ವಿಜಯಪುರ ಲೋಕಸಭಾ ಕ್ಷೇತ್ರ; 21 ಅಭ್ಯರ್ಥಿಗಳಿಂದ 35 ನಾಮಪತ್ರ ಸಲ್ಲಿಕೆ

Date:

ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ವಿಜಯಪುರ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಕ್ಕೆ ಏಪ್ರಿಲ್‌ 19ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು. ಕೊನೆಯ ದಿನದವರೆಗೆ ಒಟ್ಟು 21 ಅಭ್ಯರ್ಥಿಗಳಿಂದ 35 ನಾಮಪತ್ರಗಳು ಸಲ್ಲಿಕೆಯಾಗಿವೆ.

- Advertisement -

ವಿಜಯಪುರ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ‌ಯಾಗಿರುವ ಟಿ ಭೂಬಾಲನ್ ಪ್ರಕಟಣೆ ನೀಡಿದ್ದು, “ಶನಿವಾರ ಏಪ್ರಿಲ್‌ 20ರಂದು ಈ ಎಲ್ಲ ನಾಮಪತ್ರಗಳ ಪರೀಶೀಲನೆ ನಡೆದಿದೆ. ಪರಿಶೀಲನೆಯ ಬಳಿಕ ಒಟ್ಟು 21 ಮಂದಿ ಅಭ್ಯರ್ಥಿಗಳಲ್ಲಿ 12 ಅಭ್ಯರ್ಥಿಗಳ ನಾಮಪತ್ರಗಳು ಸ್ವೀಕೃತಗೊಂಡು 9 ತಿರಸ್ಕೃತಗೊಂಡಿವೆ. ಕ್ರಮಬದ್ಧವಾಗಿ ಸ್ವೀಕೃತಗೊಂಡ 12 ನಾಮಪತ್ರಗಳ ಪೈಕಿ ಇಬ್ಬರು ಮಹಿಳಾ ಅಭ್ಯರ್ಥಿಗಳಾಗಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸ್ವೀಕಾರವಾಗಿರುವ ನಾಮಪತ್ರ ಕ್ರಮಬದ್ಧವಾಗಿರುವ ಅಭ್ಯರ್ಥಿಗಳ ವಿವರ: “ಮಲ್ಲು ಹಾದಿಮನಿ (ಬಹುಜನ ಸಮಾಜ ಪಕ್ಷ), ರಮೇಶ ಜಿಗಜಿಣಗಿ (ಭಾರತೀಯ ಜನತಾ ಪಕ್ಷದ) ಹಣಮಂತರಾವ ಆಲಗೂರ (ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷ), ಕುಲಪ್ಪ ಭೀ ಚವ್ಹಾಣ (ಭಾರತೀಯ ಜವಾನ್ ಕಿಸಾನ್ ಪಕ್ಷ) ಗಣಪತಿ ಲಾ ರಾಠೋಡ (ಕರ್ನಾಟಕ ರಾಷ್ಟ್ರ ಸಮಿತಿ), ಜೀತೆಂದ್ರ ಅಶೋಕ ಕಾಂಬಳೆ (ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ)(ಎ), ನಾಗಜ್ಯೋತಿ ಬಿ ಎನ್(ಸೋಶಿಯಲಿಸ್ಟ್‌ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯೂನಿಸ್ಟ್), ರಾಜಕುಮಾರ ಅಪ್ಪಣ್ಣ ಹೊನ್ನಕಟ್ಟಿ (ರಾಷ್ಟ್ರೀಯ ಸಮಾಜ ಪಕ್ಷ), ರಾಮಜಿ ಹರಿಜನ ಉರ್ಫ್‌ ಬುದ್ಧಪ್ರಿಯ (ನಕಿ ಭಾರತೀಯ ಏಕತಾ ಪಾರ್ಟಿ), ತಾರಾಬಾಯಿ ಭೋವಿ (ಪಕ್ಷೇತರ), ಬಾಬು ರಾಜೇಂದ್ರ ನಾಯಕ (ಪಕ್ಷೇತರ), ಸಂಗಪ್ಪ ಹುಣಶಿಕಟ್ಟಿ (ಪಕ್ಷೇತರ)ವಾಗಿ ನಾಮಪತ್ರಗಳು ಸಲ್ಲಿಕೆಯಾಗಿವೆ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಜಾತ್ಯತೀತ ಪಕ್ಷಕ್ಕೆ ಮತ ಹಾಕುವಂತೆ ಮಾನವ ಬಂಧುತ್ವ ವೇದಿಕೆ ಮನವಿ

“ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಏಪ್ರಿಲ್‌ 22 ಕೊನೆಯ ದಿನವಾಗಿದ್ದು, ಮೇ 7ರಂದು ಬೆಳಿಗ್ಗೆ 7 ರಿಂದ ಸಂಜೆ 6ರವರೆಗೆ ಮತದಾನ ಮತ್ತು ಜೂನ್‌ 4ರಂದು ಮತ ಎಣಿಕೆ ಪ್ರಕ್ರಿಯೆಗಳು ಜರುಗಲಿವೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...