ವಿಜಯಪುರ | ಆಲಮಟ್ಟಿ ಅಣೆಕಟ್ಟು ಎತ್ತರಿಸಲು ಭೂಸ್ವಾಧೀನಕ್ಕೆ, ನಿಗದಿ ಬೆಲೆ ಘೋಷಿಸಲಾಗುವುದು: ಡಿಕೆಶಿ

Date:

ಆಲಮಟ್ಟಿ ಅಣೆಕಟ್ಟು ಎತ್ತರವನ್ನು 518 ಮೀ.ನಿಂದ 524 ಮೀ. ಎತ್ತರಿಸುವ ಬಗ್ಗೆ ಆದ್ಯತೆ ಮತ್ತು ಬದ್ಧತೆ ನಮ್ಮ ಸರ್ಕಾರಕ್ಕಿದೆ. ಮುಂದಿನ ಒಂದು ವಾರದೊಳಗೆ ಭೂಸ್ವಾಧೀನಕ್ಕೆ ನಿಗದಿ ಮಾಡಿರುವ ಬೆಲೆ ಘೋಷಣೆ ಮಾಡಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

- Advertisement -

ಆಲಮಟ್ಟಿ ಅಣೆಕಟ್ಟಿನಲ್ಲಿ ಕೃಷ್ಣಾನದಿಗೆ ಬಾಗಿನ ಅರ್ಪಿಸಿದ ನಂತರ ನಡೆದ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಮುಖ್ಯಮಂತ್ರಿಯವರು ಹಾಗೂ ಯೋಜನೆ ವ್ಯಾಪ್ತಿಯ ಜನಪ್ರತಿನಿಧಿಗಳ ಸಭೆ ನಡೆಸಿ ಬೆಲೆ ನಿಗದಿ ತೀರ್ಮಾನ ಮಾಡಲಾಗುವುದು. ಯಾವುದೇ ಮೇಲ್ಮನವಿ ಇಲ್ಲದಂತೆ ಒಂದೇ ಹಂತದ ಒಪ್ಪಿತ ಭೂಸ್ವಾಧೀನಕ್ಕೆ ಮುಖಂಡರು, ಜನಪ್ರತಿನಿಧಿಗಳು ಒಪ್ಪಿಗೆ ‌ನೀಡಬೇಕು. ಪುನರ್ವಸತಿ ಬಗ್ಗೆ ಪ್ರತ್ಯೇಕ ತೀರ್ಮಾನ ಮಾಡಲಾಗುವುದು. ಸಮುದ್ರಕ್ಕೆ ಹೋಗುತ್ತಿರುವ ನೀರನ್ನು ನಮ್ಮ ಜನರಿಗೆ ನೀರಾವರಿ ಕಲ್ಪಿಸುವುದು ನಮ್ಮ ಸಂಕಲ್ಪ. ಇದನ್ನು ಇದೇ ಅವಧಿಯಲ್ಲಿ ಮಾಡಲು ಮುಂದಾಗಿದ್ದೇವೆ” ಎಂದರು.

“ಮುಳುಗಡೆ ಜಮೀನುಗಳಿಗೆ ಉದಾರ ಮನಸ್ಸಿನಿಂದ ಪರಿಹಾರ ನೀಡಬೇಕು. ಕಾಲುವೆಗಳು ಹಾದುಹೋಗುವ ಕಡೆ ರೈತರಿಗೆ ಅನುಕೂಲವಾಗುವುದರಿಂದ ಇಂತಿಷ್ಟೇ ಪರಿಹಾರ ಬೇಕು ಎನ್ನುವ ಬೇಡಿಕೆಯಿಲ್ಲವೆಂದು ಶಾಸಕ ಯಶವಂತರಾಯ ಗೌಡ ಪಾಟೀಲರು ಅಭಿಪ್ರಾಯ ತಿಳಿಸಿದ್ದಾರೆ. ಶಿವಾನಂದ ಪಾಟೀಲರು, ಎಂ ಬಿ ಪಾಟೀಲರೂ ಕೂಡ ತಮ್ಮ ಸಲಹೆಗಳನ್ನು ನೀಡಿದ್ದಾರೆ” ಎಂದು ತಿಳಿಸಿದರು.

“ನಾವು ಕೇಂದ್ರದ ಮೇಲೆ ಹಾಕುತ್ತಿರುವ ಒತ್ತಡ ನೋಡಿದರೆ ಯಾವ ಕ್ಷಣದಲ್ಲಿ ಬೇಕಾದರೂ ಅಧಿಸೂಚನೆ ಹೊರಡಿಸಬಹುದು. ನಮ್ಮ ಪಾಲು ನಮಗೆ ಸಿಗಲೇಬೇಕು. ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ ಜಿಲ್ಲೆಯ ಜನರು ಸಹಕಾರ ನೀಡಬೇಕು. ನಾವು ಎಲ್ಲ ಪಕ್ಷದ ಶಾಸಕರ ಜತೆಗೆ ಚರ್ಚೆ ಮಾಡಿ ಅಭಿಪ್ರಾಯ ಸಂಗ್ರಹಿಸಿದ್ದೇವೆ” ಎಂದರು.

