ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆಲುವು ಸಾಧಿಸಿದ ಹಿನ್ನೆಲೆ ಬಿಜೆಪಿ ಕಾರ್ಯಕರ್ತನೋರ್ವ ಸಾರ್ವಜನಿಕವಾಗಿ ಖಡ್ಗ ಪ್ರದರ್ಶನ ಮಾಡಿರುವ ಘಟನೆ ವಿಜಯಪುರ ನಗರದ ಸಿದ್ಧೇಶ್ವರ ದೇವಸ್ಥಾನದ ಬಳಿ ಶನಿವಾರ ನಡೆದಿದೆ.
ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಿದಂತೆ ವಿಜಯೋತ್ಸವ ನಡೆಯಿತು. ಈ ವೇಳೆ ಕಾರ್ಯಕರ್ತ ಕೈಯಲ್ಲಿ ಖಡ್ಗ ಹಿಡಿದು ಪ್ರದರ್ಶನ ಮಾಡಿದ್ದಾನೆ.
ಈ ಸುದ್ದಿ ಓದಿದ್ದೀರಾ? ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ದಿಗ್ವಿಜಯ; ನೆಲಕಚ್ಚಿದ ಬಿಜೆಪಿ
ನಗರದ ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.