ವಿಜಯಪುರ | ಮಕ್ಕಳ ಜತೆಗೆ ಕಾಲುವೆಗೆ ಜಿಗಿದ ತಾಯಿ; ನಾಲ್ವರು ಮಕ್ಕಳ ಸಾವು, ಮಹಿಳೆಯ ರಕ್ಷಣೆ

Date:

ವಿಜಯಪುರ ಜಿಲ್ಲೆಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಗೆ ಮಹಿಳೆಯೊಬ್ಬಳು ತನ್ನ ನಾಲ್ವರು ಮಕ್ಕಳೊಂದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಯಲ್ಲಿ ನಾಲ್ವರು ಮಕ್ಕಳು ಸಾವಿಗೀಡಾಗಿದ್ದಾರೆ. ಮಹಿಳೆಯನ್ನು ಸ್ಥಳೀಯರು ರಕ್ಷಿಸಿ‌ರುವ ಘಟನೆ ಸೋಮವಾರ ನಡೆದಿದೆ.

- Advertisement -

ಸಾವಿಗೀಡಾದವರನ್ನು ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ ತನು ನಿಂಗರಾಜ‌ ಭಜಂತ್ರಿ(5), ರಕ್ಷಾ ನಿಂಗರಾಜ ಭಜಂತ್ರಿ(3) ಹಾಗೂ ಅವಳಿ ಮಕ್ಕಳಾದ ಹಸೇನ ನಿಂಗರಾಜ ಭಜಂತ್ರಿ, ಹುಸೇನ ನಿಂಗರಾಜ ಭಜಂತ್ರಿ(13 ತಿಂಗಳು) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕೌಟುಂಬಿಕ ಕಲಹದಿಂದ ನೊಂದ ಮಹಿಳೆ ಭಾಗ್ಯ ಎಂಬುವವರು ತನ್ನ ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದು ಬಳಿಕ ತಾನೂ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಮೀನುಗಾರರು ತಾಯಿಯನ್ನು ಕಾಲುವೆಯಿಂದ ಎತ್ತಿ ಬದುಕಿಸಿದ್ದಾರೆ. ಸ್ಥಳದಲ್ಲಿ ಸಂಬಂಧಿಗಳ ರೋಧನೆ ಮುಗಿಲು ಮಟ್ಟಿದೆ.

ಘಟನೆ ಹಿನ್ನೆಲೆ

ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ ಲಿಂಗರಾಜ್ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದ. ಈ ಸಾಲವನ್ನು ತೀರಿಸಲು ಆಸ್ತಿ ಮಾರಾಟ ಮಾಡಲು ಚಿಂತನೆ ನಡೆಸಿದ್ದ. ಹೀಗಾಗಿ ತನ್ನ ಪಿತ್ರಾರ್ಜಿತ ಆಸ್ತಿ ಪಾಲು ಕೇಳಿದ್ದ. ಸಾಲ ತೀರಿಸಲು ತಂದೆಯ ಪಿತ್ರಾರ್ಜಿತ ಆಸ್ತಿಯ ಪಾಲು ಕೇಳಿದ್ದ. ಆದೆ, ಆಸ್ತಿಪಾಲಿನ ವಿಚಾರವಾಗಿ ನಿಂಗರಾಜ ಸಹೋದರರು ತಂದೆಯ ಜೊತೆ ಜಗಳವಾಡಿದ್ದಾರೆ. ಇದೇ ವಿಚಾರವಾಗಿ ಕಳೆದ ಹಲವಾರು ದಿನಗಳಿಂದ ಮನೆಯಲ್ಲಿ ಜಗಳ ಆಗಿತ್ತು ಎನ್ನಲಾಗಿದೆ.

ತಂದೆ ತಾಯಿ ಇರುವರೆಗೂ ಆಸ್ತಿಯಲ್ಲಿ ಪಾಲು ನೀಡುವುದಿಲ್ಲವೆಂದು ನಿಂಗರಾಜ ಸಹೋದರರು ಜಗಳ ಮಾಡಿದ್ದರು. ಇದರಿಂದ ನಿಂಗರಾಜ ತೀವ್ರವಾಗಿ ನೊಂದಿದ್ದ. ಈ ಕಾರಣಕ್ಕಾಗಿ ಪತ್ನಿ ಭಾಗ್ಯಶ್ರೀ ಹಾಗೂ ಲಿಂಗರಾಜ ಮಧ್ಯೆ ಜಗಳವಾಗುತ್ತಿತ್ತು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಗುಡಿಸಲು ತೆರವುಗೊಳಿಸುವ ಮುನ್ನ ಬಡಜನರಿಗೆ ಪುನರ್ವಸತಿ ಕಲ್ಪಿಸಬೇಕು: ಸಿಪಿಐಎಂಎಲ್

ಬನದ ಹುಣ್ಣಿಮೆ ಇದ್ದ ಕಾರಣ ನಿಂಗರಾಜ, ಹೆಂಡತಿ ಮಕ್ಕಳೊಂದಿಗೆ ನಿಡಗುಂದಿ ತಾಲೂಕಿನ ಎಲ್ಲಮ್ಮನ ಬೂದಿಹಾಳ ಗ್ರಾಮಕ್ಕೆ ಎಲ್ಲಮ್ಮನ ದರ್ಶನಕ್ಕೆ ಕುಟುಂಬ ಸಹಿತ ತೆರಳುತ್ತಿದ್ದ. ದುರದೃಷ್ಟವಶಾತ್​ ಆಲಮಟ್ಟಿ ಎಡದಂಡೆ ಕಾಲುವೆ ಬಳಿ ನಿಂಗರಾಜನ ಬೈಕ್ ಪೆಟ್ರೋಲ್ ಖಾಲಿಯಾಗಿತ್ತು. ಬಳಿಕ ನಿಂಗರಾಜ, ಮಕ್ಕಳು ಹಾಗೂ ಪತ್ನಿಯನ್ನು ಕೆನಾಲ್ ಬಳಿ ನಿಲ್ಲಿಸಿ ಪೆಟ್ರೋಲ್ ತರಲು ಹೋಗಿದ್ದ. ವಾಪಸ್ ಬರುವಷ್ಟರಲ್ಲಿ ಭಾಗ್ಯಶ್ರೀ ತನ್ನ ನಾಲ್ಕು ಮಕ್ಕಳನ್ನು ಕಾಲುವೆಗೆ ಎಸೆದು ತಾನೂ ಸಹ ಜಿಗಿದಿದ್ದಳು ಎಂದು ತಿಳಿದುಬಂದಿದೆ.

ಭಾಗ್ಯಶ್ರೀ ಕಾಲುವೆಗೆ ಜಿಗಿದಿದ್ದನ್ನು ಕಂಡ ಮೀನುಗಾರರು, ಆಕೆಯನ್ನು ರಕ್ಷಿಸಿ ನಿಡಗುಂದಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನು ಕಾಲುವೆ ಬಳಿ ಇಬ್ಬರು ಗಂಡು ಮಕ್ಕಳ ಶವಕ್ಕಾಗಿ ಶೋಧಕಾರ್ಯ ಮುಂದುವರೆದಿದೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...