ವಿಜಯಪುರ | ವಿಕಸಿತ ಭಾರತ ನಿರ್ಮಾಣಕ್ಕೆ ಗ್ರಂಥಾಲಯಗಳು ದಾರಿದೀಪವಾಗಲಿ: ಪ್ರೊ.ಕರಿಸಿದ್ದಪ್ಪ

Date:

ಸ್ಥಳೀಯ ಭಾಷೆ–ಸಂಸ್ಕೃತಿಯನ್ನು ಸಂರಕ್ಷಿಸಿ, ನೈತಿಕ ಮತ್ತು ಸುಸ್ಥಿರ ಜ್ಞಾನ ಬಳಕೆಯ ಮೂಲಕ ʼವಿಕಸಿತ ಭಾರತʼ ನಿರ್ಮಾಣಕ್ಕೆ ಗ್ರಂಥಾಲಯಗಳು ದಾರಿದೀಪವಾಗಲಿವೆ ಎಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಯುಜಿಸಿ ಎಮೆರಿಟಸ್ ಪ್ರಾಧ್ಯಾಪಕ ಪ್ರೊ. ಸಿ ಆರ್ ಕರಿಸಿದ್ದಪ್ಪ ಹೇಳಿದರು.

- Advertisement -

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ ಹಾಗೂ ಇಂಡಿಯನ್ ಅಸೋಸಿಯೇಷನ್ ಆಫ್ ಸ್ಪೆಷಲ್ ಲೈಬ್ರರೀಸ್ ಅಂಡ್ ಇನ್ಫರ್ಮೇಶನ್ ಸೆಂಟರ್ಸ್ ಇವರ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಯಾಸ್ಲಿಕ್ ಪ್ರಾಯೋಜಿತ ʼಗ್ರಂಥಾಲಯ ದೃಷ್ಟಿಕೋನ- 2047ʼ ಎಂಬ ವಿಷಯದ ಕುರಿತ 34ನೇ ಅಖಿಲ ಭಾರತ ಸಮ್ಮೇಳನ 2025 ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಗ್ರಂಥಾಲಯದ ಭವಿಷ್ಯದ ದೃಷ್ಟಿಕೋನ ಇಂದು ನಮ್ಮ ಆಯ್ಕೆಗಳು, ನಾಯಕತ್ವ ಗುಣಗಳು ಮತ್ತು ಪರಿವರ್ತನೆಗೆ ಅಗತ್ಯವಾದ ಧೈರ್ಯದೊಂದಿಗೆ ಆರಂಭಗೊಂಡಿದೆ. ಬದಲಾವಣೆಯನ್ನು ನಿರಂತರ ಪ್ರಕ್ರಿಯೆಯಾಗಿ ಸ್ವೀಕರಿಸಿರುವ ನಾವು ತಂತ್ರಜ್ಞಾನವನ್ನು ಮಾನವೀಯಗೊಳಿಸಿ, ನೈತಿಕ ಮೌಲ್ಯಗಳಿಗೆ ಮಹತ್ವ ನೀಡಿ, ಸಸ್ಥಿರ ಅಭಿವೃದ್ಧಿಯತ್ತ ಮುನ್ನಡೆಯುತ್ತಿದ್ದೇವೆ ಎಂದರು.

ಗ್ರಂಥಾಲಯಗಳು ಜ್ಞಾನ ವಿಸ್ತಾರಕ್ಕೆ ಮಾತ್ರವಲ್ಲದೆ ಸಮಾಜದಲ್ಲಿ ಸಂಶೋಧನಾ ಮನೋಭಾವನೆ ಬೆಳೆಸುವ ಪ್ರಮುಖ ಕೇಂದ್ರಗಳಾಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಾಮಾಜಿಕ ಹೊಣೆಗಾರಿಕೆಯನ್ನು ಹೊತ್ತುಕೊಂಡು ಕಾರ್ಯನಿರ್ವಹಿಸುವ ದೃಢಸಂಕಲ್ಪ ನಮ್ಮದಲ್ಲಿದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, “ಗ್ರಂಥಾಲಯಗಳು ಎಲ್ಲಾ ಸಂಸ್ಥೆಗಳ ಹೃದಯವಾಗಿವೆ. ಗ್ರಂಥಾಲಯಗಳು ದೇವಾಲಯ, ಚರ್ಚ್, ಮಸೀದಿಗಳಂತೆ ಸಮಾಜವನ್ನು ಸತ್ಮಾರ್ಗಕ್ಕೆ ನಡೆಸುವ ಕೇಂದ್ರಗಳಾಗಿ ಕಾರ್ಯನಿರ್ವಹಿಸುತ್ತವೆ. ಕಾಲಾನುಕ್ರಮದಲ್ಲಿ ಅವುಗಳ ರೂಪ ಬದಲಾಗಬಹುದು, ಸ್ಥಳಾಂತರವಾಗಬಹುದು ಆದರೆ ಅವುಗಳ ಮೂಲ ಉದ್ದೇಶ ಒಂದೇ, ಜ್ಞಾನವನ್ನು ಹಂಚುವುದು ಹಾಗೂ ಬುದ್ಧಿವಂತ, ಜವಾಬ್ದಾರಿಯುತ ನಾಗರಿಕರನ್ನು ರೂಪಿಸುವುದು. ವ್ಯಕ್ತಿಯ ಜ್ಞಾನವಿಕಾಸ, ಮೌಲ್ಯ ಸಂವರ್ಧನೆ ಮತ್ತು ಸಮಾಜದ ಸಕಾರಾತ್ಮಕ ಪರಿವರ್ತನೆಗೆ ಗ್ರಂಥಾಲಯಗಳು ನಿರಂತರವಾಗಿ ಮಹತ್ವದ ಪಾತ್ರ ವಹಿಸುತ್ತಿವೆ” ಎಂದರು.

ಇದನ್ನೂ ಓದಿ: ವಿಜಯಪುರ | ಪಿಪಿಪಿ ವಿರುದ್ಧ ಹೋರಾಟಗಾರರ ಬಂಧನ: ಬಿಡುಗಡೆಗೆ ಜನ ವೇದಿಕೆ ಸಂಘಟನೆ ಆಗ್ರಹ

ಕಾರ್ಯಕ್ರಮದಲ್ಲಿ ಪ್ರೊ. ಪಿ ಆರ್ ಗೋಸ್ವಾಮಿ, ಪ್ರೊ. ಅಭಿಜಿತ್, ಪ್ರೊ. ಎ ವೈ ಆಸುಂಡಿ, ಪ್ರೊ. ಪಿ ವಿ ಕೊಣ್ಣೂರು, ಪ್ರೊ. ಸಂಪತ್ ಕುಮಾರ, ಪ್ರೊ. ಸಂತೋಷ ಕುಮಾರ, ಪ್ರೊ. ಶ್ರೀನಿವಾಸ ರಾಘವನ್, ಪ್ರೊ. ಕೆ ಪಿ ವಿಜಯಕುಮಾರ, ಪ್ರೊ. ಎಂ ಚಂದ್ರಶೇಖರ, ಮೌಲ್ಯಮಾಪನ ಕುಲಸಚಿವ ಪ್ರೊ. ಬಸವರಾಜ ಎಲ್ ಲಕ್ಕಣ್ಣವರ, ಅಯಾಸ್ಲಿಕ್ ಅಧ್ಯಕ್ಷ ಪ್ರೊ. ನರೇಂದ್ರ ಲಹ್ಕರ, ಪ್ರೊ. ಕೇಶವ್, ಪ್ರೊ. ಗವಿಸಿದ್ದಪ್ಪ ಎ, ಪ್ರೊ. ಪಿ ಜಿ ತಡಸದ, ಪ್ರೊ. ರಾಧಾಕೃಷ್ಣ, ಪ್ರೊ. ಶಾಂತಾದೇವಿ ಟಿ, ಪಶ್ಚಿಮ ಬಂಗಾಳ, ಉತ್ತರಪ್ರದೇಶ, ಛತ್ತೀಸ್‌ಗಡ, ಈಶಾನ್ಯ ರಾಜ್ಯಗಳು ಸೇರಿದಂತೆ ವಿವಿಧ ರಾಜ್ಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಕ್ಷೇತ್ರದ ತಜ್ಞರು, ಸಂಶೋಧಕರು ಹಾಗೂ ವೃತ್ತಿಪರರು, ಸಿಂಡಿಕೇಟ್ ಮತ್ತು ಅಕಾಡೆಮಿಕ್ ಸದಸ್ಯರು, ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ವಿದ್ಯಾರ್ಥಿನಿಯರು ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...