ವಿಜಯಪುರ | ಯುವಜನರು ಜವಾಬ್ದಾರಿಯುತ ನೀತಿ ನಿರೂಪಕರಾಗಲಿ: ಡಿಸಿ ಆನಂದ ಕೆ

Date:

ಯುವಜನರು ಸಂವಿಧಾನದ ಆಶಯಗಳು, ಸಂಸದೀಯ ಕಾರ್ಯಕಲಾಪಗಳು ಹಾಗೂ ಕಾನೂನು ರಚನೆಯ ಪ್ರಕ್ರಿಯೆಯ ಕುರಿತು ಸಮಗ್ರ ಅರಿವು ಬೆಳೆಸಿಕೊಂಡು, ಭವಿಷ್ಯದಲ್ಲಿ ಜವಾಬ್ದಾರಿಯುತ ನೀತಿ ನಿರೂಪಕರಾಗಿ ಹೊರಹೊಮ್ಮಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ ಹೇಳಿದರು.

- Advertisement -

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಯುವ ಸಂಸತ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಯುವ ಸಂಸತ್ ಕಾರ್ಯಕ್ರಮವು ಯುವಜನರಿಗೆ ಸಂಸತ್ತು ಮತ್ತು ಶಾಸಕಾಂಗದ ಕಾರ್ಯವಿಧಾನ, ಪ್ರಶ್ನೋತ್ತರ ಕಲಾಪ, ಕಾನೂನುಗಳ ಮಂಡನೆ ಹಾಗೂ ಅವುಗಳ ಕುರಿತು ನಡೆಯುವ ಚರ್ಚೆಗಳ ಬಗ್ಗೆ ಪ್ರಾಯೋಗಿಕ ತಿಳಿವಳಿಕೆ ನೀಡುತ್ತದೆ. ಸಂಸದೀಯ ವ್ಯವಸ್ಥೆಯಲ್ಲಿ ಚರ್ಚೆ ನಡೆಸುವಾಗ ನಿಯಮಗಳು ಮತ್ತು ನಿಗದಿತ ಪ್ರಕ್ರಿಯೆಗಳನ್ನು ಪಾಲಿಸುವುದು ಅತ್ಯಂತ ಮಹತ್ವದ್ದಾಗಿದೆ. ಇಂತಹ ಕಾರ್ಯಕ್ರಮಗಳು ಪ್ರಜಾಪ್ರಭುತ್ವದ ವ್ಯವಸ್ಥೆ ಹಾಗೂ ಅದರ ಜವಾಬ್ದಾರಿಗಳನ್ನು ಅರ್ಥಮಾಡಿಕೊಳ್ಳಲು ಸಹಕಾರಿಯಾಗುತ್ತವೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ಭಾರತದ ಸಂವಿಧಾನ ದೇಶದ ಸರ್ವೋಚ್ಚ ಕಾನೂನಾಗಿದ್ದು, ಸಮಾನತೆ ಸೇರಿದಂತೆ ಪ್ರತಿಯೊಬ್ಬ ನಾಗರಿಕನ ಹಕ್ಕು ಮತ್ತು ಕರ್ತವ್ಯಗಳಿಗೆ ಅಗತ್ಯವಾದ ಚೌಕಟ್ಟನ್ನು ಒದಗಿಸಿದೆ. ಸಂವಿಧಾನದ ಪೀಠಿಕೆಯಲ್ಲಿ ಪ್ರತಿಪಾದಿಸಿರುವ ಆಶಯಗಳನ್ನು ಯುವಜನರು ಅರ್ಥಮಾಡಿಕೊಳ್ಳಬೇಕು. ಗ್ರಾಮ ಪಂಚಾಯಿತಿ ಮಟ್ಟದ ಗ್ರಾಮಸಭೆಯಿಂದ ಹಿಡಿದು ರಾಜ್ಯ ಮತ್ತು ರಾಷ್ಟ್ರಮಟ್ಟದ ಆಡಳಿತ ವ್ಯವಸ್ಥೆಯವರೆಗೆ ಪ್ರಜಾಪ್ರಭುತ್ವ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ತಿಳಿದುಕೊಳ್ಳುವುದು ಅಗತ್ಯ. ಯುವಜನರು ತಮಗೆ ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು.

ಯುವ ಸಂಸತ್ ಕಾರ್ಯಕ್ರಮವು ಯುವಜನರಲ್ಲಿ ನಾಯಕತ್ವದ ಗುಣ, ಸಂವಹನ ಕೌಶಲ, ಜವಾಬ್ದಾರಿಯುತ ನಾಗರಿಕ ಪ್ರಜ್ಞೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವ ಮಹತ್ವದ ವೇದಿಕೆಯಾಗಿದೆ. ಸಾರ್ವಜನಿಕ ಸಮಸ್ಯೆಗಳನ್ನು ಗುರುತಿಸಿ ತಾರ್ಕಿಕವಾಗಿ ಚರ್ಚಿಸುವುದು, ಭಿನ್ನಾಭಿಪ್ರಾಯಗಳಿಗೆ ಗೌರವ ನೀಡುವುದು ಮತ್ತು ಜನಪರ ನಿರ್ಧಾರಗಳ ಮಹತ್ವವನ್ನು ಅರಿಯುವುದು ಇಂದಿನ ಯುವಜನರಿಗೆ ಅತ್ಯಗತ್ಯ ಎಂದು ಅವರು ಅಭಿಪ್ರಾಯಪಟ್ಟರು.

ಜಿಲ್ಲಾ ಮಟ್ಟದ ಯುವ ಸಂಸತ್‌ನಲ್ಲಿ ಆಯ್ಕೆಯಾಗಿರುವ ಎಂಟು ಯುವ ಪ್ರತಿನಿಧಿಗಳು ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ಅವರು ಈ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡು ಸಂಸದೀಯ ಕಾರ್ಯಕಲಾಪಗಳು, ಕಾನೂನುಗಳು ಮತ್ತು ಆಡಳಿತ ವ್ಯವಸ್ಥೆಯ ಕುರಿತು ಹೆಚ್ಚಿನ ಜ್ಞಾನ ಸಂಪಾದಿಸಬೇಕು ಎಂದು ಸಲಹೆ ನೀಡಿದರು.

ಯುವ ಸಂಸತ್‌ನಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಪಾತ್ರ ನಿರ್ವಹಿಸಿದ ಯುವ ಪ್ರತಿನಿಧಿಗಳು ನೈಜ ಸಂಸದೀಯ ಕಲಾಪವನ್ನು ಹೋಲುವ ರೀತಿಯಲ್ಲಿ ಚರ್ಚೆ ನಡೆಸಿದರು. ಸಂಸದೀಯ ವ್ಯವಸ್ಥೆಯಲ್ಲಿ ವಿವಿಧ ವಿಷಯಗಳ ಕುರಿತು ಅಭಿಪ್ರಾಯ ಮಂಡಿಸುವುದು, ಪ್ರಶ್ನೆಗಳನ್ನು ಕೇಳುವುದು ಮತ್ತು ಚರ್ಚೆಗಳ ಮೂಲಕ ನಿರ್ಧಾರಗಳನ್ನು ರೂಪಿಸುವ ಪ್ರಕ್ರಿಯೆಯನ್ನು ಪ್ರಾಯೋಗಿಕವಾಗಿ ಪರಿಚಯಿಸಲಾಯಿತು.ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಪ್ರಾಸ್ತಾವಿಕವಾಗಿ ಮಾತನಾಡಿ, ತಾಲೂಕು ಮಟ್ಟದಲ್ಲಿ ಆಯ್ಕೆಯಾದ ಯುವ ಪ್ರತಿನಿಧಿಗಳು ಜಿಲ್ಲಾ ಮಟ್ಟದ ಯುವ ಸಂಸತ್‌ನಲ್ಲಿ ಭಾಗವಹಿಸಿದ್ದು, ಇಲ್ಲಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಪ್ರತಿನಿಧಿಗಳು ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮೇಯರ್ ಮಡಿವಾಳಪ್ಪ ಕರಡಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಸಂತ ಹೊನಮೋಡೆ, ಡಿವೈಎಸ್ಪಿ ಉಪಾಸೆ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಎ. ಉಪ್ಪಾರ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಡಿ.ಜೆ. ಬಿರಾದಾರ, ಡಯಟ್ ಪ್ರಾಂಶುಪಾಲ ಎಸ್.ಎಸ್. ಮುಜಾವರ, ಸತೀಶ ಪಾಟೀಲ, ಡಾ. ವಿರೇಶ ಗಬ್ಲೂರ, ಜ್ಯೋತಿ, ಶಿವಾನಂದ ಜಮಾದಾರ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ಜೆ. ಇಂಡಿ, ಚಿನ್ನು ಕಟ್ಟಿಮನಿ, ಅಭಿಷೇಕ ಚಕ್ರವರ್ತಿ, ಮಹಾಂತೇಶ ಸಾಸಭಾಳ ಹಾಗೂ ವಿನಾಯಕ ಗುಣಸಾಗರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ ಒಪ್ಪಂದವಿದೆ ಎಂದ ಸಂಘಟನೆ

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ...

ಹಾಸನ | ಜನರಿಗೆ ನದಿ ಸಂರಕ್ಷಣೆ ಬಗ್ಗೆ ಅರಿವು ಮೂಡಿಸುವುದು ಅಗತ್ಯ: ಶಾಸಕ ಎ.ಮಂಜು

ರಾಮನಾಥಪುರದ ಕಾವೇರಿ ನದಿಯ ವಹ್ನಿ ಪುಷ್ಕರಿಣಿಯಲ್ಲಿ ಮಂಗಳವಾರ ಹಾಸನ ಮತ್ತು ಕೊಡಗು...

ಹಾಸನ | ವರ್ಷಕ್ಕೊಮ್ಮೆ ನಡೆಯುವ ಹಾಸನಾಂಬ ಜಾತ್ರಾ ಮಹೋತ್ಸವ ಆರಂಭ 

ಶ್ರೀ ಹಾಸನಾಂಬೆ ದೇವಿ ದರ್ಶನೋತ್ಸವ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ...

ಬೀದರ್‌ | ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿ: ಡಿಸಿ ಶಿಲ್ಪಾ ಶರ್ಮಾ

ಭಾರತದ ಸಂವಿಧಾನವು ವಿಶಿಷ್ಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದ್ದು, ಇಡೀ ವಿಶ್ವಕ್ಕೆ ಮಾದರಿಯಾಗಿದೆ....