ವಿಜಯಪುರ | ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ರಾಷ್ಟ್ರಪತಿಗೆ ಪತ್ರ

Date:

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ಸುದ್ದಿಯಿಂದ ಆಘಾತವಾಗಿದೆ.
ನಮ್ಮ ಸಾರ್ವತ್ರಿಕ ಚುನಾವಣೆಗಳಲ್ಲಿ ಭಾರತೀಯ ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ ಎಂಬುದು ಸ್ಪಷ್ಟವಾಗಿದೆ ಎಂದು ಅಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾ ಘಟಕದಿಂದ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ವಿಜಯಪುರ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಎಎಪಿ ಮನವಿ ಸಲ್ಲಿಸಿದ್ದು, “ಆಡಳಿತಾರೂಢ ಬಿಜೆಪಿಗೆ ಅನುಕೂಲವಾಗುವಂತಹ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಡೆಯಲು ಮಾದರಿ ನೀತಿ ಸಂಹಿತೆ ಅಸ್ತಿತ್ವದಲ್ಲಿದ್ದರೆ, ಪ್ರಜಾಪ್ರಭುತ್ವದ ಕಾರ್ಯಚಟುವಟಿಕೆಗೆ ನೇರವಾಗಿ ಅಡ್ಡಿಪಡಿಸುವ ಐಟಿ, ಸಿಬಿಐ ಮತ್ತು ಇ.ಡಿಯಂತಹ ಸರ್ಕಾರಿ ಇಲಾಖೆಗಳಿಗೆ ಇದೇ ನೀತಿ ಸಂಹಿತೆ ಏಕೆ ಅನ್ವಯಿಸುವುದಿಲ್ಲ? ಪ್ರಮುಖ ಸ್ಥಳಗಳಲ್ಲಿ ಪ್ರತಿಪಕ್ಷಗಳು ತನ್ನ ಕೈಕಾಲುಗಳನ್ನು ಕಟ್ಟಿಕೊಂಡು ಚುನಾವಣೆಗೆ ಹೋಗುವುದನ್ನು ತಪ್ಪಿಸಲು ಈ ಕುತಂತ್ರ ನಡೆದಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“ಸಂವಿಧಾನದ ಮೂಲ ರಚನೆಯಲ್ಲಿ ಅಡಗಿರುವ ಪ್ರಜಾಸತ್ತಾತ್ಮಕ ತತ್ವಗಳ ಈ ದ್ರೋಹವನ್ನು ಸ್ವಯಂಪ್ರೇರಿತವಾಗಿ ತೆಗೆದುಕೊಳ್ಳವಂತೆ ನಾವು ಸುಪ್ರೀಂ ಕೋರ್ಟ್‌ಗೆ ಒತ್ತಾಯಿಸುತ್ತೇವೆ. ತಪ್ಪು ಮಾಡಿದ್ದರೂ ತನಿಖೆ ನಡೆಸಬಾರದೆಂದು ನಾವು ಹೇಳುತ್ತಿಲ್ಲ. ಆದರೆ ಈ ಘಟನೆಯು ಚುನಾವಣೆಗೆ ಸಂಬಂಧಿಸಿದಂತಿದೆ. ಐಟಿ ಮತ್ತು ಇ.ಡಿ ಈ ಎರಡು ವಿಷಯಗಳ ತನಿಖೆಗೆ ಇಷ್ಟು ಸಮಯ ತೆಗೆದುಕೊಳ್ಳಬಹುದಾದರೆ, ಚುನಾವಣೆ ಮುಗಿಯಲು ಇನ್ನು ಎರಡು ತಿಂಗಳ ಕಾಲ ಏಕೆ ಕಾಯಬಾರದು” ಎಂದು ಪ್ರಶ್ನಿಸಿದರು.

