ವಿಜಯಪುರ | ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಕೆಆರ್‌ಎಸ್ ಪಕ್ಷ ಆಗ್ರಹ

Date:

Advertisements

ಲೋಕಸಭಾ ಚುನಾವಣೆಗೆ ಹಾಸನದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸುಪ್ರಿಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆಯನ್ನು ಮಾಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ವಿಜಯಪುರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಮಾತನಾಡಿ, “ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡರ ಮೊಮ್ಮಗನಾಗಿರುವ ಕಾರಣಕ್ಕೆ ಕಳೆದ ಬಾರಿ ಲೋಕಸಭಾ ಅಭ್ಯರ್ಥಿಯಾಗಿ ಜನತೆ ಚುನಾಯಿಸಿ ಹಾಸನದಿಂದ ದೆಹಲಿಗೆ ಕಳುಹಿಸಿದ್ದರು. ಆದರೆ ಇಂದು ದೇಶ ಮಟ್ಟದಲ್ಲಿ ಕರ್ನಾಟಕದ ಮಾನ ಮರ್ಯಾದೆಯನ್ನು ಹರಾಜು ಹಾಕಿರುವ ಪ್ರಜ್ವಲ್ ರೇವಣ್ಣ‌ನ ಲೈಂಗಿಕ ಕಿರುಕುಳದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈತ ಕಾಮುಕ ಉಮೇಶ್ ರೆಡ್ಡಿಗಿಂತಲೂ ಅಪಾಯಕಾರಿಯಾದ ಮನೋಭಾವನೆ ಹೊಂದಿರುವ ಗೋಮುಖ ವ್ಯಾಘ್ರನಾಗಿದ್ದಾನೆ” ಎಂದು ಆರೋಪಿಸಿದರು.

“ಮೊನ್ನೆಯ ದಿನ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಎರಡು ಕಡೆ ಎಫ್ಐಆರ್ ದಾಖಲಿಸಿದ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಈ ಪ್ರಕರಣವನ್ನು ಎಸ್ಐಟಿಗೆ ವಹಿಸಿದೆ. ಆರೋಪಿಯು ಪ್ರಭಾವಿ ರಾಜಕಾರಣಿಯಾಗಿರುವ ಕಾರಣಕ್ಕೆ ರಾಜ್ಯ ಸರ್ಕಾರ ಮತ್ತು ಅಧಿಕಾರಿ ವರ್ಗ ಆತ ಇಂದು ಬಂಧನಕ್ಕೆ ಒಳಗಾಗುವ ಮುಂಚೆ ಜರ್ಮನ್ ದೇಶಕ್ಕೆ ಹೋಗಿ, ಅವಿತುಕೊಳ್ಳಲು ಅವಕಾಶವನ್ನು ನೀಡಿರುವುದು ಕರುನಾಡಿನ ಸ್ತ್ರೀಕುಲಕ್ಕೆ ಮಾಡಿದ ಅವಮಾನವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

“ಕಳೆದ ಎರಡ್ಮೂರು ದಿನಗಳಿಂದ ಇಷ್ಟೊಂದು ಪುರಾವೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದರೂ ಆತನು ತಪ್ಪಿಸಿಕೊಂಡು ಜರ್ಮನಿ ದೇಶಕ್ಕೆ ಹೋಗಲು ನಮ್ಮ ಆಡಳಿತ ವ್ಯವಸ್ಥೆ ಅನುಕೂಲ ಮಾಡಿಕೊಟ್ಟಿರುವುದು ಖೇದಕರ ಸಂಗತಿ. ಈ ವಿಷಯದ ಕುರಿತು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವೂ ಭಾನುವಾರ ಹೊಳೆನರಸೀಪುರ ಮತ್ತು ಹಾಸನ ಜಿಲ್ಲೆಯಲ್ಲಿ ಎಫ್‌ಐಆರ್‌ ದಾಖಲಿಸಿದೆ. ಎಫ್‌ಐಆರ್ ತೆಗೆದುಕೊಳ್ಳುವಾಗ ಪೊಲೀಸ್ ಇಲಾಖೆಯ ಅಧಿಕಾರಿಗಳು ನಡೆದುಕೊಂಡ ರೀತಿ‌ ನೋಡಿದರೆ ಹಲವು ಅನುಮಾನಗಳು ಮೂಡುತ್ತಿವೆ” ಎಂದರು.

“ನಿಷ್ಪಕ್ಷಪಾತ ತನಿಖೆಯನ್ನು ಕೈಗೊಳ್ಳಲು ಮತ್ತು ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಕೊಡಿಸಲು ಎಸ್‌ಐಟಿಯಿಂದ ಅದು ಸಾಧ್ಯವಾಗದು ಎಂದು ಅರಿತು ಈ ಪ್ರಕರಣವನ್ನು ರಾಜ್ಯ ಸರ್ಕಾರ ಕೂಡಲೇ ಸಿಬಿಐಗೆ ವಹಿಸಬೇಕು” ಎಂದು ಆಗ್ರಹಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತಮಿತ್ರರಾಗಿರುವ ರೇವಣ್ಣನವರ ಮಗನೇ ಆರೋಪಿ ಆಗಿರುವುದರಿಂದಾಗಿ ರಾಜ್ಯ ಸರ್ಕಾರದ ಮೇಲೆಯೂ ಅನುಮಾನ ಮೂಡುವ ವಾತಾವರಣವು ರಾಜ್ಯದಲ್ಲಿ ನಿರ್ಮಾಣವಾಗುವ ಸಂಭವಿಸುತ್ತದೆ. ಈ ಕಾರಣಕ್ಕೆ ಪ್ರಕರಣವೂ ಸಂಪೂರ್ಣವಾಗಿ ನ್ಯಾಯ ಸಮ್ಮತವಾದ ತನಿಖೆ ಆಗುವುದಿಲ್ಲವೆಂಬ ಅನುಮಾನವೂ ರಾಜ್ಯದ ಜನತೆಯಲ್ಲಿ ಮೂಡುತ್ತಿದೆ. ಹಾಗಾಗಿ ಆರೋಪಿಯನ್ನು ಶೀಘ್ರದಲ್ಲಿ ಬಂಧಿಸಿ ಕರುನಾಡಿನ ಸ್ತ್ರೀ ಕುಲದ ಗೌರವವನ್ನು ಎತ್ತಿ ಹಿಡಿಯಬೇಕು” ಎಂದು ಕೆಆರ್‌ಎಸ್ ಪಕ್ಷ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಪ್ರಜ್ವಲ್‌ ಪೆನ್‌ಡ್ರೈವ್ ಪ್ರಕರಣ |‌ ಸಂತ್ರಸ್ತ ಮಹಿಳೆಯರ ಪರ ಬಿಜೆಪಿ ಯಾಕೆ ಧ್ವನಿ ಎತ್ತುತ್ತಿಲ್ಲ : ಪ್ರಿಯಾಂಕ್‌ ಖರ್ಗೆ

ಮುಖಂಡರುಗಳಾದ ರಾಕೇಶ ಇಂಗಳಗಿ, ಪ್ರವೀಣ ಕನಸೇ, ಹಮೀದ್ ಇನಾಮದಾರ, ವಿಕ್ರಮ ವಾಗ್ಮೋರೆ, ದೀಪಾ ಮರ್ನೂರ, ಕಾಂತುಗೌಡ ಬೆಂಡವಾಡ ಮತ್ತು ದುರ್ಗಪ್ಪ ಬೂದಿಹಾಳ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X