ವಿಜಯಪುರ | ಜಿಲ್ಲೆಯ ಹಲವೆಡೆ ಲಘು ಭೂಕಂಪ; ಸಾರ್ವಜನಿಕರ ಆತಂಕ

Date:

  • 2.6ರಷ್ಟು ತೀವ್ರತೆಯ ಭೂಕಂಪನ ರಿಕ್ಟರ್ ಮಾಪಕದಲ್ಲಿ ದಾಖಲು
  • ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದಿಂದ ಮಾಹಿತಿ

ವಿಜಯಪುರ ಜಿಲ್ಲೆಯ ಹಲವೆಡೆ ಸೋಮವಾರ ರಾತ್ರಿ ಭೂಕಂಪನದ ಅನುಭವವಾಗಿದ್ದು, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಕೂಡ ಇದನ್ನು ದೃಢಪಡಿಸಿದ್ದು, ರಿಕ್ಟರ್ ಮಾಪಕದಲ್ಲಿ 2.6 ರಷ್ಟು ದಾಖಲಾಗಿದೆ.

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ 10.41 ಸುಮಾರಿಗೆ ಭೂಕಂಪನವಾಗಿದೆ. ವಿಜಯಪುರದಿಂದ ಈಶಾನ್ಯ ದಿಕ್ಕಿಗೆ 3.3 ಕಿ.ಮೀ. ದೂರದ ಹೆಗಡಿಹಾಳ್, ಕತ್ತಕಾನಹಳ್ಳಿ ಗ್ರಾಮಗಳಲ್ಲಿ ಹಾಗೂ ವಿಜಯಪುರ ನಗರದಲ್ಲಿಯೂ ಭೂಕಂಪನದ ಅನುಭವ ಆಗಿದೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? : ವಿಡಿಯೊ ಕಾನ್ಫರೆನ್ಸ್‌ ಮೂಲಕ ಕಂದಾಯ ವ್ಯಾಜ್ಯಗಳ ವಿಚಾರಣೆ ನಡೆಸುವಂತೆ ಹೈಕೋರ್ಟ್‌ ಸೂಚನೆ

ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ನಿರ್ದೇಶಕರು ಮಾಧ್ಯಮದವರೊಂದಿಗೆ ಮಾತನಾಡಿ, “ಜಿಲ್ಲೆಯಲ್ಲಾಗಿರುವ ಭೂಕಂಪನದ ತೀವ್ರತೆಯು ಕಡಿಮೆಯಾಗಿದ್ದು, ಭೂಕಂಪನ ಕೇಂದ್ರದಿಂದ 30-40 ಕಿ.ಮೀ ವ್ಯಾಪ್ತಿಯಲ್ಲಿ ಭೂಕಂಪನ ಅನುಭವಕ್ಕೆ ಬಂದಿದೆ” ಎಂದು ತಿಳಿಸಿದರು.

“ಭೂಕಂಪನದ ತೀವ್ರತೆ ಕಡಿಮೆ ಇರುವುದರಿಂದ ಸಾರ್ವಜನಿಕರಿಗೆ ಯಾವುದೇ ಹಾನಿಯನ್ನುಂಟು ಮಾಡಿಲ್ಲ. ಇಂತಹ ಭೂಕಂಪನಗಳು ಜಿಲ್ಲೆಯಲ್ಲಿ ಆಗಾಗ ಸಂಭವಿಸುತ್ತಿರುತ್ತದೆ. ಹಾಗಾಗಿ ಯಾರೂ ಕೂಡ ಭಯ ಪಡುವ ಅಗತ್ಯವಿಲ್ಲ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೆಣ್ಣುಭ್ರೂಣ ಹತ್ಯೆ ಪ್ರಕರಣ: 9 ಮಂದಿ ಆರೋಪಿಗಳ ಬಂಧನ; ಹಲವರ ಕೈವಾಡವಿರುವ ಶಂಕೆ

ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಪ್ರಕರಣದ ಆರೋಪಿಗಳು 1,500ಕ್ಕೂ ಅಧಿಕ...

ಬೆಂಗಳೂರು | ನ. 29ರಂದು ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ; ಕನ್ನಡ-ಉರ್ದು ಕವಿಗೋಷ್ಠಿ

ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ...

ಗದಗ | ʼಸೊಸೆಗೆ ಸೀರೆ ಉಡಿಸಬೇಕುʼ ವದಂತಿ; ಅಂಗಡಿಗಳಲ್ಲಿ ವ್ಯಾಪಾರ ಜೋರು

ವೈಜ್ಞಾನಿಕವಾಗಿ ಜಗತ್ತು ಎಷ್ಟೇ ಮುಂದುವರೆದ್ರೂ ಮೌಢ್ಯ ಆಚರಣೆಗಳನ್ನ ಮಾತ್ರ ಬಿಟ್ಟಿಲ್ಲ. ಇದಕ್ಕೆ...

ಬೆಳಗಾವಿ | ನಿಗಮ-ಮಂಡಳಿ ಅಧ್ಯಕ್ಷರಿಗೆ ಸಂಪುಟ ಸ್ಥಾನಮಾನ; ಪಿಐಎಲ್‌ ದಾಖಲಿಸುವುದಾಗಿ ಎಚ್ಚರಿಕೆ

"ರಾಜ್ಯ ಸರ್ಕಾರದಲ್ಲಿ ಸಚಿವ ಸ್ಥಾನಗಳಿಂದ ವಂಚಿತರಾಗಿ ಅತೃಪ್ತರಾಗಿರುವ ಶಾಸಕರನ್ನು ಸಮಾಧಾನಪಡಿಸುವ ಸಲುವಾಗಿ,...