ವಿಜಯಪುರ |ಜನರ ಕೆಲಸಕ್ಕೆ ಅಲೆದಾಡಿಸುವ ಅಧಿಕಾರಿಗಳ ನಿರ್ಲಕ್ಷ್ಯ ಸಹಿಸಲ್ಲ: ಉಪಲೋಕಾಯುಕ್ತ ಫಣೀಂದ್ರ ಎಚ್ಚರಿಕೆ

Date:

ಸಾರ್ವಜನಿಕರ ಅಗತ್ಯ ಸೇವೆಗಳನ್ನು ಸಕಾಲದಲ್ಲಿ ಒದಗಿಸದೇ, ಕರ್ತವ್ಯ ನಿರ್ವಹಣೆಯಲ್ಲಿ ವಿಳಂಬ ಮಾಡಿದರೆ ಗಂಭೀರವಾದ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್‌. ಫಣೀಂದ್ರ ಎಚ್ಚರಿಸಿದರು.

- Advertisement -

ವಿಜಯಪುರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಲೋಕಾಯುಕ್ತ ದೂರುಗಳ ವಿಚಾರಣೆ ಮತ್ತು ವಿಲೇವಾರಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದಲ್ಲಿ ವಿಚಾರಣೆ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ದಾಖಲಾಗಿರುವ ಪ್ರಕರಣಗಳ ವಿಚಾರಣೆಗೆ ಒಂದು ತಿಂಗಳ ಮೊದಲೇ ಅಧಿಕಾರಿಗಳಿಗೆ ಮಾಹಿತಿ ನೀಡಿ, ಐದು ಪೂರ್ವಭಾವಿ ಸಭೆಗಳ ಮೂಲಕ ಸಿದ್ಧತೆ ಮಾಡಲಾಗಿದೆ. ಎರಡು ದಿನಗಳ ಕಾಲ ವಿಚಾರಣೆ ನಡೆಸಿ ಸಾಧ್ಯವಾದಷ್ಟು ದೂರುಗಳನ್ನು ಇತ್ಯರ್ಥಪಡಿಸಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಿಪಿಡಿಪಿ ಕಾಯ್ದೆ: ನಾಗರಿಕರ ಖಾಸಗಿತನದ ರಕ್ಷಣೆಯೋ, ಪತ್ರಿಕಾ ಸ್ವಾತಂತ್ರ್ಯದ...

ಡಿಪಿಡಿಪಿ ಕಾಯ್ದೆ ನಾಗರಿಕರ ಗೌಪ್ಯತೆಯನ್ನು ಕಾಪಾಡುವ ಭರವಸೆ ನೀಡುತ್ತಿದೆ. ಆದರೆ, ಇದೇ ಕಾಯ್ದೆಯು ಪತ್ರಕರ್ತರ ಮೂಲಭೂತ ಹಕ್ಕು ಮತ್ತು ತನಿಖಾ ಪತ್ರಿಕೋದ್ಯಮದ ಮೇಲೆ ಕರಿನೆರಳು ಬೀರಲಿದೆಯೇ? ಆರ್‌ಟಿಐ ದುರ್ಬಲಗೊಳ್ಳುತ್ತಿದೆಯೇ? ಒಂದೆಡೆ ವ್ಯಕ್ತಿಯ ಖಾಸಗಿತನದ...

ಉಳಿತಾಯದ ಪಾಠ ಹೇಳಿದ ಮೋದಿ: ಬೆಲೆ ಏರಿಕೆ, ನಿರುದ್ಯೋಗ;...

ಮಕ್ಕಳ ಶಿಕ್ಷಣ, ಮದುವೆ ಮತ್ತು ಮುಪ್ಪಿನ ಕಾಲಕ್ಕಾಗಿ ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡುವುದು ಭಾರತೀಯರ ಸಂಸ್ಕೃತಿಯಲ್ಲೇ ಬಂದಿದೆ. ಅವರಿಗೆ ಉಳಿತಾಯದ ಪಾಠ ಕಲಿಸುವ ಅಗತ್ಯವಿಲ್ಲ; ಬದಲಾಗಿ ಬಡತನದಿಂದ ಹೊರಬಂದ ಕುಟುಂಬಗಳು ಮತ್ತೆ ಸಂಕಷ್ಟಕ್ಕೆ...

ಆರ್‌ಟಿಇ ಶಿಕ್ಷಣ ಹಕ್ಕೋ, ಶಾಲೆಗಳಲ್ಲಿನ ಸಾಮಾಜಿಕ ಅಂತರಕ್ಕೆ ಕಾರಣವೋ?

ಶಿಕ್ಷಣದ ಸಮಾನ ಅವಕಾಶದ ಆಶಯಕ್ಕೆ ಸವಾಲಾಗುತ್ತಿರುವ ನಿಯಮಗಳು, ಖಾಸಗೀಕರಣ ಮತ್ತು ಸರ್ಕಾರಿ ಶಾಲೆಗಳ ದುಸ್ಥಿತಿ ಒಂದೇ ಶಾಲೆಯ ಆವರಣ, ಒಂದೇ ತರಗತಿಯ ಕೊಠಡಿ, ಒಂದೇ ಪಠ್ಯಪುಸ್ತಕ, ಒಂದೇ ಶಿಕ್ಷಕರು. ಆದರೆ ಆ ಮಕ್ಕಳ ಹಿನ್ನೆಲೆ...

ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಜನಸೇವೆಯೆಂದು ಪರಿಗಣಿಸಿ ಪಾರದರ್ಶಕತೆ, ಜವಾಬ್ದಾರಿ ಹಾಗೂ ಜನಸ್ನೇಹಿ ಧೋರಣೆಯಿಂದ ಕಾರ್ಯನಿರ್ವಹಿಸಬೇಕು. ವಿಧವಾ ವೇತನ, ವೃದ್ದಾಪ್ಯ ವೇತನ, ಕಟ್ಟಡ ಪರವಾನಗಿ ಸೇರಿದಂತೆ ಸಾರ್ವಜನಿಕರಿಗೆ ಅಗತ್ಯವಿರುವ ಸರ್ಕಾರಿ ಸೇವೆಗಳನ್ನು ಸಕಾಲದಲ್ಲಿ ಒದಗಿಸಬೇಕು. ಇಲಾಖೆಗಳ ಕೆಲಸದ ಒತ್ತಡದ ನೆಪದಲ್ಲಿ ಜನರ ಸಮಸ್ಯೆಗಳನ್ನು ನಿರ್ಲಕ್ಷಿಸಬಾರದು. ಅಧಿಕಾರವಿದ್ದರೂ ಕರ್ತವ್ಯ ನಿರ್ವಹಣೆಯಲ್ಲಿ ವಿಳಂಬ ಮಾಡಿ ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದು ಸಲ್ಲದು. ತಾವು ಪ್ರತಿದಿನ ಸುಮಾರು 300ರಿಂದ 400 ಕಡತಗಳನ್ನು ಪರಿಶೀಲಿಸುತ್ತಿದ್ದು, ಲೋಕಾಯುಕ್ತ ಸಂಸ್ಥೆಯ ಮೇಲೆ ಜನರ ವಿಶ್ವಾಸ ಹೆಚ್ಚುತ್ತಿರುವುದರಿಂದ ದೂರುಗಳ ಸಂಖ್ಯೆಯೂ ಹೆಚ್ಚುತ್ತಿದೆ ಎಂದು ತಿಳಿಸಿದರು.

ಸಾರ್ವಜನಿಕರು ಕೂಡ ಸುಳ್ಳು ಹಾಗೂ ಆಧಾರರಹಿತ ದೂರುಗಳನ್ನು ಸಲ್ಲಿಸದೆ, ಅಗತ್ಯ ದಾಖಲೆ ಮತ್ತು ಸಾಕ್ಷ್ಯಾಧಾರಗಳೊಂದಿಗೆ ದೂರು ನೀಡಬೇಕು. ಲೋಕಾಯುಕ್ತ ವ್ಯಾಪ್ತಿಗೆ ಬಾರದ ಪ್ರಕರಣಗಳಲ್ಲಿ ಸೂಕ್ತ ಕಾನೂನು ಮಾರ್ಗದರ್ಶನ ನೀಡಲಾಗುವುದು ಎಂದರು.

ಜಿಲ್ಲಾಧಿಕಾರಿ ಡಾ. ಆನಂದ ಕೆ. ಮಾತನಾಡಿ, ಲೋಕಾಯುಕ್ತದಲ್ಲಿ ದಾಖಲಾಗಿರುವ ದೂರುಗಳನ್ನು ಇಲಾಖಾವಾರು ವಿಂಗಡಿಸಿ ಅಧಿಕಾರಿಗಳಿಗೆ ಕಳುಹಿಸಲಾಗಿದೆ. ಪ್ರತಿಯೊಂದು ದೂರಿನ ಕುರಿತು ಕೈಗೊಂಡ ಕ್ರಮಗಳ ಅನುಪಾಲನಾ ವರದಿಯೊಂದಿಗೆ ಅಧಿಕಾರಿಗಳು ಹಾಜರಾಗುವಂತೆ ಸೂಚಿಸಲಾಗಿದೆ. ಆಡಳಿತ ಸುಧಾರಣೆಗಾಗಿ ಉಪಲೋಕಾಯುಕ್ತರ ಸಲಹೆಗಳನ್ನು ಪಾಲಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಹಾಗರಗಿ, ಜಿಪಂ ಸಿಇಒ ಆನಂದ ಪ್ರಕಾಶ ಮೀನಾ, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಮಹಾನಿಂಗ ನಂದಗಾವಿ, ಉಪವಿಭಾಗಾಧಿಕಾರಿ ಜುಫಿಶಾನ್ ಹಕ್, ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಬಾಕಿ ಉಳಿದ ದೂರುಗಳ ವಿಚಾರಣೆ ನಡೆಸಲಾಯಿತು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಮಟಾ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ; ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿನ ಲೋಪದೋಷಗಳನ್ನು ಖಂಡಿಸಿ...

₹3 ಕೋಟಿ ಆಸ್ತಿಗಾಗಿ 7 ಮಂದಿಯ ಹತ್ಯೆ: ಮೃತರ ಬೆರಳಚ್ಚು ಸಂಗ್ರಹಕ್ಕೆ ಯತ್ನಿಸಿದ್ದ ಆರೋಪಿ

ಬೆಂಗಳೂರಿನ ರಾಜಾಜಿನಗರದಲ್ಲಿ ಪತ್ನಿ ಹಾಗೂ ಆಕೆಯ ಕುಟುಂಬದ ಆರು ಮಂದಿಯನ್ನು ಹತ್ಯೆಗೈದ...

ಮಿಮ್ಸ್ ಜಾಗದ ಒತ್ತುವರಿ ತೆರವಿಗೆ ಕ್ರಮ: ನಿವಾಸಿಗಳಿಗೆ ಬದಲಿ ನಿವೇಶನ ನೀಡಲು ಸಚಿವರ ಸೂಚನೆ

ಮಂಡ್ಯ ನಗರದಲ್ಲಿನ ಮಿಮ್ಸ್ (ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ಗೆ ಸೇರಿದ...

ರೈಲ್ವೆ ಬಲ್ಕ್ ಟಿಕೆಟ್ ಬುಕಿಂಗ್‌ ನಿಯಮ ಸಡಿಲ: ಸೀಟುಗಳ ಸಂಖ್ಯೆಯ ಮೇಲಿನ ನಿರ್ಬಂಧ ತೆರವು

ನೈಋತ್ಯ ರೈಲ್ವೆ ವಲಯವು ಬಲ್ಕ್ ಅಥವಾ ಸಾಮೂಹಿಕ ಟಿಕೆಟ್ ಬುಕಿಂಗ್ ನಿಯಮಗಳನ್ನು...