಮೆ ಎಂದರೂ 5 ವರ್ಷದ ಚಾಲನಾ ಅನುಭವ ಸರ್ಟಿಫಿಕೇಟ್‌ಗಳನ್ನು ಪಡೆದ ಬಗ್ಗೆ ಸಮಗ್ರವಾಗಿ ಪರಿಶೀಲಿಸಿ ಚಾಲನೆಗೆ ಒಪ್ಪಿಗೆ ನೀಡಬೇಕು ಎಂದು ಒತ್ತಾಯಿಸಿದರು.

ಖಾಸಗಿ ಹಾಗೂ ಸರ್ಕಾರಿ ಬಸ್ ಚಾಲಕರ ಬೇಜವಾಬ್ದಾರಿ ಮತ್ತು ಸರ್ಕಾರಿ ನಿಯಮಗಳನ್ನು ಪಾಲಿಸದೇ ಭಾರಿ ವೇಗವಾಗಿ ವಾಹನ ಚಲಾಯಿಸಿದ ಪರಿಣಾಮ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಹತ್ತಿರ ಲೋಯೋಲ ಶಾಲೆಯ ಖಾಸಗಿ ಶಾಲಾ ಮಕ್ಕಳ ಬಸ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ಸಿನ ಮಧ್ಯ ಗಂಭೀರ ಅಪಘಾತವಾಗಿತ್ತು. ಪರಿಣಾಮ 2 ಮಕ್ಕಳು ಸಾವನ್ನಪ್ಪಿ 17 ಮಕ್ಕಳು ಗಂಭೀರ ಗಾಯಕ್ಕೆ ಸಿಲುಕಿ, ಅದರಲ್ಲಿ ನಾಲ್ಕು ಮಕ್ಕಳ ಕೈ ಕಾಲುಗಳು ಕಟ್ ಆಗಿರುವ ಸ್ಥಿತಿ ನೋಡಿ ಎಲ್ಲ ಸಾರ್ವಜನಿಕರು ಚಿಂತಾಕ್ರಾಂತರಾಗಿದ್ದೇವೆ. ಮಕ್ಕಳ ಪೋಷಕರ ಪರಿಸ್ಥಿತಿ ಊಹಿಸಿಕೊಳ್ಳಲೂ ಸಾಧ್ಯವಿಲ್ಲ. ಅದಕ್ಕಾಗಿ, ತಕ್ಷಣ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮಾಹಿತಿ ಒದಗಿಸಬೇಕು. ಮುಂದಿನ ದಿನಗಳಲ್ಲಿ ನಮ್ಮ ಜಿಲ್ಲೆಯಲ್ಲಿ ಕೂಡ ಇಂತಹ ಘೋರ ದುರಂತ ತಪ್ಪಿಸಲು ದಿಟ್ಟ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.

ಜಿಲ್ಲೆಯ ಎಲ್ಲ ಸರಕಾರಿ ಶಾಲೆಗಳು ಉನ್ನತ ದರ್ಜೆಗೆ ಏರಿಸಲು, ಎಲ್ಲ ಶಾಲೆಯ ಕಟ್ಟಡಗಳ ಜೀರ್ಣೋದ್ದಾರಗೊಳಿಸಲು ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಎಲ್ಲ ಶಾಲೆಯ ಎಸ್.ಡಿ.ಎಮ್.ಸಿ ಸದಸ್ಯರು ಹಾಗೂ ಎಲ್ಲ ಶಾಲೆಯ ಮಾನ್ಯ ಮುಖ್ಯೋಪಾಧ್ಯಾಯರ ಸಭೆ ಆಯೋಜಿಸಿ, ಸರಕಾರವೇ ಎಲ್ಲವೂ ಮಾಡಲಿ ಎನ್ನುವ ಮನೋಭಾವ ಬಿಟ್ಟು, ಆಯಾ ಗ್ರಾಮಗಳ ಎಲ್ಲ ಸಮುದಾಯದ ಸಾರ್ವಜನಿಕರ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಎಲ್ಲರನ್ನು ಒಗ್ಗೂಡಿಸಿ ಹಾಗೂ ಆಯಾ ಶಾಲೆಯ ಎಲ್ಲ ಶಿಕ್ಷಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಬೆಳಗಾವಿ | ಒಳಮೀಸಲಾತಿ ಜಾರಿಗೆ ರಾಜ್ಯ ಸರ್ಕಾರದಿಂದ ಮೀನಮೇಷ: ದಲಿತ ಸಂಘರ್ಷ ಸಮಿತಿ ಆಕ್ರೋಶ

ಪ್ರತಿಭಟನೆಯಲ್ಲಿ ಉತ್ತರ ಕರ್ನಾಟಕ ವಿಭಾಗದ ಅಧ್ಯಕ್ಷ ಲಕ್ಷ್ಮಣ್ ಕಾಂಬೋಗಿ, ವಿಜಯಪುರ ಜಿಲ್ಲಾ ಮುಖಂಡ ಜಯದೇವ ಸೂರ್ಯವಂಶಿ, ಗಿರೀಶ್ ಕಲಘಟಗಿ, ಲಿಂಗರಾಜ ಬಿದರಕುಂದಿ, ಸಂಕೇಶ್ ಪಟ್ಟಣದ, ಎಂ.ಆರ್.ಗಾರಿಕಾರ, ಮಲ್ಲಯ್ಯ ಹಿರೇಮಠ್ ಇತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...