ಎರಡನೇ ಮಗು ಆಗದ್ದನ್ನೇ ಮನಸ್ಸಿಗೆ ಹಚ್ಚಿಕೊಂಡ ಮಹಿಳೆಯೊಬ್ಬರು ತನ್ನ ನಾಲ್ಕು ವರ್ಷದ ಮಗಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಂಡರಗಲ್ ಗ್ರಾಮದಲ್ಲಿ ಸೋಮವಾರ ನಡೆದಿದೆ.
ತಾಲೂಕಿನ ಹಂಡರಗಲ್ ಗ್ರಾಮದ ಸಮೀಪದಲ್ಲಿರುವ ಬಾವಿಯೊಂದರಲ್ಲಿ ರಿಹಾನಾ ಮಹೆಬೂಬ ಇನಾಮದಾರ(24) ಹಾಗೂ ಅಮೀರಾ(4) ಎಂಬುವವರ ಮೃತದೇಹಗಳು ಪತ್ತೆಯಾಗಿವೆ. ಮೃತದೇಹಗಳನ್ನು ಅಗ್ನಿಶಾಮಕ ಠಾಣೆಯ ಸಿಬ್ಬಂದಿ, ಸ್ಥಳೀಯ ಜೆಸಿಬಿ ಬಳಸಿ ಹೊರತೆಗೆಯಲಾಗಿದೆ.
ಈ ಸುದ್ದಿ ಓದಿದ್ದೀರಾ? ಗದಗ | ಲಕ್ಕುಂಡಿಯಲ್ಲಿ ಪ್ರಾಚ್ಯಾವಶೇಷ ಸಂಗ್ರಹಣೆಗೆ ವಿಶೇಷ ಅಭಿಯಾನ
ಘಟನಾ ಸ್ಥಳಕ್ಕೆ ಪಿಎಸ್‌ಐ ಸಂಜಯ್ ತಿಪ್ಪಾರೆಡ್ಡಿ, ಅಪರಾಧ ವಿಭಾಗದ ಪಿಎಸ್‌ಐ ಆರ್ ಎಲ್ ಮನ್ನಾಬಾಯಿ ಭೇಟಿ ನೀಡಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಪಿಎಸ್‌ಐ ಸಂಜಯ್ ತಿಪ್ಪಾರೆಡ್ಡಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ತಾಯಿ ಮಾನಸಿಕ ಅಸ್ವಸ್ಥತೆಯಿಂದ ನರಳುತ್ತಿದ್ದರೆಂದು ತಿಳಿದುಬಂದಿದೆ. ಆಕೆಯ ಗಂಡ ಗೋವಾದಲ್ಲಿದ್ದಾರೆ, ಮನೆಯಲ್ಲಿರಲಿಲ್ಲವೆಂಬ ಮಾಹಿತಿಯಿದೆ. ಗಂಡ ಬೇಡವೆಂಬುದನ್ನು ಮನಸ್ಸಿಗೆ ತೆಗೆದುಕೊಂಡ ಈಕೆ ತನ್ನ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.
