ವಿಜಯಪುರ | ಮದ್ಯದಲ್ಲಿ ಆ್ಯಸಿಡ್ ಬೆರೆಸಿ ಕುಡಿದ ವ್ಯಕ್ತಿ ಸಾವು: ಬಿಜೆಪಿ ಮುಖಂಡನ ವಿರುದ್ಧ ಎಫ್ಐಆರ್

Date:

ಬಾರ್‌ನಲ್ಲಿ ಮದ್ಯ ಸೇವನೆಗೆ ಹೋಗಿದ್ದ ವ್ಯಕ್ತಿ ನೀರು ಎಂಬುದಾಗಿ ಭಾವಿಸಿ ಮದ್ಯಕ್ಕೆ ಆ್ಯಸಿಡ್​ ಬೆರೆಸಿಕೊಂಡು ಕುಡಿದು ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಅವರ ಸಾವಿಗೆ ಸಂಬಂಧಿಸಿದಂತೆ ಬಾರ್ ಮಾಲೀಕ, ಬಿಜೆಪಿ ಮುಖಂಡನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

- Advertisement -

ವಿಜಯಪುರದ ನಿವಾಸಿ ಮಹಮ್ಮದ್ ಶಫೀಕ್ ಮೃತ ದುರ್ದೈವಿ. ಅವರು ನಗರದ ಸಿದ್ಧಾರ್ಥ್‌ ಬಾರ್‌ಗೆ ಮದ್ಯ ಸೇವನೆಗೆಗ ತೆಳಿದ್ದರು. ಈ ವೇಳೆ, ಗ್ರಾಹಕರು ಕುಳಿತುಕೊಳ್ಳುವ ಟೇಬಲ್ ಮೇಲೆ ಇಟ್ಟಿದ್ದ ಆ್ಯಸಿಡ್ಅನ್ನು ನೀರೆಂದು ಭಾವಿಸಿ ಮದ್ಯಕ್ಕೆ ಬೆರೆಸಿಕೊಂಡು ಕುಡಿದಿದ್ದಾರೆ. ಕೂಡಲೇ ಅವರಿಗೆ ಹೊಟ್ಟೆ ಉರಿ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಬಾರ್‌ನಲ್ಲಿ ನೆಲ ಸ್ವಚ್ಛಗೊಳಿಸಲು ಕ್ಲೀನಿಂಗ್ ಆ್ಯಸಿಡ್ಅನ್ನು ಬಾಟಲಿಯಲ್ಲಿ ತುಂಬಿಸಿ, ಟೇಬಲ್ ಮೇಲೆ ಇಟ್ಟಿದ್ದರು. ಅದನ್ನು ನೀರು ಎಂದು ಭಾವಿಸಿದ್ದ ಶಫೀಕ್ ಮದ್ಯದೊಂದಿಗೆ ಬೆರೆಸಿಕೊಂಡು ಕುಡಿದಿದ್ದಾರೆ ಎಂದು ತಿಳಿದುಬಂದಿದೆ.

ಶಫೀಕ್‌ ಸಾವಿಗೆ ಬಾರ್‌ನ ಮಾಲೀಕ, ಮ್ಯಾನೇಜರ್ ಹಾಗೂ ವೇಟರ್ ನಿರ್ಲಕ್ಷವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಶಫೀಕ್ ಅವರ ಪತ್ನಿ ದೂರು ದಾಲಿಸಿದ್ದಾರೆ. ಅವರದೂರಿನ ಆಧಾರದ ಮೇಲೆ ಬಾರ್ ಮಾಲೀಕ, ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್​, ಮ್ಯಾನೇಜರ್ ಅಪ್ಪಾಸಾಬ್ ಮಮದಾಪೂರ, ವೇಟರ್ ಆನಂದ ಶಿಂಧೆ ವಿರುದ್ಧ ಬಿಎನ್ಎಸ್ ಸೆಕ್ಷನ್‌ 106(1), 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...