ವಿಜಯಪುರ | ಸುಸ್ಥಿರ ಹೈನುಗಾರಿಕೆಗಾಗಿ ಕ್ಷೀರ ಪೈಲೆಟ್ ಯೋಜನೆ; ಸಚಿವ ಎಂಬಿ ಪಾಟೀಲ್ ಚಾಲನೆ

Date:

ವಿಜಯಪುರ ಜಿಲ್ಲೆಯ ಸುಸ್ಥಿರ ಹೈನುಗಾರಿಕೆಗಾಗಿ ಕ್ಷೀರ ಪೈಲೆಟ್‌ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗಿದ್ದು, ಪೈಲೆಟ್ ಯೋಜನೆಗೆ ಆಯ್ಕೆಯಾಗಿರುವ ರೈತರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್‌ ತಿಳಿಸಿದರು.

- Advertisement -

ನಗರದಲ್ಲಿ ಬಿಎಲ್‌ಡಿಇ ಸಂಸ್ಥೆ, ಕೃಷಿ ಕಲ್ಪ ಫೌಂಡೇಶನ್ ಹಾಗೂ ಅಕ್ಷಯ ಕಲ್ಪ ಫೌಂಡೇಶನ್ ಸಹಯೋಗದಲ್ಲಿ ಜಿಲ್ಲೆಯಲ್ಲಿ ಸುಸ್ಥಿರ ಹೈನುಗಾರಿಕೆ ಉತ್ತೇಜಿಸಲು ಅನುಷ್ಠಾನಿಸಿರುವ ಕ್ಷೀರ ಪೈಲೆಟ್ ಯೋಜನೆಯಡಿ ಮಕ್ಕಳಿಗೆ ಹಾಲು ಕೊಡಿಸುವ ಮೂಲಕ ವಿನೂತನವಾಗಿ ಚಾಲನೆ ನೀಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

“ಪ್ರಶಾಂತ್ ಪ್ರಕಾಶ್ ಅವರು ನವೋದ್ಯಮಿಗಳಿಗೆ ಸ್ಟಾರ್ಟಪ್ ಮೂಲಕ ಉದ್ಯಮ ಪ್ರಾರಂಭಿಸಲು ನೆರವಾಗುತ್ತಿದ್ದಾರೆ. ಅವರು ಈ ಯೋಜನೆಗೆ ಕೈಜೋಡಿಸಿರುವುದು ಸಂತಸ ತಂದಿದೆ. “ಮುಂದಿನ ಐದು ವರ್ಷಗಳಲ್ಲಿ ವಿಜಯಪುರ ಜಿಲ್ಲೆ, ದೇಶದಲ್ಲೇ ಅತಿ ಹೆಚ್ಚು ಹಾಲು ಉತ್ಪಾದನೆಯ ಮೂರು ಜಿಲ್ಲೆಗಳಲ್ಲಿ ಸ್ಥಾನ ಪಡೆಯಲಿದೆ. ಇದು ರೈತಪರ, ಮಹಿಳೆಯ ಪರ, ಯುವಕರ ಪರ ಮತ್ತು ಪಕ್ಷಾತೀತ ಯೋಜನೆಯಾಗಿದೆ. ನಾವು ಕೈಗೊಂಡ ಕೋಟಿ ವೃಕ್ಷ ಅಭಿಯಾನದಂತೆ ಎಲ್ಲರೂ ಇದರಲ್ಲಿ ತೊಡಗಿಕೊಳ್ಳಬೇಕು. ಈ ಕ್ಷಣ ಯೋಜನೆಯಡಿ ಸಣ್ಣದಾಗಿ ಹೈನುಗಾರಿಕೆ ಪ್ರಾರಂಭಿಸಿ ಲೋಪ ದೋಷ ಸರಿಪಡಿಸಿಕೊಂಡು ಹೈನುಗಾರಿಕೆ ವಿಸ್ತರಿಸಲು ರೂಪುರೇಷೆ ಸಿದ್ಧಪಡಿಸಲಾಗಿದೆ. ಯುವಕರು ಕೂಡ ವೃತ್ತಿ ಕೌಶಲ್ಯ ಹೆಚ್ಚಿಸಿಕೊಂಡು ಉದ್ಯಮದಲ್ಲಿ ತೊಡಗಿಸಿಕೊಳ್ಳಲು ಮತ್ತು ಈ ಮೂಲಕ ತೋಟಗಾರಿಕೆ, ಹೈನುಗಾರಿಕೆಗಳನ್ನು ವೈಜ್ಞಾನಿಕವಾಗಿ ಅಳವಡಿಸಿಕೊಂಡು ಉತ್ಪಾದನೆ ಹೆಚ್ಚಿಸಲು ಇದು ನೆರವಾಗಲಿದೆ” ಎಂದರು.

ಪದ್ಮಶ್ರೀ ಪುರಸ್ಕೃತ ಮತ್ತು ಬೆಂಗಳೂರಿನ ಕಂಪನಿ ಸಿಇಒ ಪ್ರಶಾಂತ ಪ್ರಕಾಶ್ ಮಾತನಾಡಿ, “ಕಳೆದ 15 ರಿಂದ 20 ವರ್ಷಗಳ ಕಾಲ ನವ ಉದ್ಯಮಗಳಿಗೆ ಉತ್ತೇಜನ ನೀಡಿ ನಗರಾಭಿವೃದ್ಧಿ ಮಾಡುವತ್ತ ಗಮನ ಹರಿಸಿದ್ದೆ. ಸಚಿವ ಎಂಬಿ ಪಾಟೀಲ ಅವರ ಸಹಯೋಗದಲ್ಲಿ ಈಗ ಗ್ರಾಮೀಣ ಭಾಗಗಳಲ್ಲಿಯೂ ಕೈಗಾರಿಕೆಗಳನ್ನು ಪ್ರಾರಂಭಿಸಲು ಉತ್ತೇಜನ ನೀಡುವ ಕೆಲಸಗಳಿಗೆ ಆದ್ಯತೆ ನೀಡಿದ್ದೇನೆ. ವಿಜಯಪುರ ಜಿಲ್ಲೆಯಲ್ಲಿ ಈ ಯೋಜನೆಗೆ ಚಾಲನೆ ನೀಡಲು ಬಿ ಎಲ್ ಡಿ ಇ ಡಿ ಯ ಕುಲಾಧಿಪತಿ ಬಸನಗೌಡ ಪಾಟೀಲ್ ನನ್ನ ಜೊತೆ ಹದಿನೈದು ಸಭೆಗಳನ್ನು ಮಾಡಿದ್ದಾರೆ. ತಂತ್ರಜ್ಞಾನ ಬಳಸಿ ಹಾಲು ಉತ್ಪಾದನೆ ಹೆಚ್ಚಿಸಲು ರೂಪುರೇಷೆ ಸಿದ್ಧಪಡಿಸಿದ್ದಾರೆ. ಜಿಲ್ಲೆಯ ಜನ ಕಾಯಕ ನಿಷ್ಠರಾಗಿದ್ದು, ಮುಂಬರುವ ದಿನಗಳಲ್ಲಿ ಶ್ವೇತ ಕ್ರಾಂತಿಗೂ ಕೊಡುಗೆ ನೀಡಲಿದ್ದಾರೆ” ಎಂದರು.

ಇದನ್ನೂ ಓದಿ: ವಿಜಯಪುರ | ಸಕ್ಕರೆ ದರ ನಿಗದಿಗೆ ವಿಳಂಬ ಬೇಡ: ಡಿಸಿ ಆನಂದ

ಈ ವೇಳೆ ಕೃಷಿ ಕಲ್ಪ ಫೌಂಡೇಶನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಎಂ ಪಾಟೀಲ, ಜಿಲ್ಲಾಧಿಕಾರಿ ಡಾ ಆನಂದ ಕೆ, ವಿಜಯಪುರ ಮತ್ತು ಬಾಗಲಕೋಟೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಈರನಗೌಡ ಕರಿಗೌಡ, ಡಾ. ಮಹಾಂತೇಶ ಬಿರಾದಾರ, ಭಾಗ ವಿಜಯಪುರ ಬಾಗಲಕೋಟೆ ಹಾಲ್ ಉತ್ಪಾದಕರ ಸಂಘದ ವ್ಯವಸ್ಥಾಪಕ ನಿರ್ದೇಶಕ ಶಿವಕುಮಾರ ಸ್ವಾಮಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಭು ರಾಜ ಹಿರೇಮಠ, ಪಶು ಸಂಗೋಪನೆ ಇಲಾಖೆ ಉಪ ನಿರ್ದೇಶಕ ಡಾ. ಅಶೋಕ ಗುಣಸಗಿ ರೈತರೊಂದಿಗೆ ಕ್ಷೀರ ಯೋಜನೆ ಕುರಿತು ಸಂವಾದ ನಡೆಸಿದರು. ಉಪನ್ಯಾಸಕ ಸುಭಾಷ್ ಕಣ್ಣೂರ್ ಮತ್ತು ಕೃಷಿಕಲ್ಪ ಫೌಂಡೇಶನ್ ವೀರಣ್ಣ ರೊಟ್ಟಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...