ವಿಜಯಪುರ | ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಸಭೆ

Date:

Advertisements

ರಾಜ್ಯದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌ ಕೆ ಶಿವಕುಮಾರ್, ಹಾಲಿ ಮುಖ್ಯಮಂತ್ರಿ‌ ಸಿದ್ದರಾಮಯ್ಯನವರು 5 ಗ್ಯಾರಂಟಿಗಳನ್ನು ಘೋಷಿಸಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ರಾಜ್ಯದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್ ಆರ್ ಪಾಟೀಲ (ಬ್ಯಾಡಗಿ) ಹೇಳಿದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ ರಾಜ್ಯ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅನುಷ್ಠಾನ ಸಮಿತಿ ಹಾಗೂ ತಾಲೂಕು ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ರಾಜ್ಯದ ಎಲ್ಲ ವರ್ಗದವರಿಗೂ ತಲುಪಿದ್ದು, ಜನರು ಸಂತೋಷದಿಂದಿದ್ದಾರೆ. ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿಯೂ ಎಐಸಿಸಿಯಿಂದ ಪಂಚನ್ಯಾಯಗಳನ್ನು ಪ್ರಣಾಳಿಕೆಯಲ್ಲಿ ಘೋಷಿಸಿದ್ದು, ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ಕೂಡಲೇ ಈ ಪಂಚನ್ಯಾಯಗಳನ್ನು ಈಡೇರಿಸಲು ಬದ್ಧವಾಗಿದೆ. ಸದರಿ ಯೋಜನೆಗಳ ಗ್ಯಾರಂಟಿ ಕಾರ್ಡ್‌ಗಳನ್ನು ಜಿಲ್ಲೆಯ ಪ್ರತಿ ಮನೆ ಮನೆಗೆ ಭೇಟಿ ನೀಡಿ ಅವರಿಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಲು ಗ್ಯಾರಂಟಿ ಯೋಜನೆಯ ಸಮಿತಿ ಸದಸ್ಯರು ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು. ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಅವರ ಗೆಲುವಿಗೆ ಶ್ರಮಿಸಬೇಕು” ಎಂದು ಕರೆ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ?  ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗೆಲುವು ಗ್ಯಾರಂಟಿ: ಸದಾಶಿವ ಉಳ್ಳಾಲ್ ವಿಶ್ವಾಸ

ದೇವರ ಹಿಪ್ಪರಗಿ ತಾಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷ ಸಾಹೇಬಗೌಡ ಬಿರಾದಾರ, ಜಿಲ್ಲಾ ಉಪಾಧ್ಯಕ್ಷರಾದ ಹೊನಮಲ್ಲ ಸಾರವಾಡ, ಶ್ರೀಶೈಲ ಕವಲಗಿ, ವ್ಹಿಡಿಎ ಅಧ್ಯಕ್ಷ ಕನ್ನಾನ ಮುಶ್ರೀಫ್, ರಾಮನಗೌಡ ಬಗಲಿ, ರಮೇಶ ಗುಬ್ಬೇವಾಡ, ಸಣ್ಣಪ್ಪ ತಳವಾರ, ಶ್ರೀಕಾಂತ ಛಾಯಾಗೋಳ, ಮಹಾದೇವಿ ಗೋಕಾಕ, ಜಯಶ್ರೀ ಭಾರತೆ, ರಾಜೇಶ್ವರಿ ಚೋಳಕೆ, ಪ್ರಶಾಂತ ಕಾಳೆ,
ರಾಮನಗೌಡ ಬಗಲಿ, ಅಮಿತ ಚವ್ಹಾಣ, ನಿಂಗಪ್ಪ ಸಂಗಾಪೂರ, ಬಾಪುಗೌಡ ಪಾಟೀಲ, ಸುಭಾಷ ಕಾಲೇಬಾಗ, ಪ್ರಕಾಶ ಪಾಟೀಲ, ವಸಂತ ಹೊನಮೊಡೆ, ಚನಬಸಪ್ಪ ನಂದರಗಿ, ಹಾಜಿಲಾಲ ದಳವಾಯಿ, ಆನಂದ ಜಾಧವ ಮತ್ತು ಜಿಲ್ಲೆಯ ಎಲ್ಲ ತಾಲೂಕು ಅಧ್ಯಕ್ಷರು ಹಾಗೂ ಸದಸ್ಯರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X