ವಿಜಯಪುರ | ಕಿತ್ತೂರು ರಾಣಿ ಚನ್ನಮ್ಮನ ವ್ಯಕ್ತಿತ್ವ ಸದಾ ಸ್ಪೂರ್ತಿದಾಯಕ: ಡಾ.ಮೈತ್ರೇಯಿಣಿ ಗದಿಗೆಪ್ಪಗೌಡರ

Date:

ವೀರರಾಣಿ ಕಿತ್ತೂರು ರಾಣಿ ಚನ್ನಮ್ಮನವರ ವ್ಯಕ್ತಿತ್ವ ಸದಾ ಸ್ಪೂರ್ತಿದಾಯಕ. ಏಕೆಂದರೆ ಪ್ರಬಲ ಆಂಗ್ಲರ ವಿರುದ್ಧ ಹೋರಾಟ ನಡೆಸಿ ಭಾರತದ ಸ್ವಾತಂತ್ರ‍್ಯ ಸಂಗ್ರಾಮಕ್ಕೆ ಮುನ್ನುಡಿ ಬರೆದ ಕೀರ್ತಿ ಅವರದು ಎಂದು ಅಕಾಡೆಮಿ ಸದಸ್ಯೆ ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಅಭಿಪ್ರಾಯಪಟ್ಟರು.

- Advertisement -

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ಯವಿದ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ ಕಿತ್ತೂರು ರಾಣಿ ಚನ್ನಮ್ಮಾಜಿ ಜಯಂತಿ ಹಾಗೂ ವಿಜಯೋತ್ಸವದ ವಿಶೇಷ ಉಪನ್ಯಾಸ ಸಮಾರಂಭದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಮಾನವ ಹಕ್ಕುಗಳನ್ನು ಪ್ರತಿಪಾದಿಸುವ ಮೂಲಕ ಮಾನವೀಯತೆಗೆ ಹೆಸರಾದ ರಾಣಿ ಚನ್ನಮ್ಮನ ವ್ಯಕ್ತಿತ್ವ ಸದಾ ಸ್ಪೂರ್ತಿದಾಯಕವಾಗಿದೆ. ಝಾನ್ಸಿಯ ರಾಣಿ ಲಕ್ಷ್ಮೀಬಾಯಿಯವರ ಹೋರಾಟಕ್ಕಿಂತ 33 ವರ್ಷ ಮೊದಲು ಕಿತ್ತೂರಿನ ರಾಣಿ ಚನ್ನಮ್ಮ ಅವರು ಬ್ರಿಟಿಷ್ ಅಧಿಕಾರಿಗಳಿಗೆ ಮೊದಲ ಸೋಲನ್ನು ನೀಡಿದರು. ಕಿತ್ತೂರಿನ ಸರದಾರ್ ಗುರುಸಿದ್ಧಪ್ಪ ಅಮಟೂರು, ಬಾಳಪ್ಪ ಬಿಚ್ಚುಗತ್ತಿ, ಚನ್ನಬಸಪ್ಪ, ಸಂಗೋಳ್ಳಿ ರಾಯಣ್ಣ, ವಡ್ಡರ ಯಲ್ಲಣ್ಣನಂತಹ ವೀರರ ಸಂಘಟಿತ ಹೋರಾಟ ಇಂದಿಗೂ ಭಾರತದ ಇತಿಹಾಸದಲ್ಲಿ ಅಜರಾಮರವಾಗಿದೆ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶಟ್ಟಿ ಮಾತನಾಡಿ, “ಮೌಲ್ಯಾಧಾರಿತ ಬದುಕಿನಿಂದ ವ್ಯಕ್ತಿತ್ವ ರೂಪಿಸಿಕೊಳ್ಳುವ ತುರ್ತು ಅಗತ್ಯ ನಮ್ಮ ಮುಂದೆ ಇದೆ. ಇಂದು ‘ರೀಲ್ಸ್ ಲೈಫ್’ಗಿಂತ ‘ರಿಯಲ್ ಲೈಫ್’ ಬಗ್ಗೆ ಎಚ್ಚರಿಕೆಯಿಂದ ಬದುಕುವುದು ಮುಖ್ಯ. ಕಿತ್ತೂರು ರಾಣಿ ಚನ್ನಮ್ಮನಂತಹ ಸಬಲೀಕೃತ ರಾಣಿಯ ಜೀವನಾದರ್ಶಗಳು ವಿದ್ಯಾರ್ಥಿನಿಯರಿಗೆ ಮಾದರಿಯಾಗಬೇಕು” ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, “ಕರ್ನಾಟಕ ಎಂದರೆ ಅದು ಕಿತ್ತೂರು ಚನ್ನಮ್ಮ ಅವರ ನೆನಪನ್ನು ಜೀವಂತವಾಗಿಟ್ಟಿದೆ. ಅವರ ಬದುಕು ನಮಗೆ ಚೈತನ್ಯ ತುಂಬುತ್ತದೆ” ಎಂದು ಅಭಿಪ್ರಾಯಪಟ್ಟರು. ಇದೇ ವೇಳೆ ಉಪನ್ಯಾಸಕ್ಕೆ ಸಂಬಂಧಿಸಿದಂತೆ ಹತ್ತು ಪ್ರಶ್ನೆಗಳನ್ನು ಕೇಳಿ ಸರಿಯಾದ ಉತ್ತರ ನೀಡಿದ ವಿದ್ಯಾರ್ಥಿನಿಯರಿಗೆ ಪುಸ್ತಕ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದ ಸಂಯೋಜಕ ಬಸವ ಅಧ್ಯಯನ ಪೀಠದ ಅಧ್ಯಕ್ಷ ಪ್ರೊ. ರಾಜಕುಮಾರ ಮಾಲಿಪಾಟೀಲ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿ, “ಚನ್ನಮ್ಮ ಅವರ ಜೀವನ ಇತಿಹಾಸ ಹೆಣ್ಣುಮಕ್ಕಳಿಗೆ ಸ್ವಾಭಿಮಾನಿ ಬದುಕನ್ನು ರೂಪಿಸಿಕೊಳ್ಳಲು ಪ್ರೇರಣೆಯಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಎಡಿಸಿ ಸೈಯಿದಾ ಆಯಿಷಾ.

ಕಾರ್ಯಕ್ರಮದಲ್ಲಿ ಪ್ರೊ. ಬಿ ಎಲ್ ಲಕ್ಕಣ್ಣನವರ, ವಿವಿಧ ವಿಭಾಗದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಸ್ನಾತಕ ದೈಹಿಕ ಶಿಕ್ಷಣ ವಿಭಾಗದ ಅಶ್ವಿನಿ ಮತ್ತು ಅನ್ನಪೂರ್ಣ ಪ್ರಾರ್ಥನೆ ಸಲ್ಲಿಸಿದರು. ಸ್ನಾತಕೋತ್ತರ ದೈಹಿಕ ಶಿಕ್ಷಣ ವಿಭಾಗದ ರಾಜೇಶ್ವರಿ ನಿರೂಪಣೆ ಮಾಡಿ, ಅಶ್ವಿನಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...