ವಿಜಯಪುರ | ಅನಧಿಕೃತ ಪಟಾಕಿ ಅಂಗಡಿ ತೆರವಿಗೆ ಕೆಆರ್‌ಎಸ್‌ ಆಗ್ರಹ

Date:

ಪಟಾಕಿಗಳ ಮಾರಾಟಕ್ಕೆ ಪರವಾನಗಿ ಪಡೆಯದೆ ಅನಧಿಕೃತವಾಗಿ ತೆರೆದಿರುವ ಪಟಾಕಿ ಅಂಗಡಿಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷದ ಕಾರ್ಯಕರ್ತರು ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

- Advertisement -

“ಪಟಾಕಿ ಮಳಿಗೆಗಳನ್ನು ತೆರೆಯಲು ಸರ್ಕಾರ ನಿರ್ದಿಷ್ಟವಾದ ಕಾನೂನುಗಳನ್ನು ಜಾರಿಗೆ ತಂದಿದೆ. ಆದರೆ ಜಿಲ್ಲಾದ್ಯಂತ ಯಾವುದೇ ರೀತಿಯ ಪರವಾನಗಿ ಪಡೆಯದೆ ಜನಸಂದಣಿ ಹೆಚ್ಚಾಗಿರುವ ಪ್ರದೇಶದಲ್ಲಿ ಅನಧಿಕೃತವಾಗಿ ವ್ಯಾಪಾರ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

“ಪಟಾಕಿ ಮಳಿಗೆ ತೆರೆಯಲು ಜಿಲ್ಲಾಧಿಕಾರಿಯಿಂದ ಸ್ಫೋಟಕ ಪರವಾನಗಿ, ಅಗ್ನಿಶಾಮಕ ಮತ್ತು ಪೊಲೀಸ್ ಇಲಾಖೆಯಿಂದ ಅನುಮತಿ ಪತ್ರ, ಸ್ಥಳೀಯ ಸಂಸ್ಥೆಗಳ ಜನರಲ್ ಲೈಸೆನ್ಸ್‌ ಸೇರಿದಂತೆ  ಮುಂತಾದ ಅನುಮತಿ ಪತ್ರಗಳನ್ನು ಪಡೆದುಕೊಂಡು ಜನಸಂದಣಿ ಇಲ್ಲದ, ಅಗ್ನಿ ಅವಘಡಗಳು ಸಂಭವಿಸಿದಾಗ ಹೆಚ್ಚು ಹಾನಿಯಾಗದ ಪ್ರದೇಶಗಳಲ್ಲಿ ಸುರಕ್ಷತೆಯಿಂದ ಮಳಿಗೆಗಳನ್ನು ತೆಗೆಯಲು ಮತ್ತು ವ್ಯಾಪಾರ ವಹಿವಾಟುಗಳು ಮಾಡಲು ಅವಕಾಶವಿರುತ್ತದೆ” ಎಂದರು.

“ಕೆಲವು ಪಟಾಕಿ ಮಾರಾಟಗಾರರು ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಪೋಲಿಸ್ ಇಲಾಖೆ ಮತ್ತು ಅಗ್ನಿಶಾಮಕ ಅಧಿಕಾರಿಗಳಿಗೆ ತಿಂಗಳುವಾರು ಹಫ್ತಾ ನೀಡುವುದರ ಮೂಲಕ ಅನಧಿಕೃತ ಅಂಗಡಿಗಳ ಮಾಲೀಕರು ವರ್ಷಪೂರ್ತಿ ಅಂಗಡಿಯನ್ನು ತೆರೆದು ವ್ಯಾಪಾರ ಮಾಡುತ್ತಿದ್ದಾರೆ. ನಿಯಮದ ಪ್ರಕಾರ ಜಿಲ್ಲಾಧಿಕಾರಿಯವರು ಹಬ್ಬ, ನಾಡ ಉತ್ಸವಗಳಲ್ಲಿ ಎರಡು ದಿನಗಳು ಮಾತ್ರ ಮಳಿಗೆಗಳನ್ನು ತೆರೆಯಲು ಅವಕಾಶವನ್ನು ನೀಡುತ್ತಾರೆ. ಆದ್ದರಿಂದಾಗಿ ಈ ಕೂಡಲೇ ತಮ್ಮ ಇಲಾಖೆಯ ರಾಜಶ್ವ ನಿರೀಕ್ಷಕರ ನೇತೃತ್ವದಲ್ಲಿ ಒಂದು ಟಾಸ್ಕ್ ಫೋರ್ಸ್ ತಂಡವನ್ನು ರಚಿಸಿ ಅನಧಿಕೃತ ಅಂಗಡಿಗಳನ್ನು ಬಂದ್ ಮಾಡಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

“ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಸ್ಪೋಟಕ ಪರವಾನಗಿ ಇಲ್ಲದೆ ಅನಧಿಕೃತ ಮಳಿಗೆಗಳಲ್ಲಿ ವ್ಯವಹಾರ ನಡೆಸುತ್ತಿವೆ. ಇದನ್ನು ತಡೆಗಟ್ಟಬೇಕೆಂದು 2022ರಲ್ಲಿ ಮನವಿ ಸಲ್ಲಿಸಿದ್ದೆವು. ಆದರೆ ಅಧಿಕಾರಿಗಳು ತಮ್ಮ ಲಂಚಬಾಕ ಆಮಿಷಗಳಿಂದ ಅನಧಿಕೃತವಾಗಿ ಪಟಾಕಿ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿದ್ದರು. ಇದರಿಂದಾಗಿ ಕಳೆದ ಮೂರು ನಾಲ್ಕು ದಿನಗಳ ಹಿಂದೆ ಅತ್ತಿಬೆಲೆಯಲ್ಲಿ ಬೆಂಕಿ ಅವಘಡದಿಂದ ಪಟಾಕಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ 13 ಮಂದಿ ಕಾರ್ಮಿಕರು ಸಜೀವ ದಹನವಾಗಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಖಾಯಂ ಶಿಕ್ಷಕರ ನೇಮಕಕ್ಕೆ ಆಗ್ರಹ; ಸಿಎಂ ಭೇಟಿ ಮಾಡಿದ ಎಸ್ಎಫ್ಐ ನಿಯೋಗ

“ವಿಜಯಪುರ ಜಿಲ್ಲೆಯಲ್ಲಿ ಆ ರೀತಿಯ ಪ್ರಕರಣಗಳು ನಡೆಯಬಾರದೆಂಬ ಮುಂಜಾಗೃತೆ ವಹಿಸಬೇಕೆಂದು ತಮ್ಮ ಗಮನಕ್ಕೆ ತಂದಿದ್ದು, ತಾವು ಕ್ರಮ ಕೈಗೊಳ್ಳುತ್ತೀರೆಂದು ಭಾವಿಸಿದ್ದೇವೆ” ಎಂದು ಹೇಳಿದರು.

ರಾಜ್ಯ ಸಂಘಟನೆ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ, ರಾಕೇಶ ಇಂಗಳಗಿ, ಅಮೀದ ಇನಾಮ್ದಾರ್, ಪ್ರವೀಣ ಕನಸೆ, ವಿಕ್ರಮ ವಾಗ್ಮೊರೆ ಮತ್ತು ಶ್ರೀಶೈಲ ಮಠ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಅನಧಿಕೃತ ವಿದ್ಯುತ್ ಬಳಕೆ; ಜೆಸ್ಕಾಂನಿಂದ ₹18.95 ಲಕ್ಷ ದಂಡ

ಜೆಸ್ಕಾಂ ಇಲಾಖೆಯಿಂದ ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ...

ರಾಯಚೂರು | ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥ ಆರೋಪ: ಡಿಸಿ ನಿವಾಸದ ಮುಂದೆ ಪ್ರತಿಭಟನೆ

ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥಗೊಂಡಿದ್ದಾಳೆ ಎಂದು ಆರೋಪಿಸಿ ಕುಟುಂಬಸ್ಥರು ಜಿಲ್ಲಾಧಿಕಾರಿ ನಿವಾಸದ...

ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು: ಇಬ್ಬರು ಸಾವು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದು,...

ಹಾವೇರಿ | ರದ್ದು ಪಡಿಸಿದ ಎಂಟು ಕೊರ್ಸಗಳನ್ನು  ಮುಂದುವರೆಸುವಂತೆ ಅತಿಥಿ ಉಪನ್ಯಾಸಕರ ಧರಣಿಗೆ ಡಿವೈಎಫ್ಐ-ಎಸ್ಎಫ್ಐ ಬೆಂಬಲಿಸಿ ಪ್ರತಿಭಟನೆ

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಪಡಿಸಿದ ಎಂಟು ಕೋರ್ಸ್ ಗಳು ಮುಚ್ಚದೇ ಮುಂದುವರೆಸುವಂತೆ...