ವಿಜಯಪುರ | ಗೊಂದಲದಲ್ಲೇ ನಡೆದಿದ್ದ ಪಾಲಿಕೆ ಮೇಯರ್‌ ಚುನಾವಣೆ; ಆ.7ರಂದು ಫಲಿತಾಂಶ

Date:

ವಿಜಯಪುರ ಮಹಾನಗರ ಪಾಲಿಕೆಯ 22ನೇ ಅವಧಿಗೆ ಕಳೆದ ಜನವರಿ, ಫೆಬ್ರವರಿ ತಿಂಗಳಲ್ಲಿ ಜರುಗಿದ ಮೇಯರ್ ಹಾಗೂ ಉಪ ಮೇಯರ್ ಆಯ್ಕೆಯ ಚುನಾವಣಾ ಫಲಿತಾಂಶವನ್ನು ಘೋಷಣೆ ಮಾಡಲು ಪಾಲಿಕೆಯ ಸಭಾಂಗಣದಲ್ಲಿ ಆ.7ರಂದು ಮಧ್ಯಾಹ್ನ 1 ಗಂಟೆಗೆ ಸಭೆ ಆಯೋಜಿಸಲಾಗಿದೆ ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಎಸ್ ಬಿ ಶೆಟ್ಟಣ್ಣವರ ತಿಳಿಸಿದ್ದಾರೆ.

- Advertisement -

ಕಳೆದ ಜ.27ರಂದು ಮೇಯ‌ರ್ ಹಾಗೂ ಉಪ ಮೇಯರ್ ಚುನಾವಣೆ ನಿಗದಿಯಾಗಿತ್ತು. ಅದರಂತೆ ಆಯ್ಕೆ ಪ್ರಕ್ರಿಯೆ ನಡೆದು ಹಿಂದುಳಿದ ವರ್ಗಕ್ಕೆ ಮೀಸಲಾಗದ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಶೋಕ ನ್ಯಾಮಗೊಂಡ ಹಾಗೂ ಬಿಜೆಪಿಯಿಂದ ಎಂ ಎಸ್ ಕರಡಿ ಅಭ್ಯರ್ಥಿಯಾಗಿದ್ದರು. ಸಾಮಾನ್ಯ ಮಹಿಳೆಗೆ ಮೀಸಲಾದ ಉಪ ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ನಿಂದ ವಿಮಲಾ ರಫೀಕ್ ಕಾಣೆ ಹಾಗೂ ಬಿಜೆಪಿಯಿಂದ ಪಕ್ಷೇತರ ಸದಸ್ಯೆ ಸುಮಿತ್ರಾ ರಾಜು ಜಾಧವ ಅಭ್ಯರ್ಥಿಯಾಗಿದ್ದರು. ಆದರೆ, ಉಪ ಮೇಯರ್ ಆಯ್ಕೆ ವೇಳೆ ಗೊಂದಲ, ಗದ್ದಲ ಉಂಟಾಗಿದ್ದರಿಂದ ಉಪ ಮೇಯರ್ ಆಯ್ಕೆ ಪ್ರಕ್ರಿಯೆನ್ನು ಮುಂದೂಡಿದ್ದಾಗಿ ಪ್ರಾದೇಶಿಕ ಆಯುಕ್ತರು ಘೋಷಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಉಪ ಮೇಯರ್ ಸ್ಥಾನಕ್ಕೆ ಮುಂದೂಡಿದ್ದ ಚುನಾವಣೆ ಫೆ.12ರಂದು ನಿಗದಿಯಾಗಿ ನಡೆಯಿತು. ಆದರೆ, ಕೆಲ ವಿಚಾರಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಗಿದ್ದು, ಫಲಿತಾಂಶ ಘೋಷಿಸದಂತೆ ನ್ಯಾಯಾಲಯದ ನಿರ್ದೇಶನ ನೀಡಿತ್ತು. ಕಾಂಗ್ರೆಸ್‌ನ ನಾಲ್ವರು ಪರಿಷತ್ ಸದಸ್ಯರ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಿದ್ದನ್ನು ಪ್ರಶ್ನಿಸಿ ಬಿಜೆಪಿ ರಿಟ್ ಅರ್ಜಿ ಸಲ್ಲಿಸಿತ್ತು. ಚುನಾವಣೆ ನಡೆಸಬಹುದು, ಆದರೆ ಮುಂದಿನ ಆದೇಶದವರೆಗೆ ಫಲಿತಾಂಶ ಪ್ರಕಟಿಸದಂತೆ ಕೋರ್ಟ್ ಮಧ್ಯಂತರ ಆದೇಶ ನೀಡಿತ್ತು.

ಅಚ್ಚರಿಯ ಬೆಳವಣಿಗೆಯಲ್ಲಿ ಪಾಲಿಕೆ ಸದಸ್ಯರು ನಿಯಮ ಪ್ರಕಾರ ತಮ್ಮ ಹಾಗೂ ಕುಟುಂಬದ ಆಸ್ತಿ ವಿವರ ಸಲ್ಲಿಸಿಲ್ಲ. ಹೀಗಾಗಿ ಅವರ ಸದಸ್ಯತ್ವ ರದ್ದುಗೊಳಿಸಬೇಕೆಂದು ಕೆಲವರು ನ್ಯಾಯಾಯದ ಮೊರೆ ಹೋಗಿದ್ದರು. ಸದಸ್ಯತ್ವ ರದ್ದುಗೊಳಿಸುವುದು ಸರಕಾರದ ವಿವೇಚನೆಗೆ ಬಿಟ್ಟಿದ್ದು ಎಂದು ಕೋರ್ಟ್ ತೀರ್ಪು ನೀಡಿತ್ತು.‌

ಪಾಲಿಕೆಯ ಆಡಳಿತಕ್ಕಾಗಿ ಕಾಂಗ್ರೆಸ್-ಬಿಜೆಪಿ ನಡುವೆ ರಾಜಕೀಯ ಹಗ್ಗ-ಜಗ್ಗಾಟ, ಪವರ್ ಪಾಲಿಟಿಕ್ಸ್ ಬೆಳವಣಿಗೆಗಳು ನಡೆದು ಕೊನೆಗೆ ಸರಕಾರವೇ ಆಸ್ತಿ ವಿವರ ಸಲ್ಲಿಸದ ಕಾರಣಕ್ಕೆ ಕಾರ್ಪೋರೇಟರ್‌ಗಳ ಸದಸ್ಯತ್ವ ರದ್ದುಗೊಳಿಸಿ ಆದೇಶಿಸಿತ್ತು. ಮೇಯರ್-ಉಪ ಮೇಯರ್ ಚುನಾವಣೆಯ ಫಲಿತಾಂಶವೂ ಪ್ರಕಟಗೊಳ್ಳದೆ, ಚುನಾಯಿತ ಸದಸ್ಯರ ಅಧಿಕಾರವೂ ಇರಲಿಲ್ಲ. ಆಯುಕ್ತರಿಂದಲೇ ಪಾಲಿಕೆ ಕಾರ್ಯಚಟುವಟಿಕೆ ನಡೆದಿದೆ.

ತಮ್ಮ ಸದಸ್ಯತ್ವ ಉಳಿಸಿಕೊಳ್ಳಲು ಚುನಾಯಿತರಾದವರು ರಾಜಕೀಯ ನಾಯಕರ ಮನೆ ಬಾಗಿಲು ಬಡಿದು ಕಸರತ್ತು ನಡೆಸಿದ್ದರು. ಆದರೀಗ ಮೇಯರ್ -ಉಪ ಮೇಯರ್ ಚುನಾವಣೆಯ ಫಲಿತಾಂಶ ಘೋಷಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಆದರೆ, ಚುನಾಯಿತರಾದವರ ಸದಸ್ಯತ್ವದ ಬಗ್ಗೆ ರಾಜಕೀಯ ಕುತೂಹಲ ಕೆರಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...