“ಈ ವಿಚಾರವಾಗಿ ಅಧಿಸೂಚನೆ ಹೊರಡಿಸಬೇಕೆಂದು ಮುಖ್ಯಮಂತ್ರಿಯವರು, ನಾನು ಹಾಗೂ ಸಣ್ಣ ನೀರಾವರಿ ಸಚಿವರು ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಮಾಡಿದ್ದೆವು. ನಾನು ಸುಮಾರು ಐದು ಬಾರಿ ಭೇಟಿ ಮಾಡಿ ಪ್ರಸ್ತಾವನೆ ಸಲ್ಲಿಸಿದ್ದೇವೆ. ಪ್ರಧಾನಿಯವರ ಗಮನಕ್ಕೂ ಇದನ್ನು ತರಲಾಗಿತ್ತು. ಎರಡು ಬಾರಿ ಇದರ ಬಗ್ಗೆ ಸಂಬಂಧಪಟ್ಟ ರಾಜ್ಯಗಳ ಸಭೆ ಕರೆಯಲಾಗಿತ್ತು. ಆಂಧ್ರಪ್ರದೇಶದವರು ಒಮ್ಮೆ ಮಹಾರಾಷ್ಟ್ರದವರು ಮತ್ತೊಮ್ಮೆ ಸಭೆಯನ್ನು ಮುಂದಕ್ಕೆ ಹಾಕಿಸಿದರು ಎನ್ನುವ ಮಾಹಿತಿಯಿದೆ” ಎಂದು ಹೇಳಿದರು.

“ಈ ಬಗ್ಗೆ ಮತ್ತೆ ಕೇಂದ್ರ ಜಲಶಕ್ತಿ ಸಚಿವರ ಗಮನ ಸೆಳೆದಾಗ ಅವರು ‘ಗಾಬರಿಯಾಗಬೇಡಿ, ತಾಂತ್ರಿಕ ವಿಚಾರದ ಕಾರಣಕ್ಕೆ ಸಭೆ ಮುಂದಕ್ಕೆ ಹಾಕಲಾಯಿತು. ಮತ್ತೊಮ್ಮೆ ಸಭೆ ಕರೆಯಲಾಗುವುದುʼ ಎಂಬುದಾಗಿ ಆಶ್ವಾಸನೆ ನೀಡಿದ್ದಾರೆ. ಅಣೆಕಟ್ಟು ಎತ್ತರ ಹೆಚ್ಚಳ ಕುರಿತಂತೆ ಯಾವುದೇ ತಕರಾರುಗಳು ಇಲ್ಲವೆಂದು ಮಹಾರಾಷ್ಟ್ರದವರು ಈ ಹಿಂದೆ ತಿಳಿಸಿರುವುದಾಗಿ ಎಂ ಬಿ ಪಾಟೀಲರು ಹೇಳಿದ್ದಾರೆ” ಎಂದರು.

“ರೈತರ ಭೂಮಿ ಸ್ವಾಧೀನಕ್ಕೆ ಒಳಪಡಿಸಿಕೊಳ್ಳುವ ಬಗ್ಗೆ ಅನೇಕ ಸಭೆಗಳನ್ನು ನಡೆಸಲಾಗಿದೆ. ಬಸವರಾಜ ಬೊಮ್ಮಾಯಿಯವರ ಕಾಲದಲ್ಲಿ ಇಂತಿಷ್ಟು ಪರಿಹಾರವೆಂದು ನಿಗದಿ ಮಾಡಲಾಗಿತ್ತು. ಇದರಿಂದ ರೈತರಿಗೆ ಅನುಕೂಲವಾಗುತ್ತಿಲ್ಲವೆಂದು ಅನೇಕ ಜನಪ್ರತಿನಿಧಿಗಳು ಒತ್ತಡ ಹಾಕಿ ಇದನ್ನು ನಿಲ್ಲಿಸಿದ್ದರು. ಇತ್ತೀಚೆಗೆ ಆಲಮಟ್ಟಿ ಭಾಗದ ಜನಪ್ರತಿನಿಧಿಗಳು, ಸಚಿವರು ಹಾಗೂ ರೈತರ ಸಭೆ ನಡೆಸಿ ಅದರ ತೀರ್ಮಾನವನ್ನು ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮದ್ದೂರು | ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ಎಂಟು ಜನರಿಗೆ ಗಾಯ

“ಪರಿಹಾರದ ವಿಚಾರವಾಗಿ ಸುಮಾರು 20 ಸಾವಿರ ರೈತರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅನೇಕ ವಕೀಲರು ರೈತರನ್ನು ತಪ್ಪು ದಾರಿಗೆ ಎಳೆಯಲು ಪ್ರಯತ್ನಿಸುತ್ತಿದ್ದಾರೆ. ಇದರಿಂದ ಯಾರಿಗೂ ಕೂಡ ಅನುಕೂಲವಾಗುವುದಿಲ್ಲ ಎನ್ನುವುದನ್ನು ರೈತರು ಅರಿಯಬೇಕು” ಎಂದರು.

“ಅಣೆಕಟ್ಟು ಎತ್ತರ ಹೆಚ್ಚಳ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಣೆ ಮಾಡಿ ನಮ್ಮ ಸರ್ಕಾರ ಬದ್ಧತೆ ಮೆರೆದಿದೆ. ಈ ವರ್ಷ 100 ಟಿಎಂಸಿಗೂ ಹೆಚ್ಚು ನೀರು, ಕೆಲವೊಮ್ಮೆ 400 ಟಿಎಂಸಿಗೂ ಹೆಚ್ಚು ನೀರು ಸಮುದ್ರ ಸೇರಿದ ಉದಾಹರಣೆಯಿದೆ. ವರುಣನ ಕೃಪೆಯಿಂದ ಆಲಮಟ್ಟಿ ಅಣೆಕಟ್ಟು ತುಂಬಿ ಎಲ್ಲರಿಗೂ ಸಂತಸ ಉಂಟುಮಾಡಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...