ವಿಜಯಪುರ | ಮುಲ್ಲಾ ಸಮಾಜವು ಪ್ರತಿಯೊಂದು ಸಮುದಾಯದೊಂದಿಗೆ ಉತ್ತಮ ಒಡನಾಟ ಹೊಂದಬೇಕು: ಶಾಕಿರ್ ಸನದಿ

Date:

Advertisements

ಮುಲ್ಲಾ ಎಂಬದು ಶ್ರೇಷ್ಠ ಪದ. ಸಮಾಜದಲ್ಲಿ ಉನ್ನತ ಗೌರವ ಹೊಂದಿರುವ ಎಂದರ್ಥ. ಮುಲ್ಲಾ ಸಮಾಜವು ಪ್ರತಿಯೊಂದು ಸಮಾಜದೊಂದಿಗೆ ಉತ್ತಮ ಒಡನಾಟ ಹೊಂದುವುದರೊಟ್ಟಿಗೆ ಸಮಾಜದ ಏಳಿಗೆಗೆ ಒಗ್ಗಟ್ಟಾಗಬೇಕು ಎಂದು ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕಿರ್ ಸನದಿ ತಿಳಿಸಿದರು.

ವಿಜಯಪುರ ನಗರದ ಕಂದಗಲ್ ಹನಮಂತರಾಯ ರಂಗಮಂದಿರದಲ್ಲಿ ನಡೆದ ಕರ್ನಾಟಕ ಮುಲ್ಲಾ ಅಸೋಸಿಯೇಷನ್ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಮುಲ್ಲಾ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಶಾಸಕ ವಿಠ್ಠಲ ಕಟಕದೊಂಡ ದೋಂಡಿಬ ಹಾಗೂ ರಾಜುಗೌಡ ಪಾಟೀಲರು ಅಸೋಸಿಯೇಷನ್ ಲೋಗೋ ಬಿಡುಗಡೆಗೊಳಿಸಿ ಮಾತನಾಡಿ, “ಗ್ರಾಮೀಣ ಭಾಗದ ಮುಲ್ಲಾ ಸಮುದಾಯಕ್ಕೆ ಗೌರವವಿದೆ. ಊರಿನ ಪ್ರತಿಯೊಂದು ಕಾರ್ಯಕ್ರಮಕ್ಕೆ ಈ ಸಮಾಜದವರು ಕೈಜೋಡಿಸುತ್ತಾರೆ. ಮುಲ್ಲಾ ಸಮುದಾಯದ ಪರವಾಗಿ ವಿಧಾನಸಭೆಯಲ್ಲಿ ಧ್ವನಿ ಎತ್ತಲಾಗುವುದು” ಎಂದು ಭರವಸೆ ನೀಡಿದರು.

Advertisements

ಧಾರ್ಮಿಕ ಮುಖಂಡ ಮೊಹಮ್ಮದ್ ತನ್ವೀರ್ ಪೀರಾ ಆಸ್ಮಿ ಸಾನಿಧ್ಯ ವಹಿಸಿ ಮಾತನಾಡಿ, “ಮುಲ್ಲಾ ಸಮುದಾಯ ಸಾಮಾಜಿಕ, ಆರ್ಥಿಕ, ರಾಜಕೀಯ ಶಕ್ತಿಯಾಗಿ ಬೆಳೆಯಲು ಪ್ರತಿಯೊಬ್ಬರೂ ಒಗ್ಗಟ್ಟಾಗಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಹಾಸನ | ಜೀತ ಕಾರ್ಮಿಕ ಪ‌ದ್ದತಿ ಆಚರಣೆ ಶಿಕ್ಷಾರ್ಹ ಅಪರಾಧ: ಪಿಡಿಒ ಆರ್‌ ಪ್ರಭಾ

ಗುಳೇದ ಗುಡ್ಡದ ಆಸಿಫ್ ಖಾದ್ರಿ ಸಾಹೇಬ್, ಮನಗೂಳಿಯ ಡಾ. ಫಿರೋಜ ಹುಸೇನ್ ಆಶೀರ್ವವಚನ ನೀಡಿದರು. ಈ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮುಲ್ಲಾ ಬಾಂಧವರನ್ನು ಸನ್ಮಾನಿಸಲಾಯಿತು.

ಮಾಜಿ ಶಾಸಕ ರಾಜು ಆಲಗೂರ, ಎಸ್ ಎಂ ಪಾಟೀಲ ಗಣಿಹಾರ, ಎಂ ಸಿ ಮುಲ್ಲಾ, ಶ್ರೀನಾಥ ಪೂಜಾರಿ, ಮಹಿಬೂಬು ಮುಲ್ಲಾ ಬಳಬಟ್ಟಿ, ಇಮ್ತಿಯಾಜ ಮುಲ್ಲಾ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X