ವಿಜಯಪುರ | ಯತ್ನಾಳ್‌ ಬೆನ್ನಿಗೆ ನಿಂತ ಮೃತ್ಯುಂಜಯ ಸ್ವಾಮೀಜಿ; ಪಂಚಮಸಾಲಿಗರ ವಿರೋಧ

Date:

ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬೆನ್ನಿಗೆ ನಿಂತಿರುವ ಕೂಡಲಸಂಗಮ ಜಯಬಸವ ಮೃತ್ಯುಂಜಯ ಸ್ವಾಮಿಗಳ ವಿರುದ್ಧ ಪಂಚಮಸಾಲಿ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ.

- Advertisement -

ವಿಜಯಪುರದ ಬಿಜೆಪಿ ಪಂಚಮಸಾಲಿ ಸಮಾಜದ ವಿಜುಗೌಡ ಪಾಟೀಲ, ಸಂಜಯ ಪಾಟೀಲ ಕನಮಡಿ, ಡಾ.ಸುರೇಶ ಬಿರಾದಾರ, ಭೀಮಾಶಂಕರ ಹದನೂರ, ರವಿಕಾಂತ ಬಗಲಿ, ಕಾಸುಗೌಡ ಬಿರಾದಾರ, ಸಂದೀಪ ಪಾಟೀಲ ಮೊದಲಾದವರು ಜಂಟಿ ಪತ್ರಿಕಾಗೋಷ್ಠಿ ನಡೆಸಿ ಶ್ರೀಗಳ ವಿರುದ್ಧ ವಾಗ್ದಾಳಿ ನಡೆಸುವುದರ ಜೊತೆಗೆ ಯತ್ನಾಳರ ವಿರುದ್ಧವೂ ಕಿಡಿ ಕಾರಿದ್ದಾರೆ. ಈ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬೆನ್ನಿಗೆ ನಿಂತಿ್ದ್ದೇವೆ ಎನ್ನುವ ಸಂದೇಶ ರವಾನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಬಿಜೆಪಿ ಮುಖಂಡ ಸಂಜಯ ಪಾಟೀಲ ಕನಮಡಿ ಮಾತನಾಡಿ, “ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ, ಹಿಂದೂತ್ವವನ್ನೇ ಉಸಿರಾಗಿಸಿಕೊಂಡ ನಾಯಕ. ಆದರೆ ಯತ್ನಾಳರ ಹಿಂದೆ ಇರುವ ಪಂಚಮಸಾಲಿ ಶ್ರೀಗಳು ತಾವು ಹಿಂದೂ ಅಲ್ಲ ಎಂದು ಹೇಳಿಕೊಂಡಿದ್ದಾರೆ. ಹಿಂದೂ ಒಂದೆಡೆ ಇರಲಿ ವೀರಶೈವ ಎಂಬ ಪದವನ್ನೇ ತಮ್ಮ ಪೀಠದ ಮುಂದೆ ಬಳಸಿಕೊಳ್ಳುತ್ತಿಲ್ಲ. ಹಿಂದೂಧರ್ಮದ ಆಚರಣೆಗಳನ್ನು ಸಹ ಖಂಡಿಸಿದ್ದ ಪಂಚಮಸಾಲಿ ಶ್ರೀಗಳು ಹಿಂದೂ ಧರ್ಮವನ್ನು ಒಡೆದು ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿವಹಿಸಿ ಕಾಂಗ್ರೆಸ್ ನಾಯಕರಿಗೆ ಸಾಥ್ ನೀಡಿದ್ದರು. ಈ ಹಿಂದೆ ವಿನಾಕಾರಣ ಕಲ್ಲು ನಾಗರಕ್ಕೆ ಹಾಲೆರೆಯುವುದು ಬೇಡ ಎಂದಿದ್ದ ಶ್ರೀಗಳು, ಈಗ ತಾವು ಬೆಂಬಲ ನೀಡುತ್ತಿರುವ ನಾಯಕರ ಭಾವಚಿತ್ರಕ್ಕೆ ದೊಡ್ಡ ಪ್ರಮಾಣದಲ್ಲಿ ಹಾಲೆರೆಯುವುದನ್ನು ಏಕೆ ನಿಲ್ಲಿಸಲು ಹೋಗಲಿಲ್ಲ” ಎಂದು ಖಾರವಾಗಿ ಪ್ರಶ್ನಿಸಿದರು.

“ಸಹಕಾರ ಮಹಾಮಂಡಳದ ಚುನಾವಣೆಯಲ್ಲಿ ಸಹಕಾರ ಭಾರತೀಯ ಅಧಿಕೃತ ಅಭ್ಯರ್ಥಿ ನಾನೇ ಇದ್ದೆ. ಎಲ್ಲ ಕಡೆಯಿಂದಲೂ ವ್ಯಾಪಕ ಬೆಂಬಲವೂ ವ್ಯಕ್ತವಾಯಿತು. ಆದರೆ ಯತ್ನಾಳರ ಪುತ್ರ ವ್ಯಾಮೋಹದಿಂದ ನನಗೆ ಸೋಲಾಯಿತು. ಬೆಳಗಾವಿಯ ಕಾಂಗ್ರೆಸ್ ಶಾಸಕರ ಸಹಾಯ ಪಡೆದು ಗೆದ್ದಿದ್ದು ಯತ್ನಾಳರು ಮರೆತಂತಿದೆ. ನಾನು ಪಂಚಮಸಾಲಿ ಸಮಾಜದ ನಾಯಕ. ನಾನು ಚುನಾವಣೆಯಲ್ಲಿ ಸೋತಾಗ ಶ್ರೀಗಳು ಕರೆ ಮಾಡಿ ಅನುಕಂಪ ತೋರುವ ಸೌಜನ್ಯವೂ ತೋರಿಲ್ಲವಲ್ಲ ಎಂಬ ನೋವು ನನಗೆ ಕಾಡುತ್ತಿದೆ” ಎಂದರು.

ಇದನ್ನೂ ಓದಿ: ವಿಜಯಪುರ | ಬೆಳೆ ಹಾನಿ; ವಿಮಾ ಕಂಪನಿ ವಿರುದ್ಧ ರೈತರ ಆಕ್ರೋಶ

ಮುಖಂಡ ಕಾಸುಗೌಡ ಬಿರಾದಾರ ಮಾತನಾಡಿ, “2023ರ ಚುನಾವಣೆಯಲ್ಲಿ ನಾನು ಸ್ಪರ್ಧಿಸಿದಾಗ ಸ್ಟಾರ್ ಪ್ರಚಾರಕರಾಗಿದ್ದ ಯತ್ನಾಳ ಅವರನ್ನು ಕರೆಯಲು ಬಂದಾಗ ಅವರು, “ಇಲ್ಲ ನೀ ಜಿಗಜಿಣಗಿ ಅನುಯಾಯಿ ಎಂದರು. ಯತ್ನಾಳರ ಅನುಯಾಯಿಗಳೆಲ್ಲರೂ ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದರು. ಇದೇ ಜಿಲ್ಲೆಯಲ್ಲಿ ಗೆಲ್ಲಿಸಲಾಗದ ನೀ ಸ್ಟಾರ್ ಪ್ರಚಾರಕ ಆಗಿ ಉಪಯೋಗ ಏನು?” ಎಂದು ನುಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...