ವಿಜಯಪುರ | ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಸೆ.4ರಂದು ಬೃಹತ್‌ ಪ್ರತಿಭಟನೆ

Date:

Advertisements

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಮತ್ತು ಏಕಸ್ವಾಮ್ಯ ಬಂಡವಾಳಶಾಹಿ ಪರ ನೀತಿಗಳ ಖಂಡಿಸಿ ಹಾಗೂ ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳುವ ನಾಲ್ಕು ಕಾರ್ಮಿಕ ಕೋಡ್‌ಗಳನ್ನು ತಕ್ಷಣ ರದ್ದುಗೊಳಿಸುವುದು ಸೇರಿದಂತೆ ವಿವಿಧ ಹಕ್ಕೊತ್ತಾಯಗಳನ್ನು ಸೆಪ್ಟೆಂಬರ್ 4ರಂದು ದೆಹಲಿಯ ಜಂತರ್ ಮಂತರ್ ನಲ್ಲಿ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ವತಿಯಿಂದ ಅಖಿಲ ಭಾರತ ಮಟ್ಟದಲ್ಲಿ ಕಾರ್ಮಿಕರ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಚ್ ಟಿ ತಿಳಿಸಿದರು.

ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ, ನೌಕರರ ವಿರೋಧಿ ಹಾಗೂ ಏಕಸ್ವಾಮ್ಯ ಬಂಡವಾಳಶಾಹಿ ಪರ ನೀತಿಗಳಾದ ನಾಲ್ಕು ಲೇಬರ್ ಕೋಡ್ ರದ್ದುಗೊಳಿಸುವಂತೆ, ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸುವಂತೆ, ಸ್ಟೀಮ್ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು ಮತ್ತು ಗುತ್ತಿಗೆ ಹೊರಗುತ್ತಿಗೆ ಕಾರ್ಮಿಕರಿಗೆ ಸೇವಾಭದ್ರತೆ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕೆ ಆಗ್ರಹಿಸಿ ದೇಶಾದ್ಯಂತ ಮತ್ತಷ್ಟು ಚಳವಳಿಗಳನ್ನು ತೀವ್ರಗೊಳಿಸುವ ಉದ್ದೇಶದಿಂದ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ” ಎಂದರು.

“ಮಂತರ್‌ನಲ್ಲಿ ಬೆಳಗ್ಗೆ 11ಕ್ಕೆ ಸಂಘಟನೆಯ ಅಖಿಲ ಭಾರತ ಅಧ್ಯಕ್ಷ ಕಾಮೇಡ್ ಕೆ. ರಾಧಾಕೃಷ್ಣ ಅಧ್ಯಕ್ಷತೆಯಲ್ಲಿ ಪ್ರತಿಭಟನಾ ಸಭೆ ಆರಂಭವಾಗಲಿದೆ. ಉಪಾಧ್ಯಕ್ಷರಾದ ಕಾಮ್ರಡ್ ಸ್ವಪನ್ ಘೋಷ್, ಅರುಣ್ ಕುಮಾರ್ ಸಿಂಗ್, ಪ್ರಧಾನ ಕಾರ್ಯದರ್ಶಿ ಕಾಮೆಡ್ ಶಂಕರ್ ದಾಸ್ ಗುಪ್ತಾ ಮತ್ತು ವಿವಿಧ ರಾಜ್ಯಗಳ ಮುಖಂಡರು ಭಾಷಣಕಾರರಾಗಿ ಪಾಲ್ಗೊಳ್ಳಲಿದ್ದಾರೆ” ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ವಿಜಯಪುರ | ಸೆ.3ರಿಂದ ರಾಜ್ಯಾದ್ಯಂತ ಸೀರತ್‌ ಅಭಿಯಾನ

“ದೇಶವು ಕಳೆದ 78 ವರ್ಷಗಳಲ್ಲಿ ದುಡಿಯುವ ಜನರ ಜೀವನದ ಕಹಿ ಅನುಭವಗಳು, ಬಡವರು ಮತ್ತು ಶ್ರೀಮಂತರ ನಡುವೆ ವಿಪರೀತ ಹೆಚ್ಚುತ್ತಿರುವ ಅಸಮಾನತೆಗೆ ಸಾಕ್ಷಿಯಾಗಿವೆ. ಜನಸಂಖ್ಯೆಯ ಶೇ.5ರಷ್ಟಿರುವ ಶ್ರೀಮಂತರು ಪರಿಶ್ರಮದಿಂದ ಸೃಷ್ಟಿಯಾದ ದೇಶದ ಶೇ.70 ಸಂಪತ್ತನ್ನು ಕಬಳಿಸಿದ್ದಾರೆ. ಈ ಗಂಭೀರ ಪರಿಸ್ಥಿತಿಯಲ್ಲಿ ಧರ್ಮ, ಜಾತಿ, ಭಾಷೆ, ಪ್ರದೇಶ, ಜನಾಂಗೀಯ ಭೇದವನ್ನು ಮೀರಿ ಕಾರ್ಮಿಕರು, ಕೃಷಿ ಕಾರ್ಮಿಕರು, ಬಡ ರೈತರು, ಗ್ರಾಮೀಣ ಮತ್ತು ನಗರ ಕೆಳ ಮಧ್ಯಮ ವರ್ಗಗಳ ಶೋಷಿತ ಜನರ ಐಕ್ಯತೆ ಅತ್ಯಂತ ಮಹತ್ವದ್ದಾಗಿದೆ. ಆದರೆ, ಆಳುವ ಸರ್ಕಾರಗಳು ಗರಿಷ್ಠ ಲಾಭಗಳಿಸುವ ತಮ್ಮ ವರ್ಗ ಹಿತಾಸಕ್ತಿಗಾಗಿ ನಮ್ಮ ಐಕ್ಯತೆಯನ್ನು ಒಡೆಯಲು ಸತತ ಪಿತೂರಿಗಳನ್ನು ಮಾಡುತ್ತಿವೆ. ನಿಜವಾದ ಬೇಧ ಅಥವಾ ವಿಭಜನೆಯು ಶೋಷಕ ಮತ್ತು ಶೋಷಿತರ ನಡುವೆ, ಶ್ರೀಮಂತರು ಮತ್ತು ಬಡವರ ನಡುವ ಇದೆ. ಎಲ್ಲ ಜನಸಾಮಾನ್ಯರು ಹಾಗೂ ದುಡಿಯುವ ‘ಜನರು ಒಗ್ಗಟ್ಟಾಗಿ ನಿಲ್ಲಬೇಕಿದೆ” ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶಶಿಕಲಾ ಕೆಂಭಾವಿ, ಭಾರತಿ ದೇವಕತೆ, ಮಲ್ಲಮ್ಮ ಕಟ್ಟಿ ಮಾಲೀಕಮ್ಮ ಅಂಬಿಕಾ ಒಳಸಂಕ, ಲಲಿತಾ ತಳವಾರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

Download Eedina App Android / iOS

X