ವಿಜಯಪುರ | ನಾಲತವಾಡ ಪ. ಪಂಚಾಯತ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ: ಗರಿಗೆದರಿದ ರಾಜಕೀಯ ಚಟುವಟಿಕೆ!

Date:

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣ ಪಂಚಾಯತಿಯ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲಾತಿ ಘೋಷಣೆಯಾಗುತ್ತಿದ್ದಂತೆ ಸದಸ್ಯರ ಪಾಳಯದಲ್ಲಿ ತೆರೆಮರೆಯಲ್ಲಿ ಭಾರೀ ರಾಜಕೀಯ ಬೆಳವಣಿಗೆ ಗರಿಗೆದರಿದೆ.

- Advertisement -

ಒಟ್ಟು 14 ಸದಸ್ಯರ ಬಲ ಹೊಂದಿರುವ ನಾಲತವಾಡ ಪಟ್ಟಣ ಪಂಚಾಯಿತಿಗೆ ಕಾಂಗ್ರೆಸ್ 9, ಜೆಡಿಎಸ್ 1 ಹಾಗೂ ಪಕ್ಷೇತರ 4 ಸದಸ್ಯರನ್ನು ಒಳಗೊಂಡಿದೆ. ಕಾಂಗ್ರೆಸ್‌ ಬೆಂಬಲವಿರುವವರಿಗೆ ನಿಚ್ಚಳ ಬಹುಮತವಿದೆ. ಹೀಗಾಗಿ, ಕಾಂಗ್ರೆಸ್ ಪಕ್ಷದಲ್ಲಿ 4 ಜನರ ಪ್ರಬಲ ಪೈಪೋಟಿ ಇದ್ದು, ಯಾರನ್ನು ಅಧ್ಯಕ್ಷ ಮಾಡಬೇಕೆಂಬ ಸವಾಲು ಕಾಂಗ್ರೆಸ್ ಪಕ್ಷಕ್ಕೆ ಎದುರಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ವಾರ್ಡ್ ನಂಬರ್ 8 ರ ಅಭ್ಯರ್ಥಿ ಬಸಿರಾ ಬೇಗಮ್ ಮೂಲಿಮನಿ, ವಾರ್ಡ್ ನಂ.7 ರ ಅಭ್ಯರ್ಥಿ ಲಲಿತಾ ದೊಡ್ಡನಗೌಡ ಗೊರಬಾಳ, ವಾರ್ಡ್ ನಂ.4 ವಿಜಯಲಕ್ಷ್ಮಿ ಇಲಕಲ್ಲ, ವಾರ್ಡ್ ನಂ.1 ರಾಜಬಿ ನಡದಾಳ ಅಧ್ಯಕ್ಷ ಸ್ಥಾನಕ್ಕೆ ಹೆಸರು ಕೇಳಿ ಬರುತ್ತಿದೆ.

ಅಧ್ಯಕ್ಷರನ್ನಾಗಿ ಯಾರನ್ನು ಆಯ್ಕೆ ಮಾಡಬೇಕೆಂಬುದಕ್ಕೆ ಈಗಾಗಲೇ ಲಾಬಿ ಕೂಡ ಜೋರಾಗಿದೆ. ನಾಲ್ಕು ಜನರಲ್ಲಿ ಶಾಸಕರಿಗೆ ಒಲವು ಯಾರಿಗೆ? ಅಧ್ಯಕ್ಷ ಸ್ಥಾನ ಯಾರಿಗೆ ಸಿಗುವುದು ಎನ್ನುವುದೇ ಸದ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಉಪಾಧ್ಯಕ್ಷ ಸ್ಥಾನಕ್ಕೆ ಹೆಚ್ಚು ಚರ್ಚೆ

ಸಾಮಾನ್ಯ ಕ್ಷೇತ್ರದ ಉಪಾಧ್ಯಕ್ಷ ಸ್ಥಾನದ ಬಗ್ಗೆ ಪಟ್ಟಣದಲ್ಲಿ ಈಗ ಹೆಚ್ಚು ಚರ್ಚೆ ಶುರುವಾಗಿದೆ. ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಯುವಕರ ತಂಡ ಪಕ್ಷೇತರವಾಗಿ ಪ್ರತ್ಯೇಕವಾಗಿ ಸ್ಪರ್ಧೆ ಮಾಡಿದ್ದರು. ಇದರಲ್ಲಿ ಇವರಿಬ್ಬರ ಕಾರ್ಯತಂತ್ರ ವರ್ಕೌಟ್ ಆಗಿ ಬಿಜೆಪಿಗೆ ಖಾತೆ ತೆರೆಯದಂತೆ ಮಾಡಿದ್ದರು. ಅದಾದ ನಂತರ, ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಹಾಗೂ ಜೆಡಿಎಸ್ ಸದಸ್ಯರು ಸೇರಿದಂತೆ ಪ್ರತಿಷ್ಠಿತ ದೇಶಮುಖ ಮನೆತನವು ಕೊಡಾ ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿತ್ತು.

ಪಕ್ಷೇತರರನ್ನು ಕಟ್ಟಿದ್ದ ಮುಖಂಡ ಮಹಾಂತೇಶ ಗಂಗನಗೌಡರ ಕೊಡಾ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು. ಆದರೆ, ಈಗ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವುದರಿಂದ ಎಲ್ಲಿಲ್ಲದ ಪೈಪೋಟಿ ಶುರುವಾಗಿದೆ.

ಇದರಲ್ಲಿ ಪ್ರಮುಖವಾಗಿ ಪಕ್ಷೇತರ ( ಕಾಂಗ್ರೆಸ್ ಬೆಂಬಲಿತ) ಸದಸ್ಯರಾದ ಶರಣಬಸು ಗಂಗನಗೌಡರ, ಬಸವರಾಜ ಗಂಗನಗೌಡರ, ಕಾಂಗ್ರೆಸ್ ಸದಸ್ಯ ಸಂಗಪ್ಪ ಬಾರಡ್ಡಿ ಮತ್ತು ಜೆಡಿಎಸ್ ಸದಸ್ಯ( ಕಾಂಗ್ರೆಸ್ ಬೆಂಬಲಿತ ) ಬಾಬು ಕ್ಷತ್ರಿ ಅವರ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ.

ಪಟ್ಟಣ ಪಂಚಾಯಿತಿ ಚುನಾವಣೆ ನಂತರ ಪಕ್ಷೇತರ ಟೀಮ್ ದೇಶಮುಖ ವಾಡೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಶಾಸಕರ ಗೆಲುವಿಗೆ ಶ್ರಮಿಸಿದ್ದರು. ಬಳಿಕದ ಎಲ್ಲಾ ಸಭೆ ಸಮಾರಂಭದಲ್ಲಿ ಮುಂಚೂಣಿಯಲ್ಲಿ ಭಾಗವಹಿಸಿದ್ದರು.ಆದರೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಹೊರಬಿದ್ದ ಬಳಿಕ ಪಕ್ಷೇತರರಿಗೆ ಉಪಾಧ್ಯಕ್ಷ ಸ್ಥಾನ ನೀಡಬೇಕೆಂಬ ಲಾಭ ಮಾಡುತ್ತಿದ್ದಾರೆ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಆದರೆ, ಮೂಲ ಕಾಂಗ್ರೆಸ್ಸಿಗರು ಎಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷೇತರರು ಅಂತ ಹೇಳಿಕೊಂಡು ತಿರುಗಾಡಿದರೆ ಹೇಗೆ? ಸಾಮಾನ್ಯ ಸ್ಥಾನಕ್ಕೆ ಲಾಬಿ ಮಾಡಿ.ಆದರೆ, ಪಕ್ಷೇತರ ಟೀಮ್ ಅನ್ನುವುದು ಸೂಕ್ತ ಕಾಣುವುದಿಲ್ಲಾ ಎಂಬ ಆಕ್ಷೇಪಗಳು ಕೂಡ ವ್ಯಕ್ತವಾಗಿದೆ.

ಇದನ್ನು ಓದಿದ್ದೀರಾ? ರಾಯಚೂರು | ಚಿಕ್ಕಲಪರ್ವಿ ಬ್ರಿಡ್ಜ್ ಕಮ್ ಬ್ಯಾರೇಜ್ ಕಾಮಗಾರಿ ಶೀಘ್ರವೇ ಆರಂಭ: ಸಚಿವ ಬೋಸರಾಜು

ಒಟ್ಟಿನಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಈಗ ಶಾಸಕರಾದ ಸಿ ಎಸ್ ನಾಡಗೌಡ ಹಾಗೂ ದೇಶಮುಖ ಮನೆತನದವರು ಕೂಡಿಕೊಂಡು ನಿರ್ಣಯ ಮಾಡುತ್ತಾರೆ. ಇವರು ಯಾರನ್ನು ಆಯ್ಕೆ ಮಾಡುತ್ತಾರೆ ಅವರೇ ಅಧ್ಯಕ್ಷ-ಉಪಾಧ್ಯಕ್ಷ. ಯಾರಿಗೆ ಕೊಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ರಮೇಶ್ ಎಸ್ ಹೊಸಮನಿ
ರಮೇಶ ಎಸ್ ಹೊಸಮನಿ
+ posts

ವಿಜಯಪುರ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ರಮೇಶ ಎಸ್ ಹೊಸಮನಿ
ರಮೇಶ ಎಸ್ ಹೊಸಮನಿ
ವಿಜಯಪುರ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...