ವಿಜಯಪುರ ನಗರದ ಸಿಂದಗಿ ಬೈಪಾಸ್, ಸಿಂದಗಿ ನಾಕಾ, ಮುನೇಶ್ವರ ಭಾಗ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.
ಆ ಪ್ರದೇಶಗಳಲ್ಲಿ ಚಿರತೆ ಓಡಾಡುತ್ತಿರುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿರತೆ ಸೆರೆ ಹಿಡಿಯಲು ಕ್ರಮವಹಿಸಿದ್ದಾರೆ.
ಆ ಭಾಗದ ಜನರು ಹಾಗೂ ಸಾರ್ವಜನಿಕರು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಶೀಘ್ರವೇ ಚಿರತೆ ಸೆರೆ ಹಿಡಿಯಲು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ವಿಜಯಪುರದ ಸಿಂದಗಿ ಬೈಪಾಸ್ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಓಡಾಟ ನಡೆಸಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ನಗರದ ಮುನೇಶ್ವರಬಾಗ್ ಪ್ರದೇಶದಲ್ಲಿ ಚಿರತೆ ನಡೆದಾಡಿರುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ. pic.twitter.com/laMWQEjiFt
— eedina.com ಈ ದಿನ.ಕಾಮ್ (@eedinanews) January 6, 2025
