ವಿಜಯಪುರ | ಮುಡಾ ಹಗರಣ ಪ್ರಕರಣ; ಆ.27ರಂದು ರಾಜಭವನ ಚಲೋಗೆ ಎಸ್ ಎಂ ಪಾಟೀಲ ಕರೆ

Date:

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರ ತೇಜೋವಧೆ ಖಂಡಿಸಿ ಆಗಸ್ಟ್‌ 27ರಂದು ರಾಜಭವನ ಚಲೋ ಹಮ್ಮಿಕೊಂಡಿದ್ದು, ವಿಜಯಪುರ ಜಿಲ್ಲೆಯ ಪ್ರಜ್ಞಾವಂತ ನಾಗರಿಕರು ಈ ಚಳುವಳಿಯಲ್ಲಿ ಸಹಸ್ರ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಸ್ ಎಂ ಪಾಟೀಲ(ಗಣಿಹಾರ) ಹೇಳಿದರು.

- Advertisement -

ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, “ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುತ್ತಿರುವ ಬಿಜೆಪಿ-ಜೆಡಿಎಸ್ ತಂತ್ರಗಳನ್ನು ವಿರೋಧಿಸಿ ಮತ್ತು ಪ್ರಜಾಪ್ರಭುತ್ವ ರಕ್ಷಣೆಗಾಗಿ ಈ ರಾಜಭವನ ಚಲೋ ಹಮ್ಮಿಕೊಳ್ಳಲಾಗಿದೆ. ರಾಜ್ಯಪಾಲರು ಪೂರ್ವಗ್ರಹ ಪೀಡಿತರಾಗಿ, ಸಂವಿಧಾನದ ಆಶಯಕ್ಕೆ ಧಕ್ಕೆ ತರುವಂತೆ ನಡೆದುಕೊಳ್ಳುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

“ಆದಾಯಕ್ಕೂ ಮಿತಿಮೀರಿದ ಆಸ್ತಿ ಗಳಿಕೆ, ನಿರಾಣಿಯವರ ಭ್ರಷ್ಟಾಚಾರಗಳ ಕುರಿತು ತನಿಖೆಗೆ ಅನುಮತಿ ಕೊಡಿರೆಂದು ರಾಜಭವನಕ್ಕೆ ಕೋರಿಕೆ ಸಲ್ಲಿಸಿ ವರ್ಷಗಳಾದರೂ ಈ ರಾಜ್ಯಪಾಲರು ಕೋರಿಕೆಗಳನ್ನು ಕಸದ ಬುಟ್ಟಿಗೆ ಎಸೆದು ಪಕ್ಷಪಾತ ಮಾಡಿದ್ದಾರೆ” ಎಂದು ಕಿಡಿಕಾರಿದರು.

ಕೆಪಿಸಿಸಿ ವೈದ್ಯಕೀಯ ಘಟಕದ ರಾಜ್ಯ ಮುಖಂಡ ರವಿ ಬಿರಾದಾರ ಮಾತನಾಡಿ, “ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಡಾ ವಿಚಾರದಲ್ಲಿ ಒಂದು ಸೂಜಿ ಮೊನೆಯಷ್ಟು ತಪ್ಪು ಮಾಡಿಲ್ಲವೆಂದು ಇಡೀ ರಾಜ್ಯದ ಜನ ಹೇಳುತ್ತಿದ್ದಾರೆ. ಸರ್ಕಾರಿ ದಾಖಲೆಗಳು ಹೇಳುತ್ತಿವೆ. ಆದರೆ ರಾಜಕೀಯ ದುರುದ್ದೇಶದಿಂದ ಬಿಜೆಪಿ-ಜೆಡಿಎಸ್‌ಗಳು ಸಿದ್ದರಾಮಯ್ಯನವರನ್ನು ತೇಜೋವಧೆ ಮಾಡುತ್ತಲೇ ಹೊರಟಿದ್ದಾರೆ. ಇತ್ತೀಚೆಗೆ ಪ್ರಕರಣದ ವಿಚಾರಣೆಯಾಗಿ ಉಚ್ಚನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶರು, ಮುಖ್ಯಮಂತ್ರಿಗಳು ತಪ್ಪು ಮಾಡಿದ್ದಾರಾ? ಯಾವುದಾದರೂ ದಾಖಲೆಗಳು ಇವೆಯಾ? ಎಂದು ಕೇಳಿದಾಗ ವಿರೋಧ ಪಕ್ಷಗಳ ಬಳಿ ಉತ್ತರವೇ ಇರಲಿಲ್ಲ” ಎಂದರು.

ದಲಿತ ಸಂಘರ್ಷ ಸಮಿತಿ(ಭೀಮವಾದ) ಸಂಜು ಕಾಂಬೂಗಿ ಮಾತನಾಡಿ, “ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿ ಬಹುಮತದ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸವನ್ನು ಕೂಡಲೇ ನಿಲ್ಲಿಸಬೇಕು. ಸಂವಿಧಾನ ಮತ್ತು ಒಕ್ಕೂಟ ತತ್ವದ ವಿರೋಧಿಯಾದ ರಾಜ್ಯಪಾಲರನ್ನು ಮೋದಿ ಸರ್ಕಾರ ಕೂಡಲೇ ವಾಪಸ್ಸು ಕರೆಸಿಕೊಳ್ಳಬೇಕು. ಸಿದ್ದರಾಮಯ್ಯರವರ ತನಿಖೆ ಅನುಮತಿ ಹಿಂಪಡೆಯಬೇಕ. ಪ್ರಜಾಪ್ರಭುತ್ವ ಒಕ್ಕೂಟದ ವ್ಯವಸ್ಥೆ ಮತ್ತು ರಾಜ್ಯ ಸರ್ಕಾರದ ಸಾರ್ವಭೌಮತೆಯನ್ನು ಸಂರಕ್ಷಿಸಬೇಕು. ಕನ್ನಡ ನಾಡಿನ ಘನತೆಯನ್ನು ಕಾಪಾಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಪ್ರಜಾಪ್ರಭುತ್ವದ ರಕ್ಷಣೆಗಾಗಿ ರಾಜಭವನ ಚಲೋ : ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ

“ನಾಡಿನ ಪ್ರಜ್ಞಾವಂತರು, ಪ್ರಗತಿಪರರು, ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಗಳ ಬಂಧುಗಳು, ಲಕ್ಷಲಕ್ಷ ಸಂಖ್ಯೆಯಲ್ಲಿ ಭಾಗವಹಿಸಿ ಈ ಹೋರಾಟವನ್ನು ಯಶಸ್ವಿಗೊಳಿಸಬೇಕು” ಎಂದರು.

ಕಾಂಗ್ರೆಸ್ಸಿನ ಮುಖಂಡರುಗಳಾದ ಫಯಾಜ್ ಕಲಾದಗಿ, ಮಲ್ಲು ಬಿದರಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...