“ದೇಶದಲ್ಲಿ ತುರ್ತು ಪರಿಸ್ಥಿತಿ ಬಂದಿರುವಂತೆ ಭಾಸವಾಗುತ್ತಿದೆ. ಅರವಿಂದ ಕೇಜ್ರಿವಾಲ್ ಬಂಧನವಾಗಿದ್ದಾರೆ. ಸತ್ಯೇಂದ್ರ ಜೈನ್, ಸಂಜಯ್ ಸಿಂಗ್, ಸಿಸೋಡಿಯ, ಹೇಮಂತ್ ಸುರೇನ್ ಬಂಧನ ಆಗಿದ್ದಾರೆ. ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ. ಪ್ರತಿಪಕ್ಷಗಳ ನಾಯಕರ ವಿರುದ್ಧ ಇ.ಡಿ, ಸಿಬಿಐ ಛೂ ಬಿಟ್ಟಿದ್ದಾರೆ. ಚುನಾವಣೆ ಆಯುಕ್ತರೂ ಕೂಡ ರಾಜೀನಾಮೆ ಕೊಟ್ಟಿದ್ದಾರೆ. ಚುನಾವಣೆ ಬಾಂಡ್ ಹಗರಣ ತನಿಖೆ ನಡೆಯುತ್ತಿಲ್ಲ. ಈ ಎಲ್ಲ ಬೆಳವಣಿಗೆಗಳು ಕಂಡರೆ ತುರ್ತು ಪರಿಸ್ಥಿತಿ ಅಲ್ಲದೆ ಮತ್ತೇನು” ಎಂದು ಕಿಡಿಕಾರಿದ್ದಾರೆ.

“ಪ್ರತಿಪಕ್ಷದಲ್ಲಿದ್ದಾಗ ಹಗರಣ ಮಾಡಿದವರ ಮೇಲೆ ಇ.ಡಿ, ಐಟಿ ದಾಳಿ ನಡೆಸುತ್ತಾರೆ. ಅದೇ ಅವರು ಬಿಜೆಪಿ ಪಕ್ಷಕ್ಕೆ ಸೇರಿದೊಡನೆ ಹಗರಣ ಮುಕ್ತರಾಗುತ್ತಾರೆ. ಇದು ಆಡಳಿತರೂಢ ಬಿಜೆಪಿ ಪಕ್ಷ ದೇಶದ ಸ್ವಯಕ್ತತೆ ಸಂಸ್ಥೆಗಳನ್ನು ತನ್ನ ಅಧೀನದಲ್ಲಿಟ್ಟುಕೊಳ್ಳುವುದು ಅತ್ಯಂತ ಅಪಾಯಕಾರಿ ಸಂಗತಿಯಾಗಿದೆ” ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಚುನಾವಣಾ ಬಾಂಡ್ ಹಗರಣ; ಮೋದಿ ʼಭ್ರಷ್ಟ ಗುರುʼ ಎಂಬುದು ಬಯಲಾಗಿದೆ: ಪಾಟೀಲ್ ಗಣಿಹಾರ್

ಅಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಭೋಗೇಶ್ ಸೊಲ್ಲಾಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ, ಜಿಲ್ಲಾ ಮಾಧ್ಯಮ ಉಸ್ತುವಾರಿ ಸಂಜು ಸೇಟಗಾರ, ಜಿಲ್ಲಾ ಕಾರ್ಯದರ್ಶಿ ಅಪ್ಪನಗೌಡ್ ಕೆ ಪಾಟೀಲ, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷಡ ಅನ್ನಪೂರ್ಣ ಬೆಳ್ಳನ್ನವರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ಬಾಬು ಬಿಜಾಪುರ, ಅವಿನಾಶ ಐಹೊಳೆ, ನಗರ ಉಪಾಧ್ಯಕ್ಷ ಅಮೀರ್ ಸೋಹೈಲ್ ಪಟೇಲ್, ನಗರ ಪ್ರಧಾನ ಕಾರ್ಯದರ್ಶಿ ಮೀರಸಾಬ ದಳವಾಯಿ, ನಗರ ಕಾರ್ಯದರ್ಶಿ ಜ್ಯೋತಿಬಾ ಹೊನ್ನಕಲಶೆ, ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ಇಂದ್ರಜಿತ್ ಜಾದವ್, ಪಕ್ಷದ ಮುಖಂಡರುಗಳಾದ ಶಬ್ಬೀರ್ ಪಟೇಲ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...