ವಿಜಯಪುರ | ₹300 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಸಚಿವ ಎಂ ಬಿ ಪಾಟೀಲ್‌ ಭೂಮಿಪೂಜೆ

Date:

ಅಭಿವೃದ್ಧಿಯ ಮೂಲಕ‌ ಗ್ರಾಮೀಣ ಭಾಗದ ರಸ್ತೆಗಳಿಗೆ ಹೊಸ ಮೆರುಗು ನೀಡಲಾಗುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದರು.

- Advertisement -

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಯಕ್ಕುಂಡಿಯಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ರೂ 300 ಲಕ್ಷ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 34ರ ಯಕ್ಕುಂಡಿ, ಸಂಗಾಪುರ, ಶೇಗುಣಸಿ, ಕಾಖಂಡಕಿ ವ್ಹಾಯಾ ಹರಳಯ್ಯನಗುಂಡ ವ್ಯಾಪ್ತಿಯಲ್ಲಿನ 3 ಕಿ.ಮೀ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ಈ ಭಾಗದ ಜನತೆಯ ಬಹುದಿನಗಳ ನಿರೀಕ್ಷೆಯಾಗಿದ್ದ ರಾಷ್ಟ್ರೀಯ ಹೆದ್ದಾರಿ 34ರಿಂದ ಹರಳಯ್ಯನಗುಂಡ ರಸ್ತೆಯವರೆಗೆ ಈ‌ ಕಾಮಗಾರಿ ನಡೆಯಲಿದೆ. ಇದರಿಂದ ಯಕ್ಕುಂಡಿ, ಸಂಗಾಪುರ, ಶೇಗುಣಸಿ ಹಾಗೂ ಕಾಖಂಡಕಿ ಜನರಿಗೆ ಹಾಗೂ ಸುಕ್ಷೇತ್ರ ಹರಳಯ್ಯನಗುಂಡಕ್ಕೆ ಆಗಮಿಸುವ ಭಕ್ತರಿಗೆ ಅನುಕೂಲವಾಗಲಿದೆ. ಅಷ್ಟೇ ಅಲ್ಲದೆ, ಈ ಕಾಮಗಾರಿ ಪೂರ್ಣಗೊಂಡ ನಂತರ ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ರಸ್ತೆ ಸಂಚಾರ ಮತ್ತಷ್ಡು ಸುಲಭವಾಗಲಿದೆ” ಎಂದು ಅವರು ತಿಳಿಸಿದರು.

“ಬಬಲೇಶ್ವರ ಮತಕ್ಷೇತ್ರದಲ್ಲಿ ಕೆರೆ ತುಂಬಿಸುವ ಯೋಜನೆಗೆ ಪೂರಕವಾಗಿ ಈಗ ಹಳ್ಳಗಳನ್ನು ತುಂಬಿಸುವ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ನೀರಾವರಿಗೆ ಪೂರಕವಾಗಿ ಗುಣಮಟ್ಟದ ವಿದ್ಯುತ್ ಪೂರೈಕೆಗೆ ಒತ್ತು ನೀಡಲಾಗಿದೆ. ಶೈಕ್ಷಣಿಗ ಗುಣಮಟ್ಟ ಸುಧಾರಣೆ, ರಸ್ತೆಗಳ ಅಭಿವೃದ್ಧಿ, ಹೈನುಗಾರಿಕೆಯಲ್ಲಿ ಸ್ವಾವಲಂಬನೆ ಸಾಧಿಸಲು ನಾನಾ ಯೋಜನೆಗಳಿವೆ ಚಾಲನೆ ನೀಡಲಾಗಿದೆ. ʼರೈತರು ಕುಷಿಯಾಗಿದ್ದರೆ ನಾಡು ಸಮೃದ್ಧಿಯಿಂದ ಕೂಡಿರುತ್ತದೆʼ ಎಂಬ ತತ್ವದಡಿ ಕಾಯಕ ನಿರತವಾಗಿದೆ” ಎಂದು ಸಚಿವ ಎಂ ಬಿ ಪಾಟೀಲ ಹೇಳಿದರು.

ಮುಖಂಡ ಚನ್ನಪ್ಪ ಕೊಪ್ಪದ ಮಾತನಾಡಿ “ರಸ್ತೆ ಸುಧಾರಣೆ ಕಾಮಗಾರಿಗೆ ಚಾಲನೆ ನೀಡಿದ್ದರಿಂದ ಈ ಭಾಗದ ಜನರು ಸುತ್ತುಬಳಸಿ ಬೇರೆ ಮಾರ್ಗಗಳ ಮೂಲ ಸಂಚಿರಿಸುವುದು ತಪ್ಪಲಿದೆ. ಸಮಯ ಉಳಿತಾಯದ ಜೊತೆ ಇಂಧನ ವೆಚ್ಚವೂ ಕಡಿಮೆಯಾಗಲಿದೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಯಕ್ಕುಂಡಿಯ ವೀರೇಶ್ವರ ಶರಣರು, ಮುಖಂಡರಾದ ವಿ ಎಸ್ ಪಾಟೀಲ, ಮಲ್ಲು ದಳವಾಯಿ, ರಮೇಶ ದೇಸಾಯಿ, ಬಾಬುಗೌಡ ಪಾಟೀಲ, ನಾಗರಾಜ ಕುಲಕರ್ಣಿ, ಪ್ರಭುಗೌಡ ಪಾಟೀಲ, ಶೇಖಪ್ಪ ಕೊಪ್ಪದ, ಮಲ್ಲಪ್ಪ ಕೆಂಪವಾಡ, ಮಹೇಶ ಮಾಳಿ, ರಫೀಕ್ ಸೋನಾರ, ಜಾಫರ್ ನಿಡೋಣಿ, ವಿದ್ಯಾ ರಾಣಿ ತುಂಗಳ, ದಾನಮ್ಮ ಜಿರಲಿ, ಕಾವ್ಯ ಪಡತಾರೆ, ರಂಗಪ್ಪ ಪೂಜಾರಿ, ಮಾದೇವಪ್ಪ ಮಂಡೆಗಾರ, ಬುಡ್ಡಸಾಬ್ ಜಮಾದಾರ, ಇಸಾಕಸಾಬ್ ಜಮಾದಾರ, ಮುತ್ತಪ್ಪ ಪೂಜಾರಿ, ರಾಜಸಾಬ ಜಮಾದಾರ, ಪರಶುರಾಮ ಪಡಗಾರ, ರಾಜೇಸಾಬ್ಲ ಗಲಗಲಿ, ಅಬ್ಬಾ ಸಲಿ ಕಮತೆ, ಸವಿತಾ ವಗ್ಗರ,
ಸುರೇಶ ಪೂಜಾರಿ, ರಮೇಶ ತಂಬಾಕೆ ಸೇರಿದಂತೆ ಗ್ರಾಮದ ಹಿರಿಯರು, ಯುವಕರು
ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿಗೆ ‘ಅಲ್ಲಾಹ್ ಮೇಲಕ್ಕೆ ಟಿಕೆಟ್ ಕಾಯ್ದಿರಿಸಲಿ’ – ಹುಮಾಯೂನ್ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬಂಗಾಳದ ರೇಜಿನಗರ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ತೀವ್ರ ಸ್ವರೂಪ...

ಮಾನವೀಯತೆ-ಸಮಾನತೆಯ ಬದುಕಿಗೆ ಸೀರತ್ ಸಂದೇಶ: ಸೌಹಾರ್ದದ ಸಮಾಜ ನಿರ್ಮಾಣಕ್ಕೆ ಕರೆ

ಮೈಸೂರು ನಗರದ ಜಗನ್ಮೋಹನ ಅರಮನೆಯಲ್ಲಿ ನಡೆದ ಸಾರ್ವಜನಿಕ ಸೀರತ್ ಸಮಾವೇಶವು ಧರ್ಮ,...

ಕೆನಡಾದಲ್ಲಿ ಬೆಳ್ಳಿ ಪದಕ ಗೆದ್ದ ವಿಜಯಪುರದ ಸಚಿನ್ ತುಕಾರಾಮ್ ಸಾಲೊಂಕೆ

ಕೆನಡಾದ ವಿನ್ನಿಪೆಗ್‌ನಲ್ಲಿ ನಡೆದ ಪ್ರತಿಷ್ಠಿತ 2026 ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ...