ವಿಜಯಪುರ | ಮಹಾರಾಷ್ಟ್ರ ಮೂಲದ ಅಂತಾರಾಜ್ಯ ಕಳ್ಳರ ಬಂಧನ: 208 ಗ್ರಾಂ ಚಿನ್ನಾಭರಣ ವಶಕ್ಕೆ

Date:

ಅಂತಾರಾಜ್ಯಗಳಲ್ಲಿ ಮನೆಗಳ್ಳತನ ನಡೆಸುತ್ತಿದ್ದ ಆರೋಪದಲ್ಲಿ ಮಹಾರಾಷ್ಟ್ರ ಮೂಲದ ನಾಲ್ವರನ್ನು ವಿಜಯಪುರ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಕಳ್ಳತನ ಮಾಡಲಾಗಿದ್ದ ಚಿನ್ನಾಭರಣ ವಶಕ್ಕೆ ಪಡೆಯುವಲ್ಲಿಯೂ ಯಶಸ್ವಿಯಾಗಿದ್ದಾರೆ.

- Advertisement -

ವಿಜಯಪುರ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ವಿವರಿಸಿದ ಎಸ್‌ಪಿ ಋಷಿಕೇಶ ಭಗವಾನ್ ಸೋನವಾಣೆ, ಮಹಾರಾಷ್ಟ್ರದಿಂದ ವಿಜಯಪುರ ಜಿಲ್ಲೆಗೆ ಬಂದು ಕಳ್ಳತನ ಮಾಡಿದ ಬಳಿಕ ಈ ಗುಂಪು ತವರು ರಾಜ್ಯಕ್ಕೆ ಪರಾರಿಯಾಗುತ್ತಿತ್ತು ಎಂದು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಜಿಲ್ಲೆಯಲ್ಲಿ ನಡೆಯುತ್ತಿದ್ದ ಕಳ್ಳತನ ಪತ್ತೆಗೆ ವಿಜಯಪುರ ಗ್ರಾಮಾಂತರ ಉಪವಿಭಾಗ ಡಿವೈಎಸ್ಪಿ ಜಿ.ಎಚ್.ತಳಕಟ್ಟಿ, ಇನ್ಸ್‌ಪೆಕ್ಟರ್ ರಾಯಗೊಂಡ ಜಾನಾರ, ಆನಂದರಾವ್, ಪಿಎಸ್‍ಐ ಗಳಾದ ರವಿ ಯಡವಣ್ಣವರ, ಎನ್.ಎ.ಉಪ್ಪಾರ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ನಗರದ ಹೊರ ಭಾಗದ ಬರಗಟಗಿ ತಾಂಡಾ ಬಳಿ ಸಂಶಯಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳರ ಕೈಚಳಕ ಪತ್ತೆಯಾಗಿದೆ ಎಂದಿದ್ದಾರೆ.

ಬಂಧಿತರನ್ನು ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ರಾಮವಾಡಿ ನಿವಾಸಿ 55 ವರ್ಷದ ನಂದಾ ಉರ್ಫ ನಂದಾಬಾಯಿ ಗಾಯಕಡವಾಡ, ಸೋಲಾಪುರ ಜಿಲ್ಲೆಯ ಅಕ್ಕಲಕೋಟ ತಾಲೂಕಿನ ಬ್ಯಾಗಳ ಮೂಲದ 35 ವರ್ಷದ ಗಣೇಶ ಜಾಧವ, ದಕ್ಷಿಣ ಸೋಲಾಪುರದ ಪಟವರ್ಧನ ಚಾಳ ನಿವಾಸಿ 35 ವರ್ಷದ ಮಹದೇವ ಪಿಂಟು ಗಾಯಕವಾಡ ಹಾಗೂ ಸೋಲಾಪುರದ ರಾಮವಾಡಿ ಮೂಲದ 38 ವರ್ಷದ ಸುಂದರಾಬಾಯಿ ಮಾಣಿಕ ಜಾಧವ ಎಂದು ಗುರುತಿಸಲಾಗಿದೆ.

ಈ ಸುದ್ಧಿ ಓದದ್ದೀರಾ? ಚಿಕ್ಕಮಗಳೂರು | ಗಣೇಶ ಮೂರ್ತಿ ತರಲು ತೆರಳುತ್ತಿದ್ದ ವೇಳೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

ಜಿಲ್ಲೆಯ ಐದು ಕಡೆಗಳಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿರುವ ಬಂಧಿತರಿಂದ ಪೊಲೀಸರು 208 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರ ಮೂಲದ ಈ ಕಳ್ಳರ ತಂಡ ಕಳೆದ ಎರಡು ವರ್ಷಗಳಿಂದ ಕರ್ನಾಟಕ ರಾಜ್ಯದ ವಿಜಯಪುರ ನಗರದ ಶಿವಗಿರಿ ಪ್ರದೇಶ, ಡೋಮನಾಳ ಗ್ರಾಮ, ದೇವರಹಿಪ್ಪರಗಿ ಪಟ್ಟಣ, ತಿಕೋಟಾ ಬಸ್ ನಿಲ್ದಾಣಗಳಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಾಗಿ ಪೊಲೀಸರ ತನಿಖೆಯಲ್ಲಿ ಬಾಯಿ ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ ಮುಕ್ತ ತಾಲ್ಲೂಕು: ಸಾರ್ವಜನಿಕರ ಸಹಕಾರ ಅಗತ್ಯ

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸಾಗಾಣಿಕೆ ಮುಕ್ತ ಬಾಗೇಪಲ್ಲಿ...