ವಿಜಯಪುರ | ಪಠ್ಯಗಳ ಜತೆಗೆ ಕೌಶಲ್ಯಗಳನ್ನು ಕಲಿಯುವುದರಿಂದ ಉದ್ಯೋಗಾವಕಾಶ ಹೆಚ್ಚು: ಪ್ರೊ.ವಿಜಯಾ ಕೋರಿಶೆಟ್ಟಿ

Date:

ವಿದ್ಯಾರ್ಥಿನಿಯರು ತಮ್ಮ ಪಠ್ಯಗಳ ಜತೆಗೆ ಇತರೆ ಕೌಶಲ್ಯಗಳನ್ನು ಕಲಿತುಕೊಳ್ಳುವ ಮೂಲಕ ಉದ್ಯೋಗಾವಕಾಶಗಳನ್ನು ಹೆಚ್ಚಿಸಿಕೊಳ್ಳಬೇಕು ಎಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಸಲಹೆ ನೀಡಿದರು.

- Advertisement -

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಾ ಅಭಿಯಾನ ಉನ್ನತ ಶಿಕ್ಷಣ ಮಂಡಳಿ, ಭಾರತ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಕರ್ನಾಟಕ ಸರ್ಕಾರ ಬೆಂಗಳೂರು ಪ್ರಾಯೋಜಕತ್ವದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ಕಾಗ್ನಿಟಿವ್ ಟೆಕ್ನಿಕಲ್ ಅಂಡ್ ಮ್ಯಾನೇಜಿರಿಯಲ್ ಸ್ಕಿಲ್ಸ್ ಫಾರ್ ವುಮೆನ್ ಎಂಪವರ್‌ಮೆಂಟ್ ಫ್ರೀ ವಿಕಸಿತ್ ಭಾರತ’ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಪದವಿಗಳಿದ್ದರೆ ಸಾಲದು, ಉನ್ನತ ಪದವಿಗಳ ಜತೆಗೆ ಕೌಶಲಗಳನ್ನೂ ಕಲಿತುಕೊಂಡಿದ್ದರೆ ಉದ್ಯೋಗ ದೊರಕಿಸಿಕೊಳ್ಳಲು ಸುಲಭವಾಗುತ್ತದೆ” ಎಂದರು.

ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ವಿವಿಧ ಕೌಶಲ್ಯಗಳನ್ನು ಅಳವಡಿಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೇಗೆ ತಯಾರಿ ನಡೆಸಬೇಕು ಎಂಬ ಕುರಿತು ತಮ್ಮ ವಿಚಾರಗಳನ್ನು ಹಂಚಿಕೊಂಡರು.

ಮೌಲ್ಯಮಾಪನ ಕುಲಸಚಿವ ಪ್ರೊ. ಬಿ ಎಲ್ ಲಕ್ಕಣ್ಣವರ ಮಹಿಳಾ ಸಬಲೀಕರಣದಲ್ಲಿ ಮಹಿಳಾ ಕೌಶಲ್ಯದ ಮಹತ್ವದ ಕುರಿತು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಇತರ ರಾಜ್ಯಗಳ ಹೇರಿಕೆಯಿಂದ ಕನ್ನಡ ರಕ್ಷಿಸುವುದು ನಮ್ಮ ಕರ್ತವ್ಯ: ಶಾಸಕ ಎಂ. ಆರ್. ಪಾಟೀಲ

ಈ ಕಾರ್ಯಾಗಾರದಲ್ಲಿ ಒಟ್ಟು ಮೂರು ವಿಚಾರ ಗೋಷ್ಟಿಗಳು ನಡೆದವು. ಸಂಪನ್ಮೂಲ ವ್ಯಕ್ತಿಗಳಾಗಿ ಪ್ರೊ. ಕೆ ಬಿ ರಂಗಪ್ಪ, ಪ್ರೊ. ಬಸವರಾಜ ಎಸ್ ಬೇಣಿ, ಪ್ರೊ. ಆರ್ ವಿ ಗಂಗಶೆಟ್ಟಿ ಭಾಗವಹಿಸಿದ್ದರು.

ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ. ಡಿ ಎಂ ಮದರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಯೋಜಕ ಡಾ. ಸುರೇಶ ಕೆ ಪಿ, ಪ್ರೊ. ಜಿ ಬಿ ಸೋನಾರ ಉಪಸ್ಥಿತರಿದ್ದರು.

ಮಾಬುಬಿ ಮುಲ್ಲಾ ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿಗಳ ಪರಿಚಯವನ್ನು ರೇಣುಕಾ ಮಾಡಿದರು. ಅತಿಥಿ ಉಪನ್ಯಾಸಕಿ ಶೈಲಾ ಪಾಟೀಲ ವಂದಿಸಿದರು. ಅಶ್ವಿನಿ ಎ ಲಾಯದಗುಂದಿ